• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ತಮ್ಮ ಭ್ರಷ್ಟಾಚಾರಕ್ಕೆ ಬಿಜೆಪಿ ನನ್ನ ಮಗನ ಹೆಸರನ್ನು ಎಳೆದು ತಂದಿದೆ : ಸುಪ್ರೀಂ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಯಲಿ – ಸಿದ್ದರಾಮಯ್ಯ

Any Mind by Any Mind
November 18, 2021
in ಕರ್ನಾಟಕ, ರಾಜಕೀಯ
0
ತಮ್ಮ ಭ್ರಷ್ಟಾಚಾರಕ್ಕೆ ಬಿಜೆಪಿ ನನ್ನ ಮಗನ ಹೆಸರನ್ನು ಎಳೆದು ತಂದಿದೆ : ಸುಪ್ರೀಂ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಯಲಿ – ಸಿದ್ದರಾಮಯ್ಯ
Share on WhatsAppShare on FacebookShare on Telegram

ಬಿಟ್‌ ಕಾಯಿನ್‌ ಪ್ರಕರಣದ ಚರ್ಚೆ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೇ ವಾರ ವಿವಾದ ಆರೋಪ ಪ್ರತ್ಯಾರೋಪ ಕೇಳಿಬರುತ್ತಿದೆ. ಸದ್ಯಕ್ಕೆ ಬಿಟ್‌ ಕಾಯಿನ್‌ ಪ್ರಕರಣದ ನಡುವೆ ಸಿದ್ದರಾಮಯ್ಯ ಅವರ ದಿವಂಗತ ಪುತ್ರ ರಾಕೇಶ್ ಹಸರನ್ನು ತಳುಕು ಹಾಕಿದ್ದು ಈ ಕುರಿತು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿ ಸರಣಿ ಟ್ವೀಟ್‌ ಮಾಡಿದ್ದಾರೆ.

ADVERTISEMENT

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ತಮ್ಮ ಭ್ರಷ್ಟಾಚಾರ ಮುಚ್ಚಿಹಾಕಲು ಬಿಜೆಪಿ ಕರ್ನಾಟಕ ಅಗಲಿ ಹೋಗಿರುವ ನನ್ನ ಮಗನ ಹೆಸರನ್ನು ಎಳೆದು ತಂದಿದೆ. ಸರಿ, ನಮ್ಮ ಸರ್ಕಾರದ ಅವಧಿಯನ್ನೂ ಸೇರಿಸಿ ಬಿಟ್ ಕಾಯಿನ್ ಹಗರಣವನ್ನು ಸುಪ್ರೀಮ್ ಕೋರ್ಟ್ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

ನನ್ನ ಮಗ ರಾಕೇಶ್ ನಮ್ಮನಗಲಿ ಐದು ವರ್ಷಗಳಾಗಿವೆ, ಪುತ್ರಶೋಕ ನಿರಂತರ. ತನ್ನ ಮೇಲಿನ ಆರೋಪಕ್ಕೆ ಆತ ಪ್ರತಿಕ್ರಿಯಿಸಲೂ ಸಾಧ್ಯವಿಲ್ಲ. ಇಂತಹ ಸಮಯದಲ್ಲ ಬಿಜೆಪಿ ಕರ್ನಾಟಕ ನನ್ನ ದಿವಂಗತ ಮಗನ ಹೆಸರನ್ನು ಎಳೆದು ರಾಜಕೀಯ ಮಾಡಲು ಹೊರಟಿರುವುದು “ಅತ್ಯಂತ ವೈಯಕ್ತಿಕ ಮತ್ತು ಕ್ಷುಲಕತನದ’ ರಾಜಕಾರಣ ಎಂದು ಹೇಳಿದ್ದಾರೆ.

.@BJP4Karnataka is trying to hide their corruption by bringing the name of my deceased son.

I urge @CMofKarnataka to order for Judicial enquiry by Supreme Court to investigate about #Bitcoin scam including our term.

— Siddaramaiah (@siddaramaiah) November 18, 2021

ರಾಕೇಶ್ ಜೊತೆಗೆ ಬಿಟ್ಕಾಯಿನ್ ಹಗರಣದ ಆರೋಪಿ ಶ್ರೀಕೃಷ್ಣನ ಗೆಳೆಯ ಹೇಮಂತ್ ಮುದ್ದಪ್ಪ ಇದ್ದಾನೆ ಎಂದು ಬಿಜೆಪಿ ಆರೋಪಿಸಿದೆ. ಹಾಗಿದ್ದರೆ 2018ರಲ್ಲಿ ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪ್ರಧಾನ ಮಂತ್ರಿ ಜೊತೆಗಿರುವ ಬ್ಯಾಂಕ್ ಲೂಟಿಕೋರ ನೀರವ್ ಮೋದಿಯ ಪೋಟೊವನ್ನು ಹೇಗೆ ವ್ಯಾಖ್ಯಾನಿಸುವುದು? ಎಂದು ಪ್ರಶ್ನಿಸಿದ್ದಾರೆ.

ಶ್ರೀಕೃಷ್ಣನ ಜೊತೆ ಬಂಧನಕ್ಕೊಳಗಾದ ಹೇಮಂತ್ ಮುದ್ದಪ್ಪನ ಬಿಡುಗಡೆಗಾಗಿ ಪೊಲೀಸರ ಜೊತೆ ಬಿಜೆಪಿ ಕರ್ನಾಟಕ ದ ಪ್ರಮುಖ ನಾಯಕರೊಬ್ಬರು ಸಂಧಾನ ಮಾಡಿದ್ದು, ಆ ಸೇವೆಗಾಗಿ ಆರೋಪಿಯಿಂದ ಆ ಬಿಜೆಪಿ ನಾಯಕ ಬಿಟ್ ಕಾಯಿನ್ ಪಡೆದಿದ್ದ ಎಂಬ ಆರೋಪ ಇದೆ. ಆ ನಾಯಕ ಯಾರೆಂದು ನಳಿನ್‌ ಕುಮಾರ್‌ ಕಟೀಲ್ ಅವರಿಗೆ ಗೊತ್ತಿರಬಹುದೇನೋ? ಎಂದು ಪ್ರಶ್ನಿಸಿದ್ದಾರೆ.

ನನ್ನ ಕೈಯಲ್ಲಿ ಪುರಾವೆಗಳಿಲ್ಲದ ಕಾರಣ ನಾನು ಇಲ್ಲಿಯ ವರೆಗೆ ಯಾರ ವಿರುದ್ಧವೂ ನೇರ ಆರೋಪ ಮಾಡಿಲ್ಲ. ಬಿಜೆಪಿ ಕರ್ನಾಟಕ ಸರ್ಕಾರವೇ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿರುವ ವಿಷಯವನ್ನಷ್ಟೇ ಹೇಳುತ್ತಿದ್ದೇನೆ. ಈ ವರೆಗಿನ ಪೊಲೀಸರ ತನಿಖೆ ಯಾರೋ ಪ್ರಭಾವಿಗಳನ್ನು ರಕ್ಷಿಸಲು ನಡೆಸಿರುವ ನಾಟಕದಂತಿದೆ ಎಂದು ಹೇಳಿದ್ದಾರೆ.

ನಮ್ಮ ಬುಟ್ಟಿಯಲ್ಲಿ ಹಾವು ಇಲ್ಲ ಎಂದಾದರೆ ಬಿಜೆಪಿ ಕರ್ನಾಟಕ ನಾಯಕರು ಯಾಕೆ ಹಾವು ಕಂಡ ಹಾಗೆ ಬೆಚ್ಚಿ ಬೀಳುತ್ತಿದ್ದಾರೆ? ಯಾಕೆ ಸರತಿ ಸಾಲಲ್ಲಿ ನಿಂತು ಹೆಗಲು ಮುಟ್ಟಿ ನೋಡಿಕೊಂಡು ” ಸರ್ಕಾರ ತಪ್ಪುಮಾಡಿಲ್ಲ, ನಾವೆಲ್ಲ ನಿರಪರಾಧಿಗಳು’ ಎಂದು ಎದೆ ಬಡಿದು ಕೊಳ್ಳುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿ ಕರ್ನಾಟಕ ನಾಯಕರ ಮಕ್ಕಳ ಹೆಸರೂ ಕೇಳಿ ಬರುತ್ತಿವೆ. ಪುರಾವೆಗಳಿಲ್ಲದೆ ಕುಟುಂಬದ ಸದಸ್ಯರ ಹೆಸರು ಎಳೆದು ತರಬಾರದೆಂದು ಸುಮ್ಮನಿದ್ದೇನೆ. ಬಿಜೆಪಿ ನಾಯಕರು ಜೇನು ಗೂಡಿಗೆ ಕಲ್ಲೆಸೆಯುತ್ತಿದ್ದಾರೆ. ಕೆರಳಿದ ಜೇನು ನೊಣಗಳು ಯಾರಿಗೆಲ್ಲ ಕಚ್ಚಲಿದೆಯೋ ಗೊತ್ತಿಲ್ಲ ಎಂದಿದ್ದಾರೆ.

Tags: bit coinBJPCongress PartyRakesh Siddaramaiahನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಗೃಹ ಸಚಿವ ಅರಗ ಜ್ಞಾನೇಂದ್ರ ಒಬ್ಬ ಹುಚ್ಚ, ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಿದೆ: ಡಿ.ಕೆ. ಶಿವಕುಮಾರ್

Next Post

ʼಚರ್ಮದಿಂದ – ಚರ್ಮಕ್ಕೆʼ ಸಂಪರ್ಕವಾದರಷ್ಟೇ ಲೈಂಗಿಕ ದೌರ್ಜನ್ಯ ಎಂಬ  ಬಾಂಬೆ ಹೈಕೋರ್ಟ್‌ ತೀರ್ಪನ್ನು ತಳ್ಳಿ ಹಾಕಿದ ಸುಪ್ರಿಂಕೋರ್ಟ್‌

Related Posts

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

by ಪ್ರತಿಧ್ವನಿ
June 9, 2026
0

ಬೆಂಗಳೂರು: ರಾಜ್ಯಸಭಾ ಚುನಾವಣೆಯ ರಾಜಕೀಯ ಕಾವು ಹೆಚ್ಚುತ್ತಿರುವ ಬೆನ್ನಲ್ಲೇ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಹೆಸರು ರಾಜ್ಯ ರಾಜಕಾರಣದಲ್ಲಿ ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ....

Read moreDetails
ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

June 9, 2026
ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

June 9, 2026
ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

June 9, 2026
ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

June 9, 2026
Next Post
ʼಚರ್ಮದಿಂದ – ಚರ್ಮಕ್ಕೆʼ ಸಂಪರ್ಕವಾದರಷ್ಟೇ ಲೈಂಗಿಕ ದೌರ್ಜನ್ಯ ಎಂಬ  ಬಾಂಬೆ ಹೈಕೋರ್ಟ್‌ ತೀರ್ಪನ್ನು ತಳ್ಳಿ ಹಾಕಿದ ಸುಪ್ರಿಂಕೋರ್ಟ್‌

ʼಚರ್ಮದಿಂದ - ಚರ್ಮಕ್ಕೆʼ ಸಂಪರ್ಕವಾದರಷ್ಟೇ ಲೈಂಗಿಕ ದೌರ್ಜನ್ಯ ಎಂಬ  ಬಾಂಬೆ ಹೈಕೋರ್ಟ್‌ ತೀರ್ಪನ್ನು ತಳ್ಳಿ ಹಾಕಿದ ಸುಪ್ರಿಂಕೋರ್ಟ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada