ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಮೂವರು ಮುಖ್ಯಮಂತ್ರಿಯಾಗುತ್ತಾರೆ.ಬಿಜೆಪಿ ಸರ್ಕಾರದ ಅಜೆಂಡಾವೇ ಮೂವರು ಸಿಎಂ ಆಗುವುದು ಎಂದು ಕಾಂಗ್ರೆಸ್ ವಕ್ತಾರ ಗೋಪಾಲಕೃಷ್ಣ ಬೇಳೂರು ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ, ಸದಾನಂದ ಗೌಡ ಹಾಗೂ ಜಗದೀಶ್ ಶೆಟ್ಟರ್ ಸಿಎಂ ಅಗಿದ್ದರು.ಈ ಬಾರಿ ಯಡಿಯೂರಪ್ಪ ಸಿಎಂ ಆಗಿದ್ದರು. ಇದೀಗ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾರೆ. ಮುಂದಿನ ದಿನಗಳಲ್ಲಿ ಮುರುಗೇಶ ನಿರಾಣಿ ಸಿಎಂ ಆಗುತ್ತಾರಂತ ಅವರ ಪಕ್ಷದವರೇ ಹೇಳುತ್ತಿದ್ದಾರೆ.ಹೀಗಾಗಿ ಅಧಿಕಾರಕ್ಕೆ ಬಂದಾಗಲೆಲ್ಲಾ ಮೂವರು ಸಿಎಂ ಆಗುವುದೇ ಬಿಜೆಪಿ ಅಜೆಂಡಾ ಎಂದರು.
ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ನಿಧನ: ಸದನದಲ್ಲಿ ನುಡಿ ನಮನ
https://youtube.com/live/FN3GgTx9Q2E
Read moreDetails







