ಭಾರತದಲ್ಲಿ ಒಮಿಕ್ರಾನ್ ರೂಪಾಂತರದ ಎರಡು COVID-19 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವಾಲಯ ಇಂದು ಗುರುವಾರ ತಿಳಿಸಿದೆ, ದೇಶದ ಗಡಿಯೊಳಗೆ ಕರೋನವೈರಸ್ ನ ಹೊಸ ಸ್ಟ್ರೈನ್ ಎಂಟ್ರಿಯಾಗಿರುವುದು ಜಾಗತಿಕ ಎಚ್ಚರಿಕೆಯನ್ನು ಉಂಟುಮಾಡಿದೆ.
ಎರಡೂ ಪ್ರಕರಣಗಳು ಕರ್ನಾಟಕದಲ್ಲಿ ವರದಿಯಾಗಿದ್ದು, ರೋಗಿಗಳು 66 ಮತ್ತು 46 ವರ್ಷದ ಇಬ್ಬರು ಪುರುಷರು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಭಾರತದಲ್ಲಿ ಎರಡು ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು ಎರಡು ಪ್ರಕರಣಗಳು ಕರ್ನಾಟಕದಲ್ಲೇ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕರ್ನಾಟಕದಲ್ಲಿನ 66 ವರ್ಷದ ವೃದ್ಧ, 46 ವರ್ಷದ ವ್ಯಕ್ತಿಗೆ ಒಮಿಕ್ರಾನ್ ಇರುವುದಾಗಿ ಪತ್ತೆಯಾಗಿದೆ ಎಂದು ಲವ್ ಅಗರವಾಲ್ ಹೇಳಿದ್ದಾರೆ.
ದೆಹಲಿಯಲ್ಲಿ ಕೇಂದ್ರದ ಆರೋಗ್ಯ ಇಲಾಖೆಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಲವ್ ಅಗರವಾಲ್ ದೇಶದಲ್ಲಿ ಸದ್ಯ ಕೇರಳ, ಮಹಾರಾಷ್ಟ್ರ ರಾಜ್ಯಗಳಲ್ಲಿ ಮಾತ್ರ ಹೆಚ್ಚಿನ ಕೊರೊನಾ ಸಕ್ರಿಯ ಪ್ರಕರಣಗಳಿವೆ. ದೇಶದ 18 ಜಿಲ್ಲೆಯಲ್ಲಿ ಕೊರೊನಾ ಟೆಸ್ಟಿಂಗ್ ಪಾಸಿಟಿವಿಟಿ ದರ ಶೇ.5-10 ರಷ್ಟು ಇದೆ. 15 ಜಿಲ್ಲೆಯಲ್ಲಿ ವಾರದ ಟೆಸ್ಟಿಂಗ್ ಪಾಸಿಟಿವಿಟಿ ದರ ಶೇ.10 ಕ್ಕಿಂತ ಜಾಸ್ತಿ ಇದೆ ಎಂದು ಹೇಳಿದ್ದಾರೆ. ದೇಶದಲ್ಲಿ ಇದುವರೆಗೂ 125 ಕೋಟಿ ಗಿಂತ ಹೆಚ್ಚು ಡೋಸ್ ನೀಡಲಾಗಿದೆ. ಈ ಪೈಕಿ ಶೇ 84.3 ವಯಸ್ಕ ಜನರಿಗೆ ಸಿಂಗಲ್ ಡೋಸ್ ಲಸಿಕೆ ಮತ್ತು ದೇಶದ ಶೇಕಡಾ 49 ರಷ್ಟು ಜನರಿಗೆ ಎರಡು ಡೋಸ್ ಲಸಿಕೆ ನೀಡಲಾಗಿದೆ ಎಂದಿದ್ದಾರೆ.
ಅಮೆರಿಕದಲ್ಲಿ ಮೊದಲ ಒಮಿಕ್ರೋನ್ ಪ್ರಕರಣ ಪತ್ತೆಯಾಗಿದೆ, ಹೀಗಾಗಿ, ಪ್ರತಿಯೊಬ್ಬ ನಾಗರಿಕನೂ ಲಸಿಕೆ ಪಡೆಯುವಂತೆ ವೈಟ್ಹೌಸ್ ಮನವಿ ಮಾಡಿದೆ.
ಐರೋಪ್ಯ ದೇಶಗಳು 20 ಲಕ್ಷಕ್ಕೂ ಹೆಚ್ಚು ಹೊಸ ಸೋಂಕು ಪ್ರಕರಣಗಳು ಪ್ರತಿವಾರ ವರದಿಯಾಗುತ್ತಿವೆ. ಲಸಿಕಾಕರಣ ಹಾಗೂ ಚಿಕಿತ್ಸೆಯಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಹೀಗಾಗಿಯೇ ಕಳೆದ ವರ್ಷಕ್ಕೆ ಹೋಲಿಸಿದರೆ ಸಾವಿನ ಪ್ರಮಾಣ ಸಾಕಷ್ಟು ಕಡಿಮೆಯಾಗಿದೆ. ನೆದರ್ಲೆಂಡ್, ಬೆಲ್ಜಿಯಂ, ಹಂಗೇರಿ, ಜೆಕ್ ರಿಪಬ್ಲಿಕ್, ಸ್ಲೋವಾಕಿಯಾ, ಡೆನ್ಮಾರ್ಕ್ ಮತ್ತು ನಾರ್ವೆ ದೇಶಗಳಲ್ಲಿ ಕಳೆದ ವಾರದಿಂದ ಸೋಂಕಿತರ ಪ್ರಮಾಣವು ಹೊಸ ದಾಖಲೆಗಳನ್ನು ಬರೆದಿದೆ.