ಕಾಂಗ್ರೆಸ್ ಮಾಜಿ ಸಂಸದ ಉಗ್ರಪ್ಪ ಹಾಗೂ ಉಚ್ಛಾಟಿತ ಕಾಂಗ್ರೆಸ್ ನಾಯಕ ಸಲೀಂ ನಡುವೆ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಕುರಿತಾದ ಹಗರಣದ ಸಂಭಾಷಣೆಯೊಂದು ಸೋರಿಕೆಯಾದ ಬೆನ್ನಲ್ಲೇ ಡಿಕೆಶಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ದೂರು ದಾಖಲಾಗಿದೆ.

ದೂರಿನಲ್ಲಿನ ವಿವರಗಳು ಏನೇನು?
ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ನೀಡಿರುವ ದೂರಿನಲ್ಲಿ ಅನ್ವಯವಾಗುವಂತೆ, ಕಾಂಗ್ರೆಸ್ ಪಕ್ಷದ ನಾಯಕರಿಗೆ ಡಿ.ಕೆ.ಶಿವಕುಮಾರ್ ಅವರ ಭ್ರಷ್ಟಾಚಾರದ ಬಗ್ಗ ಸಂಪೂರ್ಣ ಮಾಹಿತಿ ತಿಳಿದಿದೆ. ಡಿ.ಕೆ.ಶಿವಕುಮಾರ್ ನೀರಾವರಿ ಹಾಗೂ ಜಲ ಸಂಪನ್ಮೂಲ ಸಚಿವರಾಗಿದ್ದಾಗ ೮ ರಿಂದ ೧೨ ಪರ್ಸಂಟೇಜ್ ಕಮೀಷನ್ ಪಡೆದಿದ್ದಾರೆ ಎಂಬ ಆರೋಪವನ್ನು ಕಾಂಗ್ರೆಸ್ ನಾಯಕರೇ ಮಾಡಿದ್ದಾರೆ. ೨೦೨೩ ರ ಚುನಾವಣೆಗಾಗಿ ಕೋಟಿ ರೂಪಾಯಿಗೂ ಅಧಿಕ ಭ್ರಷ್ಟಾಚಾರದ ಹಣ ಸಂಪಾದನೆಯ ಆರೋಪ ಕೂಡ ಇದೆ. ಅಕ್ರಮ ಹಣ ಸಂಪಾದನೆಯ ಬಗ್ಗೆ ಗೊತ್ತಿದ್ದರೂ ಅವರಿಗೆ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ ಎಂದು ದೂರಿನಲ್ಲಿ ದಾಖಲಾಗಿದೆ ಎಂಬುದಾಗಿ ನ್ಯೂಸ್ ಫಸ್ಟ್ ಲೈವ್ ವರದಿ ಮಾಡಿದೆ.
ಇತ್ತೀಚೆಗೆ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಹಾಗೂ ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ. ಸಲೀಂ, ಕಾಂಗ್ರೆಸ್ನ ಅಧ್ಯಕ್ಷ ಡಿಕೆ ಶಿವಕುಮಾರ್ ಕುರಿತು ಗುಟ್ಟಾಗಿ ಮಾತನಾಡಿಕೊಂಡಿದ್ದು, ನಂತರ ಮಾಧ್ಯಮಗಳಲ್ಲಿ ಈ ಸಂಭಾಷಣೆ ಸಾಕಷ್ಟು ಚರ್ಚೆಯನ್ನುಂಟು ಮಾಡಿತ್ತು. ಇದಾದ ಬಳಿಕ, ಕಾಂಗ್ರೆಸ್ ಶಿಸ್ತು ಪರಿಪಾಲನಾ ಸಮಿತಿ ಮುಖ್ಯಸ್ಥರಾದ ರೆಹಮಾನ್ ಖಾನ್ ಅವರು, ಸಲೀಂ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿದ್ದರು, ಅಲ್ಲದೇ ಉಗ್ರಪ್ಪ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ.
ಉಗ್ರಪ್ಪ ರಕ್ಷಣೆಗೆ ಮುಂದಾಯ್ತ ಕಾಂಗ್ರೆಸ್?
ಮಾಜಿ ಸಂಸದ ಉಗ್ರಪ್ಪನವರು ಕಾಂಗ್ರೆಸ್ ಸೇರಿದಾಗಿನಿಂದ ಸಂಕಷ್ಟದ ಸಮಯದಲ್ಲಿ ಪಕ್ಷವನ್ನು ಸಮರ್ಥಿಸಿಕೊಳ್ಳುವುದರ ಜೊತೆಗೆ ಜೀವನದುದ್ದಕ್ಕೂ ಸಂಸ್ಕಾರಯುತ ಮೌಲ್ಯಗಳ ಜೊತೆ ಶಿಸ್ತನ್ನು ಅಳವಡಿಸಿಕಒಂಡು ಬದುಕುತ್ತಿದ್ದು ಅವರನ್ನು ಅಮಾನತು ಮಾಡಿರುವುದು ಅವಸರದ ನಿರ್ಧಾರವಾಗಿದೆ ಎಂದು ಕಾಂಗ್ರೆಸ್ ಶಿಸ್ತು ಪರಿಪಾಲನಾ ಸಮಿತಿ ಮುಖ್ಯಸ್ಥ ರೆಹಮಾನ್ ಖಾನ್ ಸ್ಪಷ್ಟಪಡಿಸಿದ್ದರು.
ರಾಜಕೀಯದಲ್ಲಿ ಚಪ್ಪಾಳೆ ಹೊಡೆಯುವವರೂ ಇದ್ದಾರೆ! ಡಿಕೆಶಿ ತಿರುಗೇಟು

ಇದೇ ಪ್ರಕರಣಕ್ಕೆ ಸಂಬಂದಿಸಿದಂತೆ ಡಿಕೆಶಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಡಿಕೆಶಿ, ಪಕ್ಷ ಶಿಸ್ತನ್ನು ಗಮನದಲ್ಲಿಟ್ಟುಕೊಂಡು ಶಿಸ್ತಿನ ಸಮಿತಿ ರಚನೆಯಾಗಿದೆ. ಮಾಧ್ಯಮದಲ್ಲಿ ನಾನು ನೋಡಿರುವಂತೆ ಅದಕ್ಕೂ ನನಗೂ ಯಾವುದೂ ಸಂಬಂಧವಿಲ್ಲ. ನಾನು ಯಾವ ಪರ್ಸಂಟೇಜ್ ನಲ್ಲಿಯೂ ಭಾಗಿಯಾಗಿಲ್ಲ, ಭ್ರಷ್ಟಾಚಾರಕ್ಕೂ ನನಗೂ ದೂರ, ಪರ್ಸೆಂಟೇಜ್ ತೆಗೆದುಕೊಳ್ಳುವ ಅಗತ್ಯ ನನಗಿಲ್ಲ. ರಾಜಕೀಯದಲ್ಲಿ ಹಾರ ಹಾಕಿ ಸಮ್ಮಾನ ಮಾಡುವವರಿರುತ್ತಾರೆ. ಹೊಗಳುವವರೂ, ತೆಗಳುವವರೂ, ಜೈಕಾರ ಹಾಗುವವರೂ ಇರುತ್ತಾರೆ. ಇವೆಲ್ಲದರ ಜೊತೆಗೆ ಇಲ್ಲಿ ಕಲ್ಲು, ಚಪ್ಪಲಿ, ಮೊಟ್ಟೆ ಎಸೆಯುವವರೂ ಇರುತ್ತಾರೆ. ನಾವು ಎಲ್ಲವನ್ನೂ ಸ್ವೀಕರಿಸಲು ತಯಾರಿರಬೇಕು ಎಂದಾಗ ಹಾಗಾದರೆ ಇವರು ಯಾವ ವರ್ಗಕ್ಕೆ ಸೇರಿದವರು ಎಂದು ನೀವೇ ನಿರ್ಧಾರ ಮಾಡಿ ಎಂದರು.
ಮಾಧ್ಯಮಗಳು ಪ್ರಸಾರ ಮಾಡಿದ್ದು ತಪ್ಪು ಎನ್ನುತ್ತಿಲ್ಲ!
ಮಾಧ್ಯಮಗಳು ನಾಯಕರ ಸಂಭಾಷಣೆಗಳನ್ನು ಪ್ರಸಾರ ಮಾಡಿದ್ದು ತಪ್ಪು ಎಂದು ನಾನು ಹೇಳುವುದಿಲ್ಲ. ಈ ಹಿಂದೆ ಅನಂತ್ ಕುಮಾರ್ ಮತ್ತು ಯಡಿಯೂರಪ್ಪನವರು ಹೇಳಿದ್ದ ಮಾತುಗಳನ್ನು, ಹೆಚ್. ವಿಶ್ವನಾಥ್ ಹೇಳಿದ್ದ ಮಾತು, ಯತ್ನಾಳ್ ಅವರು ಹೇಳಿದ್ದ ಮಾತುಗಳನ್ನು ತೋರಿಸಿದ್ದೀರಿ, ಇದನ್ನು ನಾನು ತಪ್ಪು ಎಂದು ಹೇಳುವುದಿಲ್ಲ ಎಂದು ಡಿಕೆಶಿ ತಿಳಿಸಿದರು. ಬಿಜೆಪಿ ನಾಯಕರು ಭ್ರಷ್ಟಾಚಾರದಲ್ಲಿಯೇ ನಡೆಯುವುದು, ಅದರ ನಾಯಕರು ಕೋವಿಡ್ ಹೆಸರಲ್ಲಿಯೇ ಸಾಕಷ್ಟು ಅಕ್ರಮ ಹಣ ಮಾಡಿದ್ದಾರೆ ಎಂದು ಆರೋಪಿಸಿದರು.






