ಪುನೀತ್ ರಾಜ್ ಕುಮಾರ್ ಅವರ ಡ್ರೀಮ್ ಪ್ರಾಜೆಕ್ಟ್ ಆದ “ಗಂಧದಗುಡಿ” ಚಿತ್ರದ ಟೀಸರ್ ಅನ್ನು ಇಂದು ಪಾರ್ವತಮ್ಮ ರಾಜ್ ಕುಮಾರ್ ಹುಟ್ಟುಹಬ್ಬದಿನದಂದೇ ರಿಲೀಸ್ ಮಾಡಲಾಗಿದೆ.
ಪುನೀತ್ ರಾಜ್ಕುಮಾರ್ ಅವರು ‘ಗಂಧದ ಗುಡಿ’ ಡಾಕ್ಯುಮೆಂಟರಿ ಬಗ್ಗೆ ಸಾಕಷ್ಟು ಕನಸು ಕಂಡಿದ್ದರು. ಸ್ವತಃ ತಾವೇ ಕರ್ನಾಟಕ ಸುತ್ತಿ ಡಾಕ್ಯುಮೆಂಟರಿ ಕೆಲಸದಲ್ಲಿ ಭಾಗಿಯಾಗಿದ್ದರು. ಈಗ ನಟ ಅಪ್ಪು ಕಂಡ ಕನಸು ಅನಾವರಣಗೊಳಿಸಲಾಗಿದೆ. ಇಂದು ‘ಗಂಧದ ಗುಡಿ’ ಟೈಟಲ್ ಟೀಸರ್ ರಿಲೀಸ್ ಆಗಿದೆ.
PRK Audio ಯೂಟ್ಯೂಬ್ ಚಾನೆಲ್ನಲ್ಲಿ ‘ಗಂಧದಗುಡಿ’ ಟೀಸರ್ ಬಿಡುಗಡೆಯಾಗಿದ್ದು, ಪುನೀತ್ ಅವರು ಕರ್ನಾಟಕದ ಅರಣ್ಯ ಸಂಪತ್ತು ಹಾಗೂ ವನ್ಯಜೀವಿ ಜಗತ್ತಿನ ಬಗ್ಗೆ ಅದ್ಭುತ ಲೋಕವನ್ನು ತೆರೆದಿಟ್ಟಿದ್ದಾರೆ. ಟೀಸರ್ ಸಾಕಷ್ಟು ಕುತೂಹಲ ಕೆರಳಿಸಿದೆ.

ಅಮೋಘವರ್ಷ ಅವರು ‘ಗಂಧದಗುಡಿ’ ನಿರ್ದೇಶಿಸಿದ್ದು, ಪಿಆರ್ಕೆ ಪ್ರೊಡಕ್ಷನ್ ಅಡಿ ಅಶ್ವಿನಿ ಪುನೀತ್ ರಾಜ್ಕುಮಾರ್ ಹಾಗೂ ಮಡ್ಸ್ಕಿಪ್ಪರ್ ಸಂಸ್ಥೆಯವರು ನಿರ್ಮಾಣ ಮಾಡಿದ್ದಾರೆ.
ಚಿತ್ರೀಕರಣ ಸಂಪೂರ್ಣ ಮುಗಿಸಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ಇದೆ ಎಂದು ಚಿತ್ರತಂಡ ಹೇಳಿದೆ. 2022 ರಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ ಎಂದು ಟೀಸನ್ ನಲ್ಲೇ ಸ್ಪಷ್ಟವಾಗಿ ಹೇಳಿದ್ದಾರೆ.