ರಾಜ್ಯ ರೈತ ಸಂಘದ ಮುಖಂಡ ಹಾಗೂ ಬಿಕೆಯು ದಕ್ಷಿಣ ಭಾರತ ಪ್ರಾಂತ್ಯ ಅಧ್ಯಕ್ಷ ಕೆಟಿ ಗಂಗಾಧರ್ ಪ್ರಧಾನ ಮಂತ್ರಿ ನರೇಂದ್ರ ಮೋದಿ ರೈತವಿರೋಧಿ ಕಾನೂನುಗಳನ್ನ ವಾಪಸ್ ಪಡೆದುಕೊಂಡಿರೋದನ್ನ ಸ್ವಾಗತಿಸಿದ್ದಾರೆ.
ಮಾಧ್ಯಮಗಳೊಂದಿಗೆ ಇಂದು ಶಿವಮೊಗ್ಗದಲ್ಲಿ ಮಾತನಾಡಿ, ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿ, ಈ ನೆಲದ ಮೇಲೆ ಜಾರಿ ಮಾಡಿದ್ದಂತಹ ಮೂರು ರೈತ ವಿರೋಧಿ ಕಾನೂನುಗಳನ್ನ ನಾನು ವಾಪಸ್ ಪಡೆದಿದ್ದೇನೆ ಎಂದು ಹೇಳಿದ್ದಾರೆ. ಈ ನಿರ್ಣಯವನ್ನ ಮುಂಬರುವ ಸಂಸತ್ ಕಲಾಪದಲ್ಲಿ ಮಂಡನೆ ಮಾಡುತ್ತೇನೆ, ಅಲ್ಲಿ ಏನು ತೀರ್ಮಾನ ಆಗುತ್ತೋ ಅದನ್ನ ನಾವು ಒಪ್ಪುತ್ತೇವೆ ಎಂದು ಹೇಳಿದ್ದಾರೆ. ಇದು ಮೊಟ್ಟ ಮೊದಲ ಬಾರಿಗೆ ಭಾರತ ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ ಸಿಕ್ಕ ಜಯ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.