• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪಾಕಿಸ್ತಾನ ಪರ ಘೋಷಣೆ : ಕಾಶ್ಮೀರಿ ವಿದ್ಯಾರ್ಥಿಗಳ ಬಿಡುಗಡೆಗೆ ಒತ್ತಾಯಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ‌ ಮೆಹಬೂಬಾ ಮುಫ್ತಿ

ಪ್ರತಿಧ್ವನಿ by ಪ್ರತಿಧ್ವನಿ
October 30, 2021
in ದೇಶ, ರಾಜಕೀಯ
0
ಪಾಕಿಸ್ತಾನ ಪರ ಘೋಷಣೆ : ಕಾಶ್ಮೀರಿ ವಿದ್ಯಾರ್ಥಿಗಳ ಬಿಡುಗಡೆಗೆ ಒತ್ತಾಯಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ‌ ಮೆಹಬೂಬಾ ಮುಫ್ತಿ
Share on WhatsAppShare on FacebookShare on Telegram

ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಆರೋಪದ ಮೇಲೆ ಆಗ್ರಾದಲ್ಲಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಬಂಧಿಸಿರುವ ಕುರಿತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮತ್ತು ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯವು ಕಾಶ್ಮೀರಿ ಜನರಿಗೆ “ಕೇವಲ ಮನರಂಜನೆಯ ಮೂಲವಾಗಿದೆ” ಎಂದು ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ADVERTISEMENT

“ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳನ್ನು ಆಗ್ರಾದಲ್ಲಿ ಬಂಧಿಸಿ ದೇಶದ್ರೋಹದ ಆರೋಪ ಹೊರಿಸಲಾಗಿದೆ. ರಾಷ್ಟ್ರವಿರೋಧಿ ಎಂದು ಅರ್ಥೈಸಬಹುದಾದ ಯಾವುದೇ ಚಟುವಟಿಕೆಯಲ್ಲಿ ಅವರು ತೊಡಗಿಸಿಕೊಂಡಿಲ್ಲ ಎಂದು ಜೆ & ಕೆ ಮಾಜಿ ಮುಖ್ಯಮಂತ್ರಿ ಪತ್ರದಲ್ಲಿ ಬರೆದಿದ್ದಾರೆ.

ಈ ವಾರದ ಆರಂಭದಲ್ಲಿ, ಭಾನುವಾರ ರಾತ್ರಿ ಭಾರತ ಮತ್ತು ಪಾಕಿಸ್ತಾನ ನಡುವೇ ವಿಶ್ವ T-20 ಪಂದ್ಯದಲ್ಲಿ ಭಾರತ ಸೋತ ನಂತರ ಪಾಕಿಸ್ತಾನದ ಪರ ಘೋಷಣೆಗಳನ್ನು ಮತ್ತು “ದೇಶ ವಿರೋಧಿ” ಚಾಟ್‌ಗಳನ್ನು ಹಂಚಿಕೊಂಡ ಆರೋಪದ ಮೇಲೆ ಆಗ್ರಾದ ಇಂಜಿನಿಯರಿಂಗ್ ಕಾಲೇಜೊಂದರ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಕಾಲೇಜು ಅಮಾನತುಗೊಳಿಸಿತು. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನವನ್ನು ಹೊಗಳಿ ಭಾರತವನ್ನು ತಮ್ಮ ದೇಶ ಅಲ್ಲ ಎಂದು ತಿರಸ್ಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇಶಭಕ್ತಿ ಮತ್ತು ನಿಷ್ಠೆಯ ಭಾವವನ್ನು ಸಹಾನುಭೂತಿಯೊಂದಿಗೆ ಬೆಳೆಸಿಕೊಳ್ಳಬೇಕೇ ಹೊರತು “ಲಾಠಿ ಅಥವಾ ಬಂದೂಕಿನ ನಳಿಕೆಯಿಂದ” ಸಾಧ್ಯವಿಲ್ಲ. ಯಾರಿಗೂ ‘ದೇಶಭಕ್ತಿಯನ್ನು ಬಲವಂತವಾಗಿ ಹೇರಲು ಸಾಧ್ಯವಿಲ್ಲ’ ಎಂದು ಮುಫ್ತಿ ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ. ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ತಿರಸ್ಕಾರದಿಂದ ಕೂಡಿದ ಇಂತಹ ದಂಡನಾತ್ಮಕ ಕ್ರಮವು ಯುವ ಪೀಳಿಗೆ ಮತ್ತು ದೇಶದ ಇತರ ಜನರ ನಡುವೆ “ಅವಿಶ್ವಾಸ ಮತ್ತು ಪರಕೀಯತೆಯ ಭಾವನೆಯನ್ನು” ಮತ್ತಷ್ಟು ಹೆಚ್ಚಿಸುತ್ತದೆ ಎಂದು ಅವರು ವಾದಿಸಿದ್ದಾರೆ.

“ಇತ್ತೀಚೆಗೆ ದೇಶದ್ರೋಹದ ಆರೋಪದ ಮೇಲೆ ಕಾಶ್ಮೀರಿ ವಿದ್ಯಾರ್ಥಿಗಳನ್ನು ಆಗ್ರಾದಲ್ಲಿ ಬಂಧಿಸಿರುವ ಬಗ್ಗೆ ನಾನು ಪ್ರಧಾನಿಗೆ ಪತ್ರ ಬರೆದಿದ್ದೇನೆ. ಅವರು ಮಧ್ಯಪ್ರವೇಶಿಸಿ ಅವರನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತಾರೆ ಎಂದು ಭಾವಿಸುತ್ತೇವೆ ” ಎಂದು ಮೆಹಬೂಬಾ ಹೇಳಿದ್ದಾರೆ.

ಅವರು ಬರೆದಿರುವ ಪೂರ್ತಿ ಪತ್ರ ಇಲ್ಲಿದೆ

Tags: BJPನರೇಂದ್ರ ಮೋದಿಪಾಕಿಸ್ತಾನಪಾಕಿಸ್ಥಾನಬಿಜೆಪಿಮೆಹಬೂಬಾ ಮುಫ್ತಿಮೆಹಬೂಬ್ ಮುಫ್ತಿ
Previous Post

ಪ್ರಧಾನಿ ಮೋದಿ ಸಲಹೆಯನ್ನು ಧಿಕ್ಕರಿಸಿದ ಅವರದ್ದೇ ಸಂಪುಟದ ಸಹೋದ್ಯೋಗಿಗಳು!

Next Post

ಗೋವಾ ಚುನಾವಣೆಗೆ ಕಾಂಗ್ರೆಸ್ ಭಾರೀ ಸಿದ್ಧತೆ : ಕೊಟ್ಟಿರುವ ಅಷ್ಟೂ ಭರವಸೆಗಳನ್ನು ನಮ್ಮ ಪಕ್ಷ ಈಡೇರಿಸಿದೆ – ರಾಹುಲ್ ಗಾಂಧಿ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ಗೋವಾ ಚುನಾವಣೆಗೆ ಕಾಂಗ್ರೆಸ್ ಭಾರೀ ಸಿದ್ಧತೆ : ಕೊಟ್ಟಿರುವ ಅಷ್ಟೂ ಭರವಸೆಗಳನ್ನು ನಮ್ಮ ಪಕ್ಷ ಈಡೇರಿಸಿದೆ – ರಾಹುಲ್ ಗಾಂಧಿ

ಗೋವಾ ಚುನಾವಣೆಗೆ ಕಾಂಗ್ರೆಸ್ ಭಾರೀ ಸಿದ್ಧತೆ : ಕೊಟ್ಟಿರುವ ಅಷ್ಟೂ ಭರವಸೆಗಳನ್ನು ನಮ್ಮ ಪಕ್ಷ ಈಡೇರಿಸಿದೆ - ರಾಹುಲ್ ಗಾಂಧಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada