• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನ. 26ಕ್ಕೆ ಹೆದ್ದಾರಿ ತಡೆದು ಹಠಮಾರಿ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ: ಕೋಡಿಹಳ್ಳಿ ಚಂದ್ರಶೇಖರ್

Any Mind by Any Mind
November 18, 2021
in ಕರ್ನಾಟಕ
0
ನ. 26ಕ್ಕೆ ಹೆದ್ದಾರಿ ತಡೆದು ಹಠಮಾರಿ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ: ಕೋಡಿಹಳ್ಳಿ ಚಂದ್ರಶೇಖರ್
Share on WhatsAppShare on FacebookShare on Telegram

ಕೇಂದ್ರ ಸರ್ಕಾರದ ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿ ಗಡಿಗಳಲ್ಲಿ ನಡೆಸುತ್ತಿರುವ ಹೋರಾಟ ಇದೇ ತಿಂಗಳ 26ಕ್ಕೆ ಒಂದು ವರ್ಷ ಪೂರೈಸಲಿದೆ. ಈ ಹಿನ್ನೆಲೆ ನ. 26ರಂದು ರಾಜ್ಯದಲ್ಲೂ ರೈತ ಸಂಘಟನೆಗಳು ಬೃಹತ್‌ ಹೋರಾಟಕ್ಕೆ ಕರೆ ನೀಡಿದ್ದು, ರಾಜ್ಯದ ಎಲ್ಲಾ ಭಾಗಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್‌ ತಿಳಿಸಿದ್ದಾರೆ.

ADVERTISEMENT

ಈ ಕುರಿತಾಗಿ ಅನ್ನದ ಋಣ ತಂಡದೊಂದಿಗೆ ಮಾತನಾಡಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌, “ದೆಹಲಿಯ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ನ.26 ರಂದು ಕರ್ನಾಟಕದ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್‌ ಮಾಡಲಿದ್ದೇವೆ. ಈಗಾಗಲೇ ಅದಕ್ಕೆ ಬೇಕಾದ ಸಿದ್ಧತೆಯಲ್ಲಿ ತೊಡಗಿದ್ದೇವೆ. ಕೊರೋನಾ ಸಂಕಷ್ಟದ ಸಮಯದಲ್ಲಿ ಕೃಷಿ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಾಗ ಅದನ್ನು ತರಾತುರಿಯಲ್ಲಿ ಅನುಷ್ಠಾನಕ್ಕೆ ತಂದಿದ್ದು ಕರ್ನಾಟಕದಲ್ಲಿ ಅಧಿಕಾರಿದಲ್ಲಿರುವ ಬಿಜೆಪಿ ಸರ್ಕಾರ. ಹೀಗಾಗಿ ನ.26 ರಂದು ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್‌ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಗಳಿಗೆ ಬಿಸಿ ಮುಟ್ಟಿಸುತ್ತೇವೆ” ಎಂದು ತಿಳಿಸಿದ್ದಾರೆ.

ರೈತರು ದೆಹಲಿ ಗಡಿಗಳಲ್ಲಿ ಹೋರಾಟ ನಡೆಸುತ್ತ ವರ್ಷ ಕಳೆಯುತ್ತ ಬಂದರೂ ಸರ್ಕಾರ ಮಾತ್ರ ರೈತರಿಗೆ ಸ್ಪಂದಿಸುತ್ತಿಲ್ಲ, “ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಸಂವಿಧಾನ ಬದ್ಧವಾಗಿ ನಡೆದುಕೊಳ್ಳುತ್ತಿಲ್ಲ. ಪ್ರಧಾನಿ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ರೈತ ವಿರೋಧಿ ನಡೆಯನ್ನು ಅನುಸರಿಸುತ್ತಿದೆ ಎಂಬುದಕ್ಕೆ ಉದಾಹರಣೆಯಾಗಿ ಒಂದಿಡೀ ವರ್ಷ ಪೂರೈಸಿದ ಐತಿಹಾಸಿಕ ಹೋರಾಟವೇ ನಮ್ಮ ಕಣ್ಣ ಮುಂದಿದೆ. ಇತ್ತೀಚಿನ ದಿನಗಳಲ್ಲಿ ಹೋರಾಟ ನಿರತ ರೈತರ ಮೇಲೆ ದಾಳಿಗಳು ಕೂಡ ಹೆಚ್ಚುತ್ತಿವೆ ಎಂದು ಹೇಳಿದ್ದಾರೆ.

ಲಖಿಂಪುರ್‌ ಹಾಗೂ ಸಿಂಘು ಗಡಿಯಲ್ಲಿ ನಡೆದ ಘಟನೆಗಳು ಇದಕ್ಕೆ ತಾಜಾ ಉದಾಹರಣೆಗಳಂತಿವೆ. ಜೊತೆಗೆ ಸುಪ್ರೀಂಕೋರ್ಟ್‌ ಅಭಿಪ್ರಾಯವನ್ನೇ ನೆಪವಾಗಿಸಿಕೊಂಡು ಈ ಹಿಂದೆ ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ತಾನೇ ಹೆದ್ದಾರಿಗಳಿಗೆ ಅಡ್ಡಲಾಗಿ ಹಾಕಿದ್ದ ಬ್ಯಾರಿಕೇಡ್‌ಗಳನ್ನು ಕೇಂದ್ರ ಸರ್ಕಾರ ತೆರವುಗೊಳಿಸುತ್ತಿದೆ. ಈ ಮೂಲಕ ರೈತರನ್ನು ಹೋರಾಟದ ಸ್ಥಳಗಳಿಂದ ಖಾಲಿ ಮಾಡಿಸಲು ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ಇಂತಹ ತುರ್ತು ಸ್ಥಿತಿಯಲ್ಲಿ ಕೃಷಿ ಕಾಯ್ದೆ ಹಾಗೂ ರೈತರ ಹಕ್ಕಿನ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿ ರೈತರ ಹಿತ ಕಾಪಾಡುವಂತೆ ಒಕ್ಕೂಟ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ನೇರವಾಗಿ ನಿರ್ದೇಶನ ನೀಡಬೇಕು ಎಂದು ಈ ವೇಳೆ ಮನವಿ ಮಾಡಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ಎಡ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ, ಸರ್ಕಾರ ಮಾತ್ರ ಹಗರಣಗಳಲ್ಲೇ ಕಾಲ ಹರಣ ಕಳೆಯುತ್ತಿದೆ ಎಂದು ಕಿಡಿ ಕಾರಿದ್ದಾರೆ.

“ಮಳೆ ಹಾಗೂ ಅದರಿಂದ ನಷ್ಟಕ್ಕೊಳಗಾಗಿರುವ ರೈತರಿಗೆ ಸಿಗಬೇಕಾದ ಪರಿಹಾರದ ಬಗ್ಗೆ ಚರ್ಚೆ ನಡೆಸಲು ಸ್ವಲ್ಪ ಸಮಯ ಕೊಡಿ ನಾನು ಬ್ಯುಸಿಯಾಗಿದ್ದೀನಿ ಕೂತು ಮಾತಾಡೋಣ ಎಂದು ಮುಖ್ಯಮಂತ್ರಿ ನನಗೆ ಮಾತು ಕೊಟ್ಟು ಒಂದೂವರೆ ತಿಂಗಳಾಯ್ತು. ಆದರೆ, ಈವರೆಗೆ ಚರ್ಚೆಗೆ ಕರೆದಿಲ್ಲ. ಬೆಳಗಾವಿಯಲ್ಲಿ ರೈತರ ಕೃಷಿ ಭೂಮಿಯ ಮೇಲೆ ಬಲವಂತವಾಗಿ ರಸ್ತೆ ನಿರ್ಮಾಣಕ್ಕೆ ಮುಂದಾಗುವ ಸರ್ಕಾರ, ಅದನ್ನು ಪ್ರಶ್ನಿಸಿದ ರೈತರ ಮೇಲೆ ಪೊಲೀಸ್‌ ಬಲ ಪ್ರಯೋಗಿಸಿ ಜೈಲಿಗೆ ಕಳುಹಿಸುತ್ತೆ.

ರೈತರು ಬೀದಿಯ ಮೇಲೆ ಹೆಣವಾಗುತ್ತಿದ್ದರೂ ಸರ್ಕಾರ ಮಾತ್ರ ಅದನ್ನು ಲೆಕ್ಕಿಸುತ್ತಿಲ್ಲ. ಮೆಕ್ಕೆ ಜೋಳ, ಭತ್ತ, ರಾಗಿ ಸೇರಿದಂತೆ ಹಲವು ಬೆಳೆಗಳು ಕಟಾವಿಗೆ ಬಂದು ನಿಂತಿವೆ. ಆದರೆ, ನಿರಂತರ ಮಳೆಯಿಂದಾಗಿ ಬೆಳೆ ಕಟಾವು ಮಾಡಲಾಗದ ಇಕ್ಕಟ್ಟಿನ ಸ್ಥಿತಿಯಲ್ಲಿ ರೈತರು ಸಿಲುಕಿಕೊಂಡಿದ್ದಾರೆ. ಹೊಲದಲ್ಲಿಯೇ ಬೆಳೆಗಳು ಕೊಳೆತು, ಮೊಳಕೆಯೊಡೆಯುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಜನರಪರವಾಗಿ ನಿಲ್ಲಬೇಕಿದ್ದ ಮುಖ್ಯಮಂತ್ರಿಗಳು ಟಿ.ವಿ, ಧಾರಾವಾಹಿ, ಸಿನಿಮಾದ ಖಾಸಗಿ ಕಾರ್ಯಕ್ರಮಗಳಲ್ಲಿ ಮಿಂಚುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಕೃಷಿ ಸಚಿವರಂತೂ ಬಣ್ಣದ ಮಾತುಗಳಿಗೇ ಸೀಮಿತವಾಗಿದ್ದಾರೆ. ರಸ ಗೊಬ್ಬರ ದರ ಏರಿಕೆ, ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಂಬರುವ ಬೆಳಗಾವಿ ಅಧಿವೇಶನದ ವೇಳೆ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುವುದು” ಎಂದು ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್‌ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Tags: BJPCongress Partyfarm bills 2020Farm laws protestFarmersFarmers protestನರೇಂದ್ರ ಮೋದಿಬಿಜೆಪಿ
Previous Post

ʼಚರ್ಮದಿಂದ – ಚರ್ಮಕ್ಕೆʼ ಸಂಪರ್ಕವಾದರಷ್ಟೇ ಲೈಂಗಿಕ ದೌರ್ಜನ್ಯ ಎಂಬ  ಬಾಂಬೆ ಹೈಕೋರ್ಟ್‌ ತೀರ್ಪನ್ನು ತಳ್ಳಿ ಹಾಕಿದ ಸುಪ್ರಿಂಕೋರ್ಟ್‌

Next Post

ರಾಜ್ಯದಲ್ಲಿ ಭಾರೀ ಮಳೆ ಹಿನ್ನೆಲೆ , ಶಾಲೆಗಳಿಗೆ ರಜೆ ಬಗ್ಗೆ ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ!

Related Posts

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
0

ಮೇಷ ರಾಶಿಯ ಇಂದಿನ ಭವಿಷ್ಯ ಮೇಷ ರಾಶಿಯ ವ್ಯಾಪಾರಿಗಳಿಗೆ ಇಂದು ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ನಿಮಗೆ ಹೊಸ ಯೋಚನೆಗಳು ಕೈಗೂಡುತ್ತದೆ. ನಿಮ್ಮ ಕುಟುಂಬ ಸದಸ್ಯರೊಂದಿಗಿನ ನಿಮ್ಮ...

Read moreDetails
ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

December 17, 2025
ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

December 17, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರ ಗೌಡಗೆ ಟಿವಿ ಭಾಗ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರ ಗೌಡಗೆ ಟಿವಿ ಭಾಗ್ಯ

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025
Next Post
ರಾಜ್ಯದಲ್ಲಿ ಭಾರೀ ಮಳೆ ಹಿನ್ನೆಲೆ , ಶಾಲೆಗಳಿಗೆ ರಜೆ ಬಗ್ಗೆ ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ!

ರಾಜ್ಯದಲ್ಲಿ ಭಾರೀ ಮಳೆ ಹಿನ್ನೆಲೆ , ಶಾಲೆಗಳಿಗೆ ರಜೆ ಬಗ್ಗೆ ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ!

Please login to join discussion

Recent News

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
Top Story

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
December 17, 2025
ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?
Top Story

ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

December 18, 2025
ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

December 17, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada