• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

2023ರ ಚುನಾವಣೆಯೇ ನನ್ನ ಕೊನೆ ಹೋರಾಟ – ಭಾವುಕರಾದ್ರ ಕುಮಾರಸ್ವಾಮಿ?

Any Mind by Any Mind
October 13, 2021
in ಕರ್ನಾಟಕ, ರಾಜಕೀಯ
0
ಸಿದ್ಧರಾಮಯ್ಯನ ಬಳಿಕ RSS ಬೆನ್ನು ಬಿದ್ದ ಹೆಚ್‌ ಡಿ ಕುಮಾರಸ್ವಾಮಿ: ಸಂಘಕ್ಕೆ ಮಗ್ಗುಲ ಮುಳ್ಳಾಯಿತೇ HDKಯ ಈ ಬದಲಾವಣೆ ?
Share on WhatsAppShare on FacebookShare on Telegram

ಮುಂದಿನ 2023ರ ಚುನಾವಣೆಯೇ ಕೊನೆ ಹೋರಾಟ ಎಂದು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಎಮೋಷನಲ್‌ ಟ್ರಂಪ್‌ ಕಾರ್ಡ್‌ ಪ್ಲೇ (emotional trump card) ಮಾಡಿದ್ದಾರೆ.

ADVERTISEMENT

ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಕುತಂತ್ರಕ್ಕೆ ನಾನೇ ಬಲಿಪಶುವಾಗಿದ್ದೇನೆ, ಜಾತ್ಯತೀತ ಜನತಾದಳ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮಂಗಳವಾರ ಮೈಸೂರಿನಲ್ಲಿ ಭಾವನಾತ್ಮಕವಾಗಿ ಮಾತಾಡಿ, 2023 ವಿಧಾನಸಭಾ ಚುನಾವಣೆ ನನ್ನ ಕೊನೆಯ ರಾಜಕೀಯ ಹೋರಾಟ ಎಂದು ಮತ್ತೊಮ್ಮೆ ಎಮೋಷನಲ್ ಟ್ರಂಪ್ ಕಾರ್ಡ್ ಪ್ಲೇ ಮಾಡಿದ್ದಾರೆ.

ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾಯಕನಾಗಿ ಬೆಳೆಸಿದ ಪಕ್ಷಕ್ಕೆ ಸಿದ್ದರಾಮಯ್ಯ ಅವರು ಯಾವುದೇ ಕೃತಜ್ಞತೆಯನ್ನು ಹೊಂದಿಲ್ಲ. ನಾನು ಅಥವಾ ದೇವೇಗೌಡರು ಸಿದ್ದರಾಮಯ್ಯಗೆ ಎಂದಿಗೂ ದ್ರೋಹ ಮಾಡಲಿಲ್ಲ, ಆದರೆ ಅವರು ನಮ್ಮನ್ನು ರಾಜಕೀಯವಾಗಿ ಮುಗಿಸಲು ಬಯಸಿದ್ದರು. 2023ರ ಚುನಾವಣೆ ನನ್ನ ಕೊನೆಯ ಹೋರಾಟವಾಗಿದೆ. ಕಾರಣ ನಾನು ಅಧಿಕಾರಕ್ಕೆ ಬರಬೇಕು. ಮುಖ್ಯಮಂತ್ರಿ ಆಗಬೇಕೆಂದಲ್ಲ, 2 ಬಾರಿ ಬಹುಮತ ಇಲ್ಲದ ಸರ್ಕಾರದಲ್ಲಿ ದೇವರ ಆಶೀರ್ವಾದದೊಂದಿಗೆ ಮುಖ್ಯಮಂತ್ರಿ ಆಗಿದ್ದೇನೆ. ಒಂದು ಸ್ವತಂತ್ರವಾದ ಸರ್ಕಾರವನ್ನು 5 ವರ್ಷ ನಡೆಸಲು ನಿಮ್ಮ ಆಶೀರ್ವಾದ ಕೊಡಿ ಮುಂದಿನ 2023ರ ಚುನಾವಣೆಯೇ ಕೊನೆ ಹೋರಾಟ ಎಂದು ಭಾವನಾತ್ಮಕವಾಗಿ ಮಾತಾಡಿದ್ದಾರೆ.

ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಅದೇ ನನ್ನ ಕೊನೆಯ ಹೋರಾಟ. ಜನರ ಕಷ್ಟ ಬಗೆಹರಿಸಲು ಹೋರಾಟ ಮಾಡುತ್ತೇನೆ. 5 ಯೋಜನೆಗಳ ಮೂಲಕ ಜನರ ಕಷ್ಟ ಬಗೆಹರಿಸುತ್ತೇನೆ. ಸ್ವತಂತ್ರವಾಗಿ ಅಧಿಕಾರ ಮಾಡಲು ಅವಕಾಶ ನೀಡಿ ಎಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ನಾನು ಆ ಭಾಗ್ಯ ಕೊಡ್ತಿನಿ ಈ ಭಾಗ್ಯ ಕೊಡ್ತಿನಿ ಅಂತ ಹೇಳಲ್ಲ. 10 ಕೆ.ಜಿ ಅಕ್ಕಿ ಕೊಡ್ತಿನಿ ಅಂತ ಹೇಳಲ್ಲ. 10-15 ಕೆ.ಜಿ ಪುಕ್ಕಟೆ ಅಕ್ಕಿ ಕೊಟ್ಟು ಬಿಕ್ಷುಕರನ್ನಾಗಿ ಮಾಡಲ್ಲ. ನಾನು ನಿಮ್ಮನ್ನ ಸ್ವಾವಲಂಬಿಗಳನ್ನಾಗಿ ಮಾಡಬೇಕು. ನನ್ನ ಪಂಚರತ್ನ ಯೋಜನೆಗಳ ಮೂಲಕ ಈ ಕಾರ್ಯ ಮಾಡುತ್ತೇನೆ. ಜನರನ್ನ ಸ್ವಾಭಿಮಾನಿಗಳನ್ನಾಗಿ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಆ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.

ಸಿಂದಗಿ ಉಪಚುನಾವಣೆ ಕುರಿತು ಮಾತನಾಡಿರುವ ಅವರು, ಸಿಂದಗಿಯಲ್ಲಿ ಕಾಂಗ್ರೆಸ್ ಮೂರನೇ ಸ್ಥಾನದಲ್ಲಿದೆ. ಕಳೆದ 15 ವರ್ಷದಿಂದ ಅಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ನೇರ ಹಣಾಹಣಿ ನಡೆದಿತ್ತು. ಈ ಬಾರಿ ಕಾಂಗ್ರೆಸ್‌ನವರು ನಮ್ಮ ಪಕ್ಷದಿಂದ ಹೈಜಾಕ್‌ ಮಾಡಿಕೊಂಡು ಹೋಗಿ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ನಾವು ಸುಸಂಸ್ಕೃತ ಹೆಣ್ಣು ಮಗಳನ್ನು ಅಭ್ಯರ್ಥಿ ಮಾಡಿದ್ದೇವೆ. ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ನಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುತ್ತೇವೆ ಎಂದಿದ್ದಾರೆ.

ಕಳೆದ 2018ರ ಚುನಾವಣೆಯಲ್ಲಿಯೂ ಸಹ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಇದೇ ರೀತಿ ಭಾವನಾತ್ಮಕ ಟ್ರಂಪ್ ಕಾರ್ಡ್ ಒಂದನ್ನು ಪ್ಲೇ ಮಾಡಿ ರಾಮನಗರೆ ಮತ್ತು ಚನ್ನಪಟ್ಟಣ ಎರಡು ಕ್ಷೇತ್ರದಲ್ಲೂ ಜಯಗಳಿಸಿದ್ದರು. ಆದರೆ ಚುನಾವಣೆಗೆ ಇನ್ನು ಎರಡು ವರ್ಷ ಇರುವಾಗಲೇ ಮತ್ತೊಮ್ಮೆ ಈ ಟ್ರಂಪ್ ಕಾರ್ಡ್ ಉಪಯೋಗ ಮಾಡುತ್ತಿದ್ದು ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಕತೆ ಏನಾಗುತ್ತದೆ ಎಂಬುದನ್ನು ನೋಡಬೇಕಿದೆ.

Tags: BJPCongress PartyCovid 19JDSJDS Karnatakaಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅವರ ತಂದೆ ಇದ್ದ ಹುದ್ದೆ ಪುಟಗೋಸಿ ಹುದ್ದೆಯಾ; ಹೆಚ್‌ಡಿಕೆ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

Next Post

ಮಾಜಿ ಸಿಎಂ ಗಳ RSS ಟೀಕೆಯ ಹಿಂದಿನ ಅಸಲೀ ಉದ್ದೇಶವೇನು?

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ಮಾಜಿ ಸಿಎಂ ಗಳ RSS ಟೀಕೆಯ ಹಿಂದಿನ ಅಸಲೀ ಉದ್ದೇಶವೇನು?

ಮಾಜಿ ಸಿಎಂ ಗಳ RSS ಟೀಕೆಯ ಹಿಂದಿನ ಅಸಲೀ ಉದ್ದೇಶವೇನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada