• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಾನಗಲ್, ಸಿಂದಗಿ ಉಪಚುನಾವಣೆ ಫಲಿತಾಂಶ 2023 ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರ ಮುನ್ಸೂಚನೆ: ಡಿ.ಕೆ. ಶಿವಕುಮಾರ್

Any Mind by Any Mind
November 2, 2021
in ಕರ್ನಾಟಕ, ರಾಜಕೀಯ
0
ಕನ್ನಡ ಭಾಷೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವುದು ಕನ್ನಡಿಗರ ಸಂವಿಧಾನಬದ್ದ ಹಕ್ಕು : ಡಿ.ಕೆ.ಶಿವಕುಮಾರ್‌
Share on WhatsAppShare on FacebookShare on Telegram

‘ರಾಜ್ಯದ ಜನ ಬದಲಾವಣೆ ಬಯಸಿದ್ದು, 2023 ರ ವಿಧಾನಸಭೆ ಚುನಾವಣೆಯಲ್ಲಿ ಎಲ್ಲ ವರ್ಗವನ್ನು ಪ್ರತಿನಿಧಿಸುವ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬುದಕ್ಕೆ ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆ ಫಲಿತಾಂಶ ಸ್ಪಷ್ಟ ಮುನ್ಸೂಚನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆತ್ಮವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ.

ADVERTISEMENT

ಉಪಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್,  ಚುನಾವಣೆ ನಡೆದ ಎರಡೂ ಕ್ಷೇತ್ರಗಳ ಪೈಕಿ ಒಂದರಲ್ಲಿ ಬಿಜೆಪಿ, ಮತ್ತೊಂದರಲ್ಲಿ ಜೆಡಿಎಸ್ ಗೆದ್ದಿತ್ತು. ಆದರೆ ಈ ಚುನಾವಣೆಯಲ್ಲಿ ಜೆಡಿಎಸ್ ಗೆದ್ದಿದ್ದ ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ, ಬಿಜೆಪಿ ಗೆದ್ದಿದ್ದ ಹಾನಗಲ್ ಕ್ಷೇತ್ರವನ್ನು ನಾವು ಗೆದ್ದುಕೊಂಡಿದ್ದೇವೆ. ಕಳೆದ ಬಾರಿ ಸಿಂದಗಿಯಲ್ಲಿ ಮೂರನೇ ಸ್ಥಾನ ಪಡೆದಿದ್ದ ಕಾಂಗ್ರೆಸ್, ಈ ಬಾರಿ ಮತಪ್ರಮಾಣ ದುಪ್ಪಟ್ಟು ಮಾಡಿಕೊಂಡು ಎರಡನೇ ಸ್ಥಾನಕ್ಕೆ ಏರಿದೆ. ಹೀಗಾಗಿ ಎರಡೂ ಕ್ಷೇತ್ರಗಳಲ್ಲಿ ಪಕ್ಷ ಉತ್ತಮ ಪ್ರದರ್ಶನ ನೀಡಿದೆ. ಇದು ಜನ ಬದಲಾವಣೆ ಬಯಸಿರುವುದರ ಮುನ್ಸೂಚನೆ’ ಎಂದು ಹೇಳಿದ್ದಾರೆ.

ನಾನು ಈ ಹಿಂದೆ ಹೇಳಿದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಣ್ಣೀರಿನಲ್ಲಿ ಬಿಜೆಪಿ ಹಾಗೂ ಬಿಜೆಪಿ ಸರ್ಕಾರ ಕೊಚ್ಚಿ ಹೋಗಲಿದೆ ಎಂಬ ಮಾತಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ಜನ ವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಮತದಾರ ಬೇಸತ್ತಿದ್ದು, ಅದನ್ನು ಬದಲಿಸಲು ನಿರ್ಧರಿಸಿದ್ದಾನೆ. ಅದಕ್ಕೆ ಈ ಉಪಚುನಾವಣೆ ಫಲಿತಾಂಶವೇ ಸಾಕ್ಷಿ’ ಎಂದು ಹೇಳಿದ್ದಾರೆ.

‘ಈ ಚುನಾವಣೆಯ ಫಲಿತಾಂಶದ ಬಗ್ಗೆ ನಾನು ವಿಶ್ಲೇಷಣೆ ಮಾಡುವ ಅಗತ್ಯವಿಲ್ಲ. ಶ್ರೀನಿವಾಸ ಮಾನೆ ಅವರು ಕಳೆದ ಬಾರಿ 6 ಸಾವಿರ ನತಗಳ ಅಂತರದಲ್ಲಿ ಸೋತಿದ್ದರು. ಬಿಜೆಪಿ ಅಧಿಕಾರದಲ್ಲಿದ್ದು, ಡಬಲ್ ಇಂಜಿನ್ ಸರ್ಕಾರ ಇದೆ. ಜೊತೆಗೆ ಮುಖ್ಯಮಂತ್ರಿಗಳ ತವರು ಕ್ಷೇತ್ರ ಬೇರೆ, ಅವರು ಆ ಕ್ಷೇತ್ರದ ಅಳಿಯ. ಎಲ್ಲ ರೀತಿಯಲ್ಲೂ ಅವರಿಗೆ ಅನುಕೂಲ ಇತ್ತು. ಅವರ ಸರ್ಕಾರದಲ್ಲಿರುವ ನಮ್ಮ ಸ್ನೇಹಿತರು ಬ್ಯಾಗ್ ತುಂಬಿಕೊಂಡು ಹೋಗಿ ಬಹಳ ಪ್ರಯತ್ನಪಟ್ಟಿದ್ದರು.

ಸಿಂದಗಿಯಲ್ಲಿ ನಾವು ಮೂರನೇ ಸ್ಥಾನದಲ್ಲಿದ್ದೆವು. ಮನಗೂಳಿ ಅವರು ತಮ್ಮ ಪುತ್ರನನ್ನು ನಮ್ಮ ಪಕ್ಷದಲ್ಲಿ ಬಿಟ್ಟು ಹೋದರು. ಅವರು ಜೆಡಿಎಸ್ ಚಿಹ್ನೆಯಲ್ಲಿ ಗೆಲ್ಲುತ್ತೇವೆ ಎಂದಿದ್ದರೆ ನಮ್ಮ ತಕರಾರು ಏನೂ ಇರಲಿಲ್ಲ. ಅವರು ಕಾಂಗ್ರೆಸ್ ಬರಲು ಮುಂದಾದಾಗ ಜಿಲ್ಲೆಯ ಎಲ್ಲ ನಾಯಕರು ಒಟ್ಟಾಗಿ ಅವರಿಗೆ ಟಿಕೆಟ್ ನೀಡಿದೆವು. ಅಲ್ಲೂ ನಾವು ಗೆಲ್ಲುವ ವಿಶ್ವಾಸ ಇತ್ತು. ಮತ ಪ್ರಮಾಣ ನೋಡಿದರೆ ನಾವು ಸೋತಿದ್ದರೂ ಸಮಾಧಾನ ತಂದಿದೆ ಎಂದಿದ್ದಾರೆ.

ನಾವು ಒಂದೇ ದಿನದಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ. ಹಂತ-ಹಂತವಾಗಿ ತರಬೇಕು. ಒಟ್ಟಾರೆಯಾಗಿ ಎರಡೂ ಕ್ಷೇತ್ರದ ಚುನಾವಣೆ ನೋಡಿದರೆ ಜನ ಬದಲಾವಣೆ ಬಯಸಿರುವುದು ಸ್ಪಷ್ಟವಾಗಿದೆ. ಮತದಾರರು ಬಿಜೆಪಿ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಕೇವಲ ಕೊರೋನಾ ವಿಚಾರ ಮಾತ್ರವಲ್ಲ, ಅವರಿಗೆ ಸಿಕ್ಕ ವ್ಯವಸ್ಥೆಯಲ್ಲಿ ಈ ಪರಿಸ್ಥಿತಿ ಬಂದಿದೆ. ಇದು ದೇಶಕ್ಕೆ ದೊಡ್ಡ ಸಂದೇಶ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳು, ಇತರೆ ನಾಯಕರು ಆಡಿದ ಮಾತುಗಳನ್ನು ಜನ ನೋಡಿದ್ದಾರೆ. ವೈಯಕ್ತಿಕ ಟೀಕೆಗಳನ್ನು ಕೇಳಿದ್ದಾರೆ. ಉಪಚುನಾವಣೆ ವೇಳೆ ಅದೊಂದು ಚಾಳಿ ಆಗಿದ್ದು, ನಾವೆಲ್ಲ ರಾಜಕಾರಣಿಗಳು ಸೇರಿ ಅದನ್ನು ತಪ್ಪಿಸಬೇಕಿದೆ.

ಕಾಂಗ್ರೆಸ್ ಮೇಲೆ ಜನ ಇಟ್ಟಿರುವ ಪ್ರೀತಿ, ವಿಶ್ವಾಸ, ನಂಬಿಕೆ ಉಳಿಸಿಕೊಂಡು ಅವರ ಸೇವೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಬಿಜೆಪಿ ಆಳ್ವಿಕೆಯಲ್ಲಿ ರಾಜ್ಯ 20 ವರ್ಷ ಹಿಂದಕ್ಕೆ ಹೋಗಿದ್ದು, ಅದನ್ನು ನಾವು ಸರಿ ಮಾಡುತ್ತೇವೆ ಎಂದು ದೀಪಾವಳಿ ಹಬ್ಬದ ಸಮಯದಲ್ಲಿ ಶುಭ ಘಳಿಗೆಗೆ ಹೆಜ್ಜೆ ಇಡುವ ವಿಶ್ವಾಸದಿಂದ ಹೇಳುತ್ತೇನೆ.

ಕೆಲವರು ರಾಜಕೀಯದಲ್ಲಿ ವೈಯಕ್ತಿಕ  ಅಜೆಂಡಾ ಇಟ್ಟುಕೊಂಡಿರುತ್ತಾರೆ. ಒಂದು ಪಕ್ಷ ಅಂದ ಮೇಲೆ ಮೂರ್ನ್ಕಾಲ್ಕು ಆಕಾಂಕ್ಷಿಗಳು ಇರುತ್ತಾರೆ. ಅದು ಎಲ್ಲ ಪಕ್ಷಗಳಲ್ಲೂ ಇದ್ದಿದ್ದೆ. ರಾಜಕೀಯದಲ್ಲಿ ಸಾಮಾನ್ಯ ಎಂದು ಹೇಳಿದ್ದಾರೆ.

ಹಾನಗಲ್ ಕ್ಷೇತ್ರದ ಸ್ವಾಭಿಮಾನಿ ಮತದಾರರಿಗೆ, ಚುನಾವಣೆಯಲ್ಲಿ ಹಳ್ಳಿ ಹಳ್ಳಿಯಲ್ಲಿ ದುಡಿದ ಕಾರ್ಯಕರ್ತರಿಗೆ ದೊಡ್ಡ ಸೆಲ್ಯೂಟ್. ಬಿಜೆಪಿಯವರು ಏನೆಲ್ಲಾ ಪ್ರಯತ್ನ ಪಟ್ಟಿದ್ದರು, ಎಷ್ಟೆಲ್ಲಾ ಒತ್ತಡ ಹಾಕಿದ್ದರು. ಆದರೂ ಅದ್ಯಾವುದಕ್ಕೂ ಮತದಾರ ಬಗ್ಗಲಿಲ್ಲ.

ಈ ಚುನಾವಣೆ ಫಲಿತಾಂಶ ಬರೀ ಸಿಎಂಗೆ ಸಂಬಂಧಪಟ್ಟ ವಿಚಾರವಲ್ಲ. ಇಡೀ ಬಿಜೆಪಿ ಸರ್ಕಾರ ಹಾಗೂ ಬಿಜೆಪಿ ಪಕ್ಷಕ್ಕೆ ಆಗಿರುವ ಮುಖಭಂಗ. ಇಡೀ ಸರ್ಕಾರ ಹಾಗೂ ಅದರ ಆಡಳಿತದ ಸೋಲು. ಆ ಪಕ್ಷದಲ್ಲಿನ ಮುಸುಕಿನ ಗುದ್ದಾಟದ ಬಗ್ಗೆ ನಾನು ಏನೂ ಹೇಳುವುದಿಲ್ಲ. ಅಲ್ಲಿ ಪಕ್ಷ ಕಟ್ಟಿದವರು ಲೆಕ್ಕಕ್ಕೆ ಇಲ್ಲವಾಗಿದ್ದಾರೆ. ಈಗ ಆ ವಿಚಾರ ಬೇಡ.

ಬಿಜೆಪಿ ಆಡಳಿತ ಸಾಕು ಎಂದು ಜನ ತೀರ್ಮಾನಿಸಿದ್ದಾರೆ. ಸಿಂದಗಿಯಲ್ಲೂ ಪಕ್ಷ ಗಟ್ಟಿಯಾಗುತ್ತಿದೆ. ಫಲಿತಾಂಶದ ಬಗ್ಗೆ  ತಲೆ ಕೆಡಿಸಿಕೊಳ್ಳುವುದು ಬೇಡ. ಅಲ್ಲಿ ಪಕ್ಷಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಾರ್ಯಕರ್ತರು ಆತ್ಮವಿಶ್ವಾಸದಿಂದ ಇರಲಿ. ಅವರು ಚುನಾವಣೆ ಸಮಯದಲ್ಲಿ ಹಗಲು ರಾತ್ರಿ ಎನ್ನದೆ ದುಡಿದಿದ್ದಾರೆ. ಅವರಿಗೆ ಧನ್ಯವಾದಗಳು.

ಕರ್ನಾಟಕದಲ್ಲಿ 2023 ಕ್ಕೆ ನಿಮ್ಮ ಆಡಳಿತ, ಜನರ ಆಡಳಿತ, ಕಾಂಗ್ರೆಸ್ ಆಡಳಿತ ಇರಲಿದೆ. ಅದು ಎಲ್ಲ ವರ್ಗದ ಆಡಳಿತ. ಜನ ಬಿಜೆಪಿಗೆ ಕೊಟ್ಟ ಅವಕಾಶದ ಸಮಯ ಮುಗಿದಿದೆ. ಈಗ ಆ ಬಗ್ಗೆ ಚರ್ಚೆ ಬೇಡ. ನಾವು ಮುಂದೆ ಒಳ್ಳೆಯ ಕೆಲಸ ಮಾಡಿಕೊಂಡು ಹೋಗುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹಾನಗಲ್ ಕ್ಷೇತ್ರದಲ್ಲಿ ಹಣಬಲ ಸೋತಿದೆ, ಜನಬಲ ಗೆದ್ದಿದೆ : ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ

Next Post

ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
Next Post
ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ

ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada