• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಶಾರ್ಜಿಲ್ ಇಮಾಮ್‌ಗೆ ಜಾಮೀನು ಮಂಜೂರು ಮಾಡಿದ ಅಲಹಾಬಾದ್ ಹೈಕೋರ್ಟ್: ಇನ್ನೂ ಇತ್ಯರ್ಥವಾಗದ UAPA ಪ್ರಕರಣ!

ಪ್ರತಿಧ್ವನಿ by ಪ್ರತಿಧ್ವನಿ
November 28, 2021
in ದೇಶ
0
ಶಾರ್ಜಿಲ್ ಇಮಾಮ್‌ಗೆ ಜಾಮೀನು ಮಂಜೂರು ಮಾಡಿದ ಅಲಹಾಬಾದ್ ಹೈಕೋರ್ಟ್: ಇನ್ನೂ ಇತ್ಯರ್ಥವಾಗದ UAPA ಪ್ರಕರಣ!
Share on WhatsAppShare on FacebookShare on Telegram

2019ರಲ್ಲಿ ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದಲ್ಲಿ ಭಾಷಣ ಮಾಡಿದ್ದಕ್ಕಾಗಿ ದೇಶದ್ರೋಹದ ಪ್ರಕರಣದಡಿಯಲ್ಲಿ ಬಂಧಿತರಾಗಿದ್ದ ವಿದ್ಯಾರ್ಥಿ ನಾಯಕ ಶಾರ್ಜೀಲ್ ಇಮಾಮ್‌ ಅವರಿಗೆ ಅಲಹಾಬಾದ್ ಹೈಕೋರ್ಟ್ ಶನಿವಾರ, ನವೆಂಬರ್ 28ರಂದು ಜಾಮೀನು ನೀಡಿದೆ. ಅವರ ಮೇಲೆ ಐಪಿಸಿ ಸೆಕ್ಷನ್ 124A (ದೇಶದ್ರೋಹ), 153A (ಧರ್ಮ, ಜನಾಂಗದ ದ್ವೇಷ ಉತ್ತೇಜಿಸುವುದು), 153B (ಶಾಂತಿ ಭಂಗವನ್ನು ಪ್ರಚೋದಿಸುವ ಹೇಳಿಕೆಗಳನ್ನು ನೀಡುವುದು) ಮತ್ತು 505(2) (ಆತಂಕಕಾರಿ ಹೇಳಿಕೆಗಳು, ತಪ್ಪು ಉದ್ದೇಶವನ್ನು ಸೃಷ್ಟಿಸುವ ಹೇಳಿಕೆಗಳು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು.

ADVERTISEMENT

ದೆಹಲಿ, ಮಣಿಪುರ, ಅಸ್ಸಾಂ ಮತ್ತು ಅರುಣಾಚಲ ಪ್ರದೇಶಗಳಲ್ಲೂ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.  ಈಗಾಗಲೇ ಅಸ್ಸಾಂ ಮತ್ತು ಅರುಣಾಚಲ ಪ್ರದೇಶ ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದರೂ ಅಕ್ಟೋಬರ್‌ನಲ್ಲಿ ದೆಹಲಿಯ ನ್ಯಾಯಾಲಯವು ಆ ಭಾಷಣಕ್ಕಾಗಿ ಇಮಾಮ್‌ಗೆ ಜಾಮೀನು ನಿರಾಕರಿಸಿತ್ತು. “ಪ್ರಚೋದನಕಾರಿ ಭಾಷಣದ ಧ್ವನಿಯು ಸಾರ್ವಜನಿಕ ಶಾಂತಿ, ಸಮಾಜದ ಶಾಂತಿ ಮತ್ತು ಸಾಮರಸ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತದೆ” ಎಂದು ಜಾಮೀನು ನಿರಾಕರಣೆಗೆ ಕಾರಣ ನೀಡಿತ್ತು.

ದೆಹಲಿ ಗಲಭೆಗೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ (UAPA) ಕಾಯಿದೆಯಡಿಯಲ್ಲೂ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.  ನವೆಂಬರ್ 2 ರಂದು ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಇಮಾಮ್‌‌ರ ಜಾಮೀನು ಅರ್ಜಿಯ ಕುರಿತು ತನ್ನ ಆದೇಶವನ್ನು ಕಾಯ್ದಿರಿಸಿದೆ.

ಇಮಾಮ್ ಅವರು ತಮ್ಮ ವಕೀಲರಾದ ಅಹ್ಮದ್ ಇಬ್ರಾಹಿಂ ಮೂಲಕ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ತಾವು ಶಾಂತಿ ಬಯಸುವ ಪ್ರಜೆಯಾಗಿದ್ದು ಯಾವ ಪ್ರತಿಭಟನೆಯ ಸಮಯದಲ್ಲೂ ಹಿಂಸಾಚಾರದಲ್ಲಿ ಭಾಗಿಯಾಗಲಿಲ್ಲ ಎಂದು ಹೇಳಿದ್ದಾರೆ. ಡಿಸೆಂಬರ್ 13 ರಂದು ಮಾಡಿದ ಭಾಷಣವೇ ಆಗಿರಲಿ ಅಥವಾ ತನ್ನ ಯಾವುದೇ ಭಾಷಣದಲ್ಲಿ ಆಗಿರಲಿ ಕಾನೂನಿನಿಂದ ಸ್ಥಾಪಿಸಲ್ಪಟ್ಟ ಸರ್ಕಾರದ ವಿರುದ್ಧ ಯಾವುದೇ ಅಸಮಾಧಾನವನ್ನು ಹರಡುವ ಅಥವಾ ಯಾವುದೇ ಸಮುದಾಯದ ವಿರುದ್ಧ ಹಿಂಸೆ ಅಥವಾ ಕೋಮುಭಾವನೆಯನ್ನು ಪ್ರಚೋದಿಸುವ ಗುರಿಯನ್ನು ಹೊಂದಿಲ್ಲ ಎಂದು ಅವರು ವಾದಿಸಿದರು.

ಫೆಬ್ರವರಿ 2020 ರ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದಾಖಲಿಸಿರುವ ಪ್ರಕರಣಗಳು ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿ ಪ್ರತಿಭಟನಾಕಾರರನ್ನು ಗುರಿಯಾಗಿಸಿಕೊಂಡಿವೆ ಎಂದು ಈಗಾಗಲೇ ಹಲವಾರು ಮಾನವ ಹಕ್ಕುಗಳ ಹೋರಾಟಗಾರರು ಅಭಿಪ್ರಾಯ ಪಟ್ಟಿದ್ದಾರೆ.  ತಿಂಗಳುಗಟ್ಟಲೆ ಶಾಂತಿಯುತವಾಗಿ ಆಂದೋಲನ ನಡೆಸುತ್ತಿದ್ದವರ ಮೇಲೆ ಪ್ರಕರಣ ದಾಖಲಿಸಿದ ಪೊಲೀಸರು ಬಹಿರಂಗವಾಗಿ ಪ್ರಚೋದನಕಾರಿ ಮತ್ತು ಬೆದರಿಕೆಯ ಭಾಷಣ ಮಾಡಿದ ಬಲಪಂಥೀಯ ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸಲಿಲ್ಲ ಎನ್ನುವ ದೂರುಗಳನ್ನೂ ಸಲ್ಲಿಸಿದ್ದಾರೆ.

ಅಲಹಾಬಾದ್ ಹೈಕೋರ್ಟ್ ಸದ್ಯಕ್ಕೆ ಶಾರ್ಜಿಲ್ ಇಮಾಮ್ ಅವರಿಗೆ ಜಾಮೀನು ಮಂಜೂರು ಮಾಡಿದ್ದರೂ ಯುಎಪಿಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣ ಸೇರಿದಂತೆ ಅವರ ವಿರುದ್ಧದ ಇತರ ಪ್ರಕರಣಗಳು ಇನ್ನೂ ಬಾಕಿಯಿರುವುದರಿಂದ ಅವರು ಸದ್ಯಕ್ಕೆ ಜೈಲಿನಲ್ಲಿಯೇ ಇರಲಿದ್ದಾರೆ.

Tags: BJPCongress PartyCovid 19sharjeel imamUAPAಅಲಹಾಬಾದ್ ಹೈಕೋರ್ಟ್ನರೇಂದ್ರ ಮೋದಿಬಿಜೆಪಿಶಾರ್ಜಿಲ್ ಇಮಾಮ್‌
Previous Post

HDKಯನ್ನು ಸೋಲಿಸಲು ಒಂದಾದ್ರಾ ಮಾಜಿ ಶಾಸಕ ಬಾಲಕೃಷ್ಣಾ ಮತ್ತು ಸಿ.ಪಿ ಯೋಗೀಶ್ವರ್?

Next Post

ರಾಜಕೀಯ ಲಾಭಕ್ಕಾಗಿ ನಕಲಿ ಲಸಿಕೆ ಅಭಿಯಾನ ನಡೆಸಿದರೆ ತುಮಕೂರು ಶಾಸಕ ಗೌರಿಶಂಕರ್?

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ರಾಜಕೀಯ ಲಾಭಕ್ಕಾಗಿ ನಕಲಿ ಲಸಿಕೆ ಅಭಿಯಾನ ನಡೆಸಿದರೆ ತುಮಕೂರು ಶಾಸಕ ಗೌರಿಶಂಕರ್?

ರಾಜಕೀಯ ಲಾಭಕ್ಕಾಗಿ ನಕಲಿ ಲಸಿಕೆ ಅಭಿಯಾನ ನಡೆಸಿದರೆ ತುಮಕೂರು ಶಾಸಕ ಗೌರಿಶಂಕರ್?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada