• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಆಸ್ಟ್ರೇಲಿಯಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಭಗ್ನ; ಬೇಸರ ವ್ಯಕ್ತಪಡಿಸಿದ ಪ್ರಧಾನಿ ಸ್ಕಾಟ್ ಮಾರಿಸನ್

Shivakumar A by Shivakumar A
November 15, 2021
in ವಿದೇಶ
0
ಆಸ್ಟ್ರೇಲಿಯಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಭಗ್ನ; ಬೇಸರ ವ್ಯಕ್ತಪಡಿಸಿದ ಪ್ರಧಾನಿ ಸ್ಕಾಟ್ ಮಾರಿಸನ್
Share on WhatsAppShare on FacebookShare on Telegram

ಭಾರತವು ಸ್ವಾತಂತ್ರ್ಯದ ಅಮೃತಮಹೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಭಾರತ ಸರ್ಕಾರವು ಆಸ್ಟ್ರೇಲಿಯಾ ಸರ್ಕಾರಕ್ಕೆ ಮಹಾತ್ಮ ಗಾಂಧಿಯ ಕಂಚಿನ ಪ್ರತಿಮೆಯನ್ನು ಕೊಡುಗೆಯಾಗಿ ನೀಡಿತ್ತು. ಪ್ರತಿಮೆ ಉದ್ಘಾಟನೆಗೊಂಡ ಕೆಲವೇ ಗಂಟೆಗಳ ಬಳಿಕ ಕಿಡಿಗೇಡಿಗಳು ಪ್ರತಿಮೆಯನ್ನು ಭಗ್ನಗೊಳಿಸಿ ವಿಕೃತಿ ಮೆರೆದಿದ್ದಾರೆ. 

ADVERTISEMENT

ಆಸ್ಟ್ರೇಲಿಯಾದ ವಿಕ್ಟೋರಿಯಾದಲ್ಲಿರುವ Australian Indian Community Centre, Rowvilleನಲ್ಲಿ ಶುಕ್ರವಾರದಂದು ಪ್ರಧಾನಿ ಸ್ಕಾಟ್ ಮಾರಿಸನ್ ಹಾಗೂ ಸಿಜಿಐ (Consul General of India) ರಾಜ್ ಕುಮಾರ್ ಅವರು ಕಂಚಿನ ಪ್ರತಿಮೆಯನ್ನು ಉದ್ಘಾಟಿಸಿದ್ದರು. 

ಇದಾದ ಕೆಲವೇ ಗಂಟೆಗಳ ಬಳಿಕ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ಆಸ್ಟ್ರೇಲಿಯಾದ ಪ್ರಧಾನಿಯೇ ಉದ್ಘಾಟಿಸಿದ್ದ ಪ್ರತಿಮೆ ಭಗ್ನಗೊಳಿಸಿರುವುದು ಸರ್ಕಾರಕ್ಕೆ ಭಾರಿ ಮುಜುಗರ ಉಂಟುಮಾಡಿದೆ. 

“ಈ ಮಟ್ಟದ ಅಗೌರವ ತೋರಿಸಿರುವುದು ಅವಮಾನಕರ ಹಾಗೂ ಬೇಸರ ಮೂಡಿಸುವಂತಹ ವಿಚಾರ. ದೇಶದಲ್ಲಿರುವ ಸಾಂಸ್ಕೃತಿಕ ಸ್ಮಾರಕಗಳನ್ನು ಧ್ವಂಸಗೊಳಿಸುವುದನ್ನು ಸಹಿಸಲಾಗುವುದಿಲ್ಲ. ಆಸ್ಟ್ರೇಲಿಯಾದಲ್ಲಿ ವಿವಿಧ ಸಂಸ್ಕೃತಿಯ ಹಾಗೂ ದೇಶಗಳ ಜನರು ಅನ್ಯೋನ್ಯತೆಯಿಂದ ಬದುಕುತ್ತಿದ್ದಾರೆ. ಇದನ್ನು ಯಾರೇ ಮಾಡಿದ್ದರೂ, ಅವರು ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಸಮುದಾಯಕ್ಕೆ ಅಗೌರವ ತೋರಿದ್ದಾರೆ,” ಎಂದು ಪ್ರಧಾನಿ ಸ್ಕಾಟ್ ಮಾರಿಸನ್ ಹೇಳಿದ್ದಾರೆ. 

ಘಟನೆಯ ಕುರಿತು ಮಾಹಿತಿ ನೀಡಿರುವ ವಿಕ್ಟೋರಿಯಾ ಪೊಲೀಸ್, ಅತ್ಯಂತ ಬಲಶಾಲಿಯಾದ ಯಂತ್ರೋಪಕರಣಗಳನ್ನು ಬಳಸಿ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಲು ಯತ್ನಿಸಲಾಗಿದೆ. ಶುಕ್ರವಾರ ಸಂಜೆ 5.30ರಿಂದ ಶನಿವಾರ ಸಂಜೆ 5.30ರ ಒಳಗಾಗಿ ಈ ಘಟನೆ ನಡೆದಿದೆ. ನೋಕ್ಸ್ ಅಪರಾಧ ತನಿಖಾ ದಳವು ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಯಾರಾದರೂ ಸಾಕ್ಷಿಗಳಿದ್ದಲ್ಲಿ ಸ್ವಯಂಪ್ರೇರಿತರಾಗಿ ಮುಂದೆ ಬರಬೇಕು, ಎಂದು ವಿನಂತಿಸಿಕೊಂಡಿದ್ದಾರೆ. 

ಗಾಂಧಿ ಪ್ರತಿಮೆ ಭಗ್ನಗೊಳಿಸಿರುವ ಕುರಿತು ತೀವ್ರವಾದ ಬೇಸರ ವ್ಯಕ್ತಪಡಿಸಿರುವ ಆಸ್ಟ್ರೇಲಿಯಾದ ಭಾರತೀಯ ಸಮುದಾಯ, ಇದೊಂದು ಕೀಳು ಮಟ್ಟದ ಕೃತ್ಯ ಎಂದು ಜರೆದಿದೆ. 

“ಸಂಪೂರ್ಣ ಸಮುದಾಯಕ್ಕೆ ಆಘಾತ ಹಾಗೂ ಬೇಸರವಾಗಿದೆ. ಪ್ರತಿಮೆಯನ್ನು ಧ್ವಂಸಗೊಳಿಸುವಂತಹ ಕೀಳುಮಟ್ಟದ ಕೃತ್ಯವನ್ನು ಏಕೆ ಮಾಡುತ್ತಾರೆ ಎಂಬುದು ಅರ್ಥವಾಗುತ್ತಿಲ್ಲ,” ಎಂದು ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್ ಆಫ್ ವಿಕ್ಟೋರಿಯಾದ ಅಧ್ಯಕ್ಷ ಸೂರ್ಯ ಪ್ರಕಾಶ್ ಸೋನಿ ಅವರು ಹೇಳಿದ್ದಾರೆ. 

ಆಸ್ಟ್ರೇಲಿಯಾದಲ್ಲಿ 3,00,000ಕ್ಕೂ ಅಧಿಕ ಭಾರತೀಯರು ನೆಲೆಸಿದ್ದು ವಿಕ್ಟೋರಿಯಾದಲ್ಲಿ ಇಂತಹ ಘಟನೆ ನಡೆಯಬಹುದೆಂದು ಊಹಿಸಿಯೂ ಇರಲಿಲ್ಲ. ಪ್ರತಿಮೆಯ ತಲೆಯನ್ನು ಒಡೆದು ಹಾಕಲಾಗಿದೆ, ಎಂದು ವಾಸನ್ ಶ್ರೀನಿವಾಸನ್ ಎಂಬವರು ಹೇಳಿದ್ದಾರೆ. 

Tags: AustraliaMahathmaGandhijiscott morrisonVandalisingಮಹಾತ್ಮ ಗಾಂಧೀಜಿ
Previous Post

ರಾಜ್ಯದ ಕೆಳಮನೆ-ಮೇಲ್ಮನೆ ಎರಡರಲ್ಲೂ ಮಹಿಳಾ ಶಾಸಕರ ಸಂಖ್ಯೆ ನಗಣ್ಯ

Next Post

ಬೆಂಗಳೂರು: ತೆರಿಗೆ ಪಾವತಿಸದ ಹಿನ್ನಲೆಯಲ್ಲಿ ಮತ್ತೆ ಮಂತ್ರಿ ಮಾಲ್‌ಗೆ ಬೀಗ ಜಡಿದ ಬಿಬಿಎಂಪಿ ಅಧಿಕಾರಿಗಳು

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ವಿದೇಶ

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

by ಪ್ರತಿಧ್ವನಿ
April 27, 2026
0

 ಅಮೆರಿಕದಲ್ಲಿ H-1B ವೀಸಾ ನೀತಿಯನ್ನು ಕಠಿಣಗೊಳಿಸುವ ನಿಟ್ಟಿನಲ್ಲಿ ರಿಪಬ್ಲಿಕನ್ ಶಾಸಕರ ಗುಂಪೊಂದು ಹೊಸ ಮಸೂದೆಯನ್ನು ಮಂಡಿಸಿದ್ದು, ಇದು ವಿದೇಶಿ ಉದ್ಯೋಗಿಗಳ, ವಿಶೇಷವಾಗಿ ಭಾರತೀಯರ ನಡುವೆ ಆತಂಕವನ್ನು ಹೆಚ್ಚಿಸಿದೆ.ಅರಿಜೋನಾ...

Read moreDetails
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

April 27, 2026
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

April 25, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
Next Post
ಬೆಂಗಳೂರು: ತೆರಿಗೆ ಪಾವತಿಸದ ಹಿನ್ನಲೆಯಲ್ಲಿ ಮತ್ತೆ ಮಂತ್ರಿ ಮಾಲ್‌ಗೆ ಬೀಗ ಜಡಿದ ಬಿಬಿಎಂಪಿ ಅಧಿಕಾರಿಗಳು

ಬೆಂಗಳೂರು: ತೆರಿಗೆ ಪಾವತಿಸದ ಹಿನ್ನಲೆಯಲ್ಲಿ ಮತ್ತೆ ಮಂತ್ರಿ ಮಾಲ್‌ಗೆ ಬೀಗ ಜಡಿದ ಬಿಬಿಎಂಪಿ ಅಧಿಕಾರಿಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada