ದೀಪಾವಳಿ ಹಬ್ಬದ ಪ್ರಯುಕ್ತ ಜನರಿಗೆ ಭರ್ಜರಿ ಸಿಹಿ ಸುದ್ದಿ ಬಂದಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಗೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ದೀಪಾವಳಿಗೆ ಇನ್ನೊಂದು ದಿನ ಇದ್ದು, ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ ಘೋಷಿಸಿದೆ.
ನಾಳೆಯಿಂದ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕ್ರಮವಾಗಿ 5 ರೂ. ಮತ್ತು 10 ರೂಪಾಯಿ ಇಳಿಕೆಯಾಗಲಿದೆ.
ಪೈಸೆಗಳ ಲೆಕ್ಕದಲ್ಲಿ ಪ್ರತಿದಿನ ಏರಿಕೆಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ಸಾರ್ವಕಾಲಿಕ ದಾಖಲೆ ಬರೆದಿದೆ. ಹಲವು ಕಡೆ ಪೆಟ್ರೋಲ್ 120 ರೂ. ದಾಟಿದ್ದು, ಡೀಸೆಲ್ ದರ 110 ರೂ. ಗಡಿ ದಾಟಿದೆ.
ಇಂಧನ ದರ ಏರಿಕೆಯಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಸಾಗಾಣಿಕೆ ವೆಚ್ಚ ಜಾಸ್ತಿಯಾಗಿ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿರುವುದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿತ್ತು. ಇದನ್ನು ಮನಗಂಡು ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ಸುಂಕ ಕಡಿತ ಮಾಡುವುದಾಗಿ ಘೋಷಿಸಲಾಗಿದೆ.