1949 ರಲ್ಲಿ ಮಹಾತ್ಮ ಗಾಂಧಿಯವರ ಹಂತಕನಾದ ಗೋಡ್ಸೆಯನ್ನು ಗಲ್ಲಿಗೇರಿಸಿದ ಹರಿಯಾಣದ ಅಂಬಾಲಾ ಸೆಂಟ್ರಲ್ ಜೈಲಿನಿಂದ ತಂದ ಮಣ್ಣಿನಿಂದ ನಾಥೂರಾಂ ಗೋಡ್ಸೆಯ ಪ್ರತಿಮೆಯನ್ನು ನಿರ್ಮಿಸುವುದಾಗಿ ಹಿಂದೂ ಮಹಾಸಭಾ ಹೇಳಿದೆ.
ಸೋಮವಾರ ಗೋಡ್ಸೆಯ ಪುಣ್ಯತಿಥಿಯನ್ನು ಆಚರಿಸಿದ ಬಲಪಂಥೀಯ ಸಂಘಟನೆಯಿಂದ ಈ ಹೇಳಿಕೆ ಬಂದಿದೆ.
“ಗೋಡ್ಸೆ ಮತ್ತು ನಾರಾಯಣ ಆಪ್ಟೆ ಅವರನ್ನು ಗಲ್ಲಿಗೇರಿಸಿದ ಅಂಬಾಲಾ ಜೈಲಿನಿಂದ ” ಕಳೆದ ವಾರ ಹಿಂದೂ ಮಹಾಸಭಾ ಕಾರ್ಯಕರ್ತರು ಮಣ್ಣನ್ನು ತಂದಿದ್ದಾರೆ. ಈ ಮಣ್ಣನ್ನಿಂದ ಗೋಡ್ಸೆ ಮತ್ತು ಆಪ್ಟೆ ಅವರ ಪ್ರತಿಮೆಗಳನ್ನು ತಯಾರಿಸಲು ಬಳಸಲಾಗುವುದು ಮತ್ತು ಅವುಗಳನ್ನು ಗ್ವಾಲಿಯರ್‌ನಲ್ಲಿರುವ ಮಹಾಸಭಾದ ಕಚೇರಿಯಲ್ಲಿ ಸ್ಥಾಪಿಸಲಾಗುವುದು” ಎಂದು ರಾಷ್ಟ್ರೀಯ ಉಪಾಧ್ಯಕ್ಷ ಜೈವೀರ್ ಭಾರದ್ವಾಜ್ ಸುದ್ದಿಗಾರರಿಗೆ ತಿಳಿಸಿದರು.
ಮಹಾಸಭಾ ಕಾರ್ಯಕರ್ತರು ಸೋಮವಾರ ಮೀರತ್‌ನ (ಉತ್ತರ ಪ್ರದೇಶ) ‘ಬಲಿಧಾನ್ ಧಾಮ’ದಲ್ಲಿ ಗೋಡ್ಸೆ ಮತ್ತು ಆಪ್ಟೆ ಅವರ ಪ್ರತಿಮೆಗಳನ್ನು ಸ್ಥಾಪಿಸಿದ್ದಾರೆ . “ನಾವು ಪ್ರತಿ ರಾಜ್ಯದಲ್ಲೂ ಅಂತಹ ಬಲಿದಾನ್ ಧಾಮವನ್ನು ನಿರ್ಮಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ದೇಶದ ವಿಭಜನೆಗೆ (1947 ರಲ್ಲಿ) ಕಾಂಗ್ರೆಸ್ ಕಾರಣ ಎಂದು ಶ್ರೀ ಭಾರದ್ವಾಜ್ ಆರೋಪಿಸಿದ್ದು, ಇದು ದೊಡ್ಡ ಪ್ರಮಾಣದಲ್ಲಿ ಜನರ ಹತ್ಯೆಗೆ ಕಾರಣವಾಯಿತು ಎಂದಿದ್ದಾರೆ.
ಏತನ್ಮಧ್ಯೆ, ಸೋಮವಾರ ಇಲ್ಲಿ ಹಿಂದೂ ಮಹಾಸಭಾದ ಯಾವುದೇ ಸಾರ್ವಜನಿಕ ಕಾರ್ಯಕ್ರಮವಿಲ್ಲ ಎಂದು ಗ್ವಾಲಿಯರ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸತ್ಯೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ಇಲ್ಲಿಯವರೆಗೆ ಯಾವುದೇ ಪ್ರತಿಮೆಯನ್ನು ಸ್ಥಾಪಿಸಲಾಗಿಲ್ಲ ಮತ್ತು ಇಂತಹ ಚಟುವಟಿಕೆಗಳ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ ಎಂದು ಅವರು ಹೇಳಿದರು.








