• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅಕಾಲಿಕ ಮಳೆಯಿಂದಾಗಿ ಸಂಕಷ್ಟದಲ್ಲಿ ಸಿಲುಕಿದ ರಾಗಿ ಬೆಳೆಗಾರ: ಬೆಳೆ ನಷ್ಟದ ವಿಮಾ ಪರಿಹಾರ ತ್ವರಿತವಾಗಿ ನೀಡಲು ಆದೇಶ

ಫಾತಿಮಾ by ಫಾತಿಮಾ
November 26, 2021
in ದೇಶ
0
ಅಕಾಲಿಕ ಮಳೆಯಿಂದಾಗಿ ಸಂಕಷ್ಟದಲ್ಲಿ ಸಿಲುಕಿದ ರಾಗಿ ಬೆಳೆಗಾರ: ಬೆಳೆ ನಷ್ಟದ ವಿಮಾ ಪರಿಹಾರ ತ್ವರಿತವಾಗಿ ನೀಡಲು ಆದೇಶ
Share on WhatsAppShare on FacebookShare on Telegram

ಕೇರಳದಲ್ಲಿ ಮತ್ತೊಮ್ಮೆ ಐದು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಂಭವವಿದೆ ಎಂದು‌ ಹವಾಮಾನ ಇಲಾಖೆ ಸೂಚಿಸಿರುವಂತೆಯೇ ಕರ್ನಾಟಕ ಮುಖ್ಯಮಂತ್ರಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ಈ ಮಧ್ಯೆ ಕರ್ನಾಟಕದಲ್ಲಿ ಬೆಳೆ ಹಾನಿ ಪ್ರಮಾಣ ಮಂಗಳವಾರ 3.8 ಲಕ್ಷದಿಂದ 5 ಲಕ್ಷ ಹೆಕ್ಟೇರ್‌ಗೆ ಏರಿಕೆಯಾಗಿದೆ. ಪರಿಷ್ಕೃತ ಡಾಟಾವು ಬಡ ರೈತರ ಸುಲಭ ಬೆಲೆಯಾದ ರಾಗಿಯು ಹೆಚ್ಚು ಹಾನಿಗೊಳಗಾಗಿದೆ ಎಂದು ತೋರಿಸಿದೆ . ಒಟ್ಟು 2.76 ಲಕ್ಷ ಹೆಕ್ಟೇರ್ ಪ್ರದೇಶದ ರಾಗಿ ಬೆಳೆ ಹಾನಿಯಾಗಿದೆ. ಇದು ಹಾನಿಗೊಳಗಾದ ಬೆಳೆಯ 55%.

ADVERTISEMENT

ಅದರಲ್ಲೂ ರಬಿ ಋತುವಿನ ಮಳೆಯ ಮೇಲೆ ಅವಲಂಬಿತವಾಗಿರುವ ಕೋಲಾರ, ತುಮಕೂರು ಮತ್ತು ಚಿಕ್ಕಬಳ್ಳಾಪುರದ ರೈತರು ಹವಾಮಾನ ವೈಪರೀತ್ಯಗಳಿಂದ ಹೆಚ್ಚಿನ ಹಾನಿ ಅನುಭವಿಸಿದ್ದಾರೆ.  ಖಾರಿಫ್ ಹಂಗಾಮಿನಲ್ಲಿ 6.88 ಲಕ್ಷ ಹೆಕ್ಟೇರ್‌ನಲ್ಲಿ ರಾಗಿ ಬಿತ್ತನೆಯಾಗಿದ್ದು, ಶೇ.40ರಷ್ಟು ಮಳೆ ಹಾನಿಯಾಗಿದೆ ಎಂದು ಅಂಕಿಅಂಶಗಳು ತೋರಿಸಿವೆ.  

ದಕ್ಷಿಣ ಕರ್ನಾಟಕದ ಸುಮಾರು10 ಜಿಲ್ಲೆಗಳ ಬಡ ರೈತರ ಪ್ರಧಾನ ಬೆಳೆಯಾಗಿದೆ ರಾಗಿ.  ದುಬಾರಿ ಬೀಜಗಳು ಮತ್ತು ರಸಗೊಬ್ಬರಗಳಲ್ಲಿ ಹೂಡಿಕೆ ಮಾಡಿರುವ ರೈತರು ಅಕಾಲಿಕ‌ ಮಳೆ ಬಂದು ಈಗ ಸಂಕಷ್ಟಕ್ಕೆ ಈಡಾಗಿದ್ದಾರೆ. “70% ಭೂ ಹಿಡುವಳಿಗಳು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸೇರಿದ್ದು ಎಂದು ಪರಿಗಣಿಸಿ, 1.5 ಲಕ್ಷಕ್ಕೂ ಹೆಚ್ಚು ರೈತರು ಮಳೆಯಿಂದ ಹಾನಿಗೊಳಗಾಗಿದ್ದಾರೆ ಎಂದು ನಾವು ಅಂದಾಜಿಸಿದ್ದೇವೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

“ಡಿಸೆಂಬರ್ ಅಂತ್ಯದ ವೇಳೆಗೆ ರಾಗಿ ಬೆಳೆ ಕಟಾವು ಆಗಬೇಕಿತ್ತು. ಈಗ ಅಕಾಲಿಕ‌ ಮಳೆ ಸುರಿದು ರೈತ ಪಟ್ಟ ಕಷ್ಟ ಮಣ್ಣುಪಾಲಾದಂತಾಗಿದೆ” ಎನ್ನುತ್ತಾರೆ ಗೌರಿಬಿದನೂರಿನ ರೈತ ಮಂಜುನಾಥ ಗೌಡ. ಕೃಷಿ ಇಲಾಖೆಯ ಹೆಚ್ಚುವರಿ ಪ್ರಭಾರ ವಹಿಸಿಕೊಂಡಿರುವ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಮಾತನಾಡಿ, ಸರಕಾರಕ್ಕೆ ರಾಗಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ಅರಿವಿದ್ದು “ಕರ್ನಾಟಕದ ದಕ್ಷಿಣ ಜಿಲ್ಲೆಗಳ ಕುಟುಂಬಗಳಿಗೆ 5 ಕೆಜಿ ಪಿಡಿಎಸ್ ಪಡಿತರ ಜೊತೆಗೆ 1 ಕೆಜಿ ರಾಗಿ ನೀಡಬೇಕು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.  ಬಿಕ್ಕಟ್ಟನ್ನು ತಗ್ಗಿಸಲು ಸಹಾಯ ಮಾಡಲು ವಿಪತ್ತು ಪರಿಹಾರ ನಿಧಿಯ ಅಡಿಯಲ್ಲಿ ರೈತರಿಗೆ ಪರಿಹಾರ ಒದಗಿಸುವ  ಬಗ್ಗೆಯೂ ಸರ್ಕಾರ ಕೆಲಸ ಮಾಡುತ್ತಿದೆ” ಎಂದು ಹೇಳಿದ್ದಾರೆ. “ಅಂತಹ ನಷ್ಟದ ಹೊರತಾಗಿಯೂ, ಒಟ್ಟು ಉತ್ಪಾದನೆಯ‌ ಮೇಲೆ ಈ ಹಾನಿಯು ಪರಿಣಾಮ ಬೀರುವುದಿಲ್ಲ ಎಂದು ನಾವು ನಂಬುತ್ತೇವೆ. ಈ ವರ್ಷ 12 ಲಕ್ಷ ಟನ್‌ ರಾಗಿ ಉತ್ಪಾದನೆಯ ನಿರೀಕ್ಷೆಯಲ್ಲಿದ್ದೇವೆ.  ಕಳೆದ ವರ್ಷ 4.75 ಲಕ್ಷ ಟನ್‌ ಸಂಗ್ರಹಿಸಿದ್ದೆವು.  ನಾವು ಈ ವರ್ಷ ಪಡಿತರಕ್ಕಾಗಿ ರಾಗಿ ಸಂಗ್ರಹಣೆಯನ್ನು ಹೆಚ್ಚಿಸುವ ಗುರಿ ಹೊಂದಲಾಗಿದೆ” ಎಂದು ಅವರು ಹೇಳಿದ್ದಾರೆ. ಅಲ್ಲದೆ ರೈತರಿಗೆ ವಿಮಾ ಕಂಪನಿಗಳಿಂದ ಬೆಳೆ ನಷ್ಟದ ವಿಮಾ ಮೊತ್ತವನ್ನು ತ್ವರಿತವಾಗಿ ವಿತರಿಸಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Tags: Lakhs of ragi farmers are in distress due to vagaries of weather: Orderd to provide crop loss insurance compensation quickly
Previous Post

ಅಕಾಲಿಕ ಮಳೆ ಬೆತ್ತಲು ಮಾಡಿದ ಸರ್ಕಾರದ ರೈತ ವಿರೋಧಿ ನೀತಿ!

Next Post

ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಉದ್ಯಮಿಗಳಿಗೆ ಸಿಹಿ ಸುದ್ದಿ : ಕೊರೋನಾ, ಲಾಕ್ ಡೌನ್ ನೆಪದಲ್ಲಿ 50% ಆಸ್ತಿ ತೆರಿಗೆಯಲ್ಲಿ ರಿಯಾಯಿತಿ.!!

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
Next Post
ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 28 IAS ಅಧಿಕಾರಿಗಳು ವರ್ಗಾವಣೆ

ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಉದ್ಯಮಿಗಳಿಗೆ ಸಿಹಿ ಸುದ್ದಿ : ಕೊರೋನಾ, ಲಾಕ್ ಡೌನ್ ನೆಪದಲ್ಲಿ 50% ಆಸ್ತಿ ತೆರಿಗೆಯಲ್ಲಿ ರಿಯಾಯಿತಿ.!!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada