• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ಒಂದು ವೇಳೆ ಸ್ಪಂದಿಸದಿದ್ದರೆ, ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಕಾರ್ಖಾನೆಯನ್ನು ಆರಂಭಿಸುತ್ತೇವೆ – ಮೈಶುಗರ್ ಹೋರಾಟದಲ್ಲಿ ಸಿದ್ದರಾಮಯ್ಯ

Any Mind by Any Mind
October 10, 2021
in ಕರ್ನಾಟಕ
0
ಸಿಎಂ ಒಂದು ವೇಳೆ ಸ್ಪಂದಿಸದಿದ್ದರೆ, ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಕಾರ್ಖಾನೆಯನ್ನು ಆರಂಭಿಸುತ್ತೇವೆ – ಮೈಶುಗರ್ ಹೋರಾಟದಲ್ಲಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಮೈಸೂರು ಸಕ್ಕರೆ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸುವಂತೆ ಆಗ್ರಹಿಸಿ ರೈತರ ಹಿತ ರಕ್ಷಣಾ ಸಮಿತಿ ಮಂಡ್ಯದಲ್ಲಿ ನಡೆದ ಧರಣಿ ಸತ್ಯಾಗ್ರಹದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭಾಗವಹಿಸಿದರು.

ADVERTISEMENT

ಧರಣಿಯಲ್ಲಿ ಮಾತನಾಡಿದ ಅವರು, ʼರಾಜ್ಯದಲ್ಲಿರುವ 65 ಸಕ್ಕರೆ ಕಾರ್ಖಾನೆಗಳ ಪೈಕಿ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆ ಎಂದರೆ ಮೈಶುಗರ್ ಕಾರ್ಖಾನೆ. ಹಾಗಾಗಿ ಈ ಕಾರ್ಖಾನೆಯನ್ನು ಖಾಸಗೀಕರಣಗೊಳಿಸದೆ ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸುತ್ತೇನೆ. ಸ್ವಾತಂತ್ರ್ಯ ಪೂರ್ವದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಂದ ಸ್ಥಾಪನೆಯಾದ ಮೈಶುಗರ್ ಸಕ್ಕರೆ ಕಾರ್ಖಾನೆ ಹಲವು ವರ್ಷಗಳ ಕಾಲ ಲಾಭದಲ್ಲೇ ಇತ್ತು, ನಂತರದಲ್ಲಿ ಕಾರಣಾಂತರಗಳಿಂದ ನಷ್ಟದ ಸುಳಿಗೆ ಸಿಲುಕಿತು. ಆದರೆ ಈ ನಷ್ಟಕ್ಕೆ ರೈತರು ಹೊಣೆಯಲ್ಲ, ಸರ್ಕಾರ ಹೊಣೆ ಎಂದು ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ʼಸದ್ಯ ಸರ್ಕಾರಿ ಸ್ವಾಮ್ಯದ ಹಲವು ಕಾರ್ಖಾನೆಗಳು, ಸಂಸ್ಥೆಗಳು ನಷ್ಟದಲ್ಲಿವೆ.‌ ಹಾಗೆಂದ ಮಾತ್ರಕ್ಕೆ ಎಲ್ಲವನ್ನು ಮಾರಾಟ ಮಾಡೋದ? ನಷ್ಟಕ್ಕೆ ಕಾರಣಗಳೇನು ಎಂಬುದನ್ನು ಪತ್ತೆಹಚ್ಚಿ, ಅವುಗಳನ್ನು ಪುನರುಜ್ಜೀವನಗೊಳಿಸುವ ಕೆಲಸ ಸರ್ಕಾರ ಮಾಡಬೇಕು. ಅನ್ನದಾನಿ ಅವರು ಶೂನ್ಯವೇಳೆಯಲ್ಲಿ ಮೈಶುಗರ್ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಸರ್ಕಾರದ ಬಳಿ ಉತ್ತರ ಕೇಳಿದ್ದರು. ಆಗ ನಾನು ಮಧ್ಯಪ್ರವೇಶಿಸಿ ಇದು ಅತ್ಯಂತ ಪ್ರಮುಖ ವಿಚಾರವಾದ್ದರಿಂದ ಕನಿಷ್ಟ ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಸಭಾಧ್ಯಕ್ಷರಲ್ಲಿ ಒತ್ತಾಯ ಮಾಡಿದ್ದೆʼ ಎಂದು ಹೇಳಿದ್ದಾರೆ.

ಮುಂದೆ ಮಾತನಾಡಿದ ಅವರು ʼನನ್ನ ಒತ್ತಾಯಕ್ಕೆ ಮಣಿದು ಸಭಾಧ್ಯಕ್ಷರು ಸದನದಲ್ಲಿ ಚರ್ಚೆಗೆ ಅವಕಾಶ ನೀಡಿದ್ದರು. ನಾನು ಕೂಡ ಹಲವು ಅಂಶಗಳನ್ನು ಸರ್ಕಾರದ ಗಮನಕ್ಕೆ ತಂದು ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳುವಂತೆ ಒತ್ತಾಯಿಸಿದೆ. ಮೊದಲಿಗೆ ಸರ್ಕಾರ ನೇಮಿಸುತ್ತಿರುವ ವ್ಯವಸ್ಥಾಪಕ ನಿರ್ದೇಶಕರಿಗೆ ಈ ಕಾರ್ಖಾನೆಯ ಬಗ್ಗೆ ಆಸಕ್ತಿ ಇಲ್ಲ. ಹೀಗಾದಾಗ ಕಾರ್ಖಾನೆ ಲಾಭದ ಹಾದಿಗೆ ಮರಳುವುದಾದರೂ ಹೇಗೆ? ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಕಾರ್ಖಾನೆ ಉಳಿಯಬೇಕು ಎಂಬ ಉದ್ದೇಶದಿಂದ ರೂ. 145 ಕೋಟಿ ಅನುದಾನ ನೀಡಿದ್ದೆʼ ಎಂದಿದ್ದಾರೆ.

ʼಕಾರ್ಖಾನೆಗೆ ಸಂಬಂಧಿಸಿದ ಆಸ್ತಿ ಬೆಂಗಳೂರು, ಮೈಸೂರು ಸೇರಿದಂತೆ ಹಲವು ಕಡೆಗಳಲ್ಲಿ ಇದೆ. ರವೀಂದ್ರ ಕಲಾಕ್ಷೇತ್ರದ ಎದುರು ಭಾಗದಲ್ಲಿ ಕಾರ್ಖಾನೆಗೆ ಸೇರಿದ ಭೂಮಿ ಇದೆ. ಈ ಭೂಮಿಯನ್ನು ಅಭಿವೃದ್ಧಿಪಡಿಸಿ, ಅದರಿಂದ ಬರುವ ಆದಾಯವನ್ನು ಕಾರ್ಖಾನೆಗೆ ಬಳಕೆ ಮಾಡಿಕೊಳ್ಳಬಹುದು. ಮೈಸೂರು, ಮಂಡ್ಯದ ಖಾಸಗಿ ಸಕ್ಕರೆ ಕಾರ್ಖಾನೆಗಳು ಲಾಭಗಳಿಸುತ್ತವೆ, ಆದರೆ ಸರ್ಕಾರಿ ಕಾರ್ಖಾನೆಗೆ ಏಕೆ ಲಾಭ ಗಳಿಸಲು ಸಾಧ್ಯವಿಲ್ಲ? ಸರ್ಕಾರಕ್ಕೆ ಈ ಬದ್ಧತೆ ಇರಬೇಕಲ್ಲವೇ? ಯಡಿಯೂರಪ್ಪ ಅವರು ಮಂಡ್ಯ ಜಿಲ್ಲೆಯವರು, ಅವರು ಈ ಕಾರ್ಖಾನೆಯನ್ನು ಅಭಿವೃದ್ಧಿ ಮಾಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರ ಕಾಲದಲ್ಲೇ ಖಾಸಗೀಕರಣಗೊಳಿಸುವ ಕೆಲಸ ಆರಂಭ ಮಾಡಿದರುʼ ಎಂದು ಹೇಳಿದ್ದಾರೆ.

ʼಮಂಡ್ಯದ ಜನರಿಗೆ ಮೈಶುಗರ್ ಸಕ್ಕರೆ ಕಾರ್ಖಾನೆಯೊಂದಿಗೆ ಭಾವನಾತ್ಮಕ ಸಂಬಂಧವಿದೆ. ರೈತ ಹಿತರಕ್ಷಣಾ ವೇದಿಕೆಯವರು ಮೈಸೂರಿನಲ್ಲಿ ಧರಣಿ ಮಾಡುತ್ತಿದ್ದಾರೆ, ಯಾವುದೇ ಕಾರಣಕ್ಕೂ ಸರ್ಕಾರ ಈ ಕಾರ್ಖಾನೆಯನ್ನು ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿದ್ದೆ. ನಮ್ಮ ಒತ್ತಡಕ್ಕೆ ಮಣಿದು ಸರ್ಕಾರ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ನಿರ್ಧಾರವನ್ನು ಕೈಬಿಟ್ಟಿದೆ. ಈಗ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿ, ಶೀಘ್ರ ಕಾರ್ಯಾರಂಭಗೊಳಿಸುವಂತೆ ಮತ್ತೆ ರೈತರು ಪ್ರತಿಭಟನೆ ಮಾಡುತ್ತಿದ್ದಾರೆʼ ಎಂದು ಮಾತನಾಡಿದ್ದಾರೆ.

ʼಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಬಳಿ ಕಾರ್ಖಾನೆಯ ಪುನಶ್ಚೇತನಕ್ಕೆ ಅಗತ್ಯವಿರುವ ಅನುದಾನ ನೀಡುವಂತೆ ಮಾತನಾಡುತ್ತೇನೆ. ಒಂದು ವೇಳೆ ಅವರು ಈ ಕೆಲಸ ಮಾಡದಿದ್ದರೆ ಮತ್ತೆ ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳ ಒಳಗಾಗಿ ಕಾರ್ಖಾನೆಯನ್ನು ಆರಂಭ ಮಾಡುತ್ತೇವೆ. ರೈತ ಹಿತರಕ್ಷಣಾ ವೇದಿಕೆಯವರ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಆದಷ್ಟು ಬೇಗ ಕಾರ್ಖಾನೆ ಕಾರ್ಯಾರಂಭಗೊಂಡು, ನಿಮ್ಮೆಲ್ಲರ ಹೋರಾಟ ಫಲನೀಡಲಿ ಎಂದು ಆಶಿಸುತ್ತೇನೆʼ ಎಂದು ರೈತರೊಂದಿಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tags: ಬಸವರಾಜ ಬೊಮ್ಮಾಯಿಬೆಂಗಳೂರುಮೈಶುಗರ್ಮೈಸೂರುರೈತರ ಹಿತ ರಕ್ಷಣಾ ಸಮಿವಿಪಕ್ಷ ನಾಯಕಸಕ್ಕರೆ ಕಾರ್ಖಾನೆಗಳುಸಿಎಂ
Previous Post

ʼಕಳೆದ ಲೋಕಸಭೆ ಚುನಾವಣೆಯಲ್ಲಿ ನಮಗಾದ ಸೋಲು ಕುತಂತ್ರ ರಾಜಕಾರಣಕ್ಕಾದ ಗೆಲುವುʼ – ಹೆಚ್ ಡಿ ಕುಮಾರಸ್ವಾಮಿ

Next Post

UP ಸರ್ಕಾರ ರೈತರನ್ನು ಕೊಂದ ಸಚಿವರ ಮಗನಿಗೆ ರಕ್ಷಣೆ ನೀಡುತ್ತಿದೆ : ಪ್ರಿಯಾಂಕಾ ಗಾಂಧಿ ಆರೋಪ

Related Posts

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ
ಕರ್ನಾಟಕ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

by ಪ್ರತಿಧ್ವನಿ
April 12, 2026
0

ಧಾರವಾಡ: ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.ಏಪ್ರಿಲ್...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
UP ಸರ್ಕಾರ ರೈತರನ್ನು ಕೊಂದ ಸಚಿವರ ಮಗನಿಗೆ ರಕ್ಷಣೆ ನೀಡುತ್ತಿದೆ : ಪ್ರಿಯಾಂಕಾ ಗಾಂಧಿ ಆರೋಪ

UP ಸರ್ಕಾರ ರೈತರನ್ನು ಕೊಂದ ಸಚಿವರ ಮಗನಿಗೆ ರಕ್ಷಣೆ ನೀಡುತ್ತಿದೆ : ಪ್ರಿಯಾಂಕಾ ಗಾಂಧಿ ಆರೋಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada