• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದಶಕಗಳ ಬೇಡಿಕೆಯಾಗಿದ್ದ ತುಮರಿ ಸೇತುವೆ ನಿರ್ಮಾಣ ಕಾಮಾಗಾರಿ ಭರದಿಂದ ಸಾಗಿದೆ.

Shivakumar by Shivakumar
November 26, 2021
in ಕರ್ನಾಟಕ
0
ದಶಕಗಳ ಬೇಡಿಕೆಯಾಗಿದ್ದ ತುಮರಿ ಸೇತುವೆ ನಿರ್ಮಾಣ ಕಾಮಾಗಾರಿ ಭರದಿಂದ ಸಾಗಿದೆ.
Share on WhatsAppShare on FacebookShare on Telegram

ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಸೇತುವೆ ನಿರ್ಮಾಣ ಕಾಮಗಾರಿ ಕರೊನಾ ಲಾಕ್ ಡೌನ್ ನಡುವೆಯೂ ನಿರಂತರವಾಗಿ ಸಾಗಿದೆ.

ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು 2.42 ಕಿ.ಮೀ ಉದ್ದದ ಸೇತುವೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಹಿನ್ನೀರಿನ ಎರಡೂ ದಡಗಳಲ್ಲಿ ಸೇತುವೆಗೆ ಪೂರಕ ರಸ್ತೆ ನಿರ್ಮಾಣ ಕೂಡ ಮಾಡಲಾಗುತ್ತಿದೆ. ಇನ್ನು ಈ ಕಾಮಾಗರಿಯನ್ನು ಮಧ್ಯಪ್ರದೇಶ ಮೂಲದ ದಿಲೀಪ್ ಬಿಲ್ಡ್ ಕಾನ್ ಕಂಪನಿಯು ಗುತ್ತಿಗೆ ಪಡೆದಿದೆ.

24 ಪಿಲ್ಲರ್​ಗಳನ್ನು ಬಳಸಿ ಈ ಸೇತುವೆ ನಿರ್ಮಾಣ ಮಾಡುತ್ತಿದ್ದು, ಆರು ಪಿಲ್ಲರ್​ಗಳು ನೀರಿನಲ್ಲಿ ಬರಲಿದೆ. ಈಗಾಗಲೇ ಸೇತುವೆ ನಿರ್ಮಾಣದ ಶೇ.50ರಷ್ಟು ಕಾಮಗಾರಿ ಮುಗಿದಿದ್ದು, ಬಹುತೇಕ ಪಿಲ್ಲರ್ ನಿರ್ಮಾಣ ಪೂರ್ಣಗೊಂಡಿದೆ.

ADVERTISEMENT

ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅಧಿಕಾರವಧಿಯ ಸಮಯದಿಂದಲೂ ಈ ಮಾರ್ಗಕ್ಕೆ ಸೇತುವೆ ನಿರ್ಮಾಣದ ಕೂಗು ಕೇಳಿ ಬಂದಿತ್ತು. ಆದರೆ, ಈ ಕಾರ್ಯ ನೆನೆಗುದಿಗೆ ಬಿದ್ದ ಪರಿಣಾಮ ಜನ ಲಾಂಚ್​ ಮೂಲಕವೇ ಓಡಾಟ ನಡೆಸುತ್ತಿದ್ದಾರೆ. 2013ರಲ್ಲಿ  ಸೇತುವೆ ನಿರ್ಮಾಣಕ್ಕೆ ಅಧಿಕೃತ ಘೋಷಣೆ ಮಾಡಿ ಸರ್ವೆ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಬಳಿಕ 2018ರಲ್ಲಿ ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ ಕಾಮಗಾರಿಗೆ ಚಾಲನೆ ನೀಡಿದ್ದರು. ಸದ್ಯ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಲ್ಲಿ ಸೇತುವೆ ಕಾಮಗಾರಿ ನಡೆಯುತ್ತಿದೆ. ಸೇತುವೆ ಜೊತೆಗೆ ಬೈಂದೂರು-ರಾಣೆಬೆನ್ನೂರು ರಾಷ್ಟ್ರಿಯ ಹೆದ್ದಾರಿ ಮಾರ್ಗ ಘೋಷಣೆಯಾಗಿದ್ದು, ಆ ಕಾಮಗಾರಿ ಕೂಡ ಆರಂಭವಾಗಿದೆ.

ಅಂಬಾರಗೋಡ್ಲು-ಕಳಸವಳ್ಳಿ ಮಾರ್ಗದಲ್ಲಿ ಸಂಚರಿಸುವ ಜನರಿಗೆ ಇಲ್ಲಿನ ಲಾಂಚ್​ ಒಂದೇ ಏಕೈಕ ಮಾರ್ಗ. ಸದ್ಯ ಮಾಮೂಲಿಯಂತೆ ಈ ಲಾಂಚ್​ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಈ ಸೇವೆಯಲ್ಲಿ ವ್ಯತ್ಯಾಸವಾಗಬಹುದು.

ಸಾಗರ ತಾಲೂಕು ತುಮರಿ ಪಂಚಾಯತಿ ವ್ಯಾಪ್ತಿಯ ಇಲ್ಲಿನ ಸಿಂಗದೂರು ಕ್ಷೇತ್ರಕ್ಕೆ ಬರುವ ಭಕ್ತರ ಸಂಖ್ಯೆ ಕೂಡ ಹೆಚ್ಚು. ಈ ಪ್ರದೇಶಕ್ಕೆ ಅಂಬಾರಗೊಡ್ಲು ಮಾರ್ಗದ ಹಿನ್ನೀರಿನ ಮೂಲಕ  ಕಳಸವಳ್ಳಿಗೆ ತೆರಳಬೇಕಾಗಿದ್ದು, ಇದು ಪ್ರಯಾಸದಾಯಕವಾಗಿತ್ತು. ಇದನ್ನು ಬಿಟ್ಟರೆ ಜೋಗದ ಅಥವಾ ನಿಟ್ಟೂರು ಮಾರ್ಗ ಬಳಸಿ ತಲುಪಬೇಕಿತ್ತು.

ಈಗ ಈ ಸೇತುವೆ ನಿರ್ಮಾಣದಿಂದ ಜನರು ತೊಂದರೆ ಪಡುವುದು ತಪ್ಪಲಿದ್ದು, ಜನರ ಬಹುದಿನದ ಕನಸು ನನಸಾಗಲಿದೆ. ಜೊತೆಗೆ ಕೊಲ್ಲೂರು ಮತ್ತು ಉಡುಪಿಗೆ ಮಲೆನಾಡು ಸಂಪರ್ಕ ಕಲ್ಪಿಸುವ ಮಾರ್ಗ ಇನ್ನಷ್ಟು ಹತ್ತಿರ ಕೂಡ ಆಗಲಿದೆ.

Tags: constructionTumari bridge
Previous Post

ಆಮ್ ಆದ್ಮಿ ಪಕ್ಷದಿಂದ ಬಾವುಟ ಹಿಡಿದು ತಿರಂಗಯಾತ್ರೆ!

Next Post

ಸಂವಿಧಾನ ದಿನಾಚರಣೆ ಮತ್ತು ಮೋದಿ ಆಡಳಿತದಲ್ಲಿ ಸಂವಿಧಾನಕ್ಕೆ ಸಿಗುತ್ತಿರುವ ಗೌರವ

Related Posts

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..
Top Story

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಬೆಳಂಬೆಳಿಗ್ಗೆ ಪಶ್ಚಿಮ ಬಂಗಾಳ ಮೂಲದ ದಂಪತಿಗಳ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಗರದ ಹೃದಯ ಭಾಗವಾಗಿರುವ ಎಲೆಕ್ಟ್ರಾನಿಕ್ ಸಿಟಿಯ ಸಮೀಪದ ಬೆಟ್ಟದಾಸನಪುರದಲ್ಲಿ ರೋಡ್...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ಸಂವಿಧಾನ ದಿನಾಚರಣೆ ಮತ್ತು ಮೋದಿ ಆಡಳಿತದಲ್ಲಿ ಸಂವಿಧಾನಕ್ಕೆ ಸಿಗುತ್ತಿರುವ ಗೌರವ

ಸಂವಿಧಾನ ದಿನಾಚರಣೆ ಮತ್ತು ಮೋದಿ ಆಡಳಿತದಲ್ಲಿ ಸಂವಿಧಾನಕ್ಕೆ ಸಿಗುತ್ತಿರುವ ಗೌರವ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada