ದಕ್ಷಿಣ ಮತ್ತು ಮಧ್ಯ ಕೇರಳದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅನೇಕ ಭಾಗಗಳಲ್ಲಿ ಪ್ರವಾಹಗಳು ಮತ್ತು ಭೂಕುಸಿತಗಳು ಉಂಟಾಗಿ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಪ್ರವಾಹಕ್ಕೆ 21ಜನರು ಬಲಿಯಾಗಿದ್ದಾರೆ, ರಕ್ಷಣಾ ಕಾರ್ಯಾಚರಣೆಗಾಗಿ ರಕ್ಷಣಾ ಪಡೆಗಳ ನೆರವು ಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಮಧ್ಯ ಮತ್ತು ದಕ್ಷಿಣ ಕೇರಳದಲ್ಲಿ ಸುರೊಯುತ್ತಿರುವ ಭಾರಿ ಮಳೆಯು 2018-2019 ರಲ್ಲಿ ಸುರಿದ ಭಾರಿ ಮಳೆಯಿಂದ ಎದುರಿಸಿದ ಪ್ರವಾಹ ಪರಿಸ್ಥಿತಿಯನ್ನು ನೆನಪಿಸುತ್ತದೆ ಆದರೆ, ಎಲ್ಲವು ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ತಡರಾತ್ರಿ ಸಂಭವಿಸಿದ ಭೂಕುಸಿತದಿಂದಾಗಿ ನಾಲ್ಕು ಮನೆಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದೆ ರಕ್ಷಣಾ ಕಾರ್ಯಚರಣೆ ಚುರುಕಾಗಿದೆ ಎಂದು ಇಡುಕ್ಕಿ ಜಿಲ್ಲಾಧಿಕಾರಿ ಶೀಬಾ ಜಾರ್ಜ್ ಹೇಳಿದ್ದಾರೆ.
Mi-17 ಮತ್ತು ಸಾರಂಗ್ ಹೆಲಿಕಾಪ್ಟರ್‌ಗಳು ಈಗಾಗಲೇ ಅವಶ್ಯಕತೆಗಳನ್ನು ಪೂರೈಸಲು ಸ್ಟ್ಯಾಂಡ್‌ಬೈ ಮೋಡ್‌ನಲ್ಲಿವೆ ಆದರೆ ಕೊಟ್ಟಾಯಂನಲ್ಲಿ ಹವಾಮಾನ ಇನ್ನೂ ಕೆಟ್ಟದಾಗಿರುವುದರಿಂದ ಅವು ರಕ್ಷಣಾ ಕಾರ್ಯಾಚರಣೆ ಆರಂಭಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕೇರಳದಲ್ಲಿ ಸುರಿಯುತ್ತಿರುವ ಭಾರೀ ಮಳೆ ಮತ್ತು ಭೂಕುಸಿತದಿಂದ ಕೆಲವರು ಪ್ರಾಣ ಕಳೆದುಕೊಂಡಿರುವುದು ಬೇಸರದ ಸಂಗತಿ. ದುಃಖಿತ ಕುಟುಂಬಗಳಿಗೆ ಸಂತಾಪವನ್ನ ಸೂಚಿಸಿದ್ದಾರೆ. ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಚರ್ಚಿಸಲಾಗಿದೆ. ಗಾಯಾಳುಗಳು ಮತ್ತು ಪೀಡಿತರಿಗೆ ಸಹಾಯ ಮಾಡಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ನಾನು ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.