ಕರೋನಾ ಸೋಂಕು ತಡೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೇರಲಾಗಿದ್ದ ನೈಟ್ ಕರ್ಫ್ಯೂ ಆದೇಶವನ್ನು ಸರ್ಕಾರ ಶುಕ್ರವಾರ ಹಿಂಪಡೆದಿದೆ.
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಗಣನಾರ್ಹ ರೀತಿಯಲ್ಲಿ ಇಳಿಕೆ ಕಂಡುಬರುವುದರೊಂದಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಈ ಆದೇಶ ಹೊರಡಿಸಿದ್ದಾರೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಜಾರಿಯಲ್ಲಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೋವಿಡ್ ನಿಯಮ ಪಾಲನೆಯೊಂದಿಗೆ ಕುದುರೆ ರೇಸ್ ಗೂ ಅವಕಾಶ ಕಲ್ಪಿಸಿದ್ದು,ಆಸನದ ಸಾಮರ್ಥ್ಯದಷ್ಟು ಜನರು ಭಾಗವಹಿಸಬೇಕು, ಅಲ್ಲದೇ, ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದಿರುವುದು ಕಡ್ಡಾಯವಾಗಿರುತ್ತದೆ ಎಂದು ಆದೇಶದಲ್ಲಿ ಹೇಳಲಾಗಿದೆ.
ಏಪ್ರಿಲ್ ಕೊನೆ ವಾರದಲ್ಲಿ ಕರೋನ ನಿಯಂತ್ರಣಕ್ಕಾಗಿ ಹೇರಲಾಗಿದ್ದ ನೈಟ್ ಕರ್ಪ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.