• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ಬೊಮ್ಮಾಯಿ ನಮ್ಮ ನಿರೀಕ್ಷೆಗಳನ್ನೆಲ್ಲ ಸುಳ್ಳು ಮಾಡಿ ಬಿಜೆಪಿಯ ಬಹಳ ದೊಡ್ಡ ಸುಳ್ಳುಗಾರರಾಗಿದ್ದಾರೆ – ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
December 6, 2021
in ಕರ್ನಾಟಕ, ರಾಜಕೀಯ
0
ಇಡೀ ಸರ್ಕಾರ RSS ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ – ಸಿದ್ದರಾಮಯ್ಯ
Share on WhatsAppShare on FacebookShare on Telegram

ಬಸವರಾಜ್ ಬೊಮ್ಮಾಯಿಯವರ ಬಗ್ಗೆ ನನಗೆ ಕೆಲವು ನಿರೀಕ್ಷೆಗಳಿದ್ದವು. ನಮ್ಮ ಜೊತೆ ಬೆಳೆದ ಮನುಷ್ಯ. ಬಿಜೆಪಿಯ ಸುಳ್ಳಿನ ಕಾರ್ಖಾನೆಯಲ್ಲಿ ಉತ್ಪಾದನೆಗೊಂಡ ಮನುಷ್ಯರಲ್ಲ. ನಿಜ ಮತ್ತು ನೈತಿಕತೆಯ ಆಧಾರದ ಮೇಲೆ ಆಡಳಿತ ನಡೆಸಬಹುದು,  ನಮ್ಮ ಸರ್ಕಾರದ ಅವಧಿ ಮುಗಿದಾಗ ಅಭಿವೃದ್ಧಿ ಕೆಲಸಗಳು ಯಾವ ಹಂತದಲ್ಲಿದ್ದವೋ ಅಲ್ಲಿಂದ ಮುಂದಕ್ಕೆ ಕೊಂಡೊಯ್ಯುವ ಕಾಳಜಿಯನ್ನು ಬೊಮ್ಮಾಯಿಯವರು ತೋರಿಸುತ್ತಾರೆ ಎನ್ನುವ ನಿರೀಕ್ಷೆ ಇತ್ತು.  ಆದರೆ ನಮ್ಮ ನಿರೀಕ್ಷೆಗಳನ್ನೆಲ್ಲ ಸುಳ್ಳು ಮಾಡಿ ಬಿಜೆಪಿಯ ಬಹಳ ದೊಡ್ಡ ಸುಳ್ಳುಗಾರರಾಗಿ ಹೊರ ಹೊಮ್ಮುತ್ತಿರುವುದನ್ನು ನೋಡಿದರೆ, ಬೊಮ್ಮಾಯಿಯವರು ಕೆಲವೆ ದಿನಗಳಲ್ಲಿ ಜನರಿಂದ ಗೇಲಿಗೆ ಒಳಗಾಗುತ್ತಾರೆ ಎನ್ನಿಸುತ್ತಿದೆ.

ADVERTISEMENT

ಸುಳ್ಳು ಹೇಳುವುದರ ಮೂಲಕ ಸತ್ಯವನ್ನು ಮುಚ್ಚಿಡಲಾಗುವುದಿಲ್ಲ. ಬೊಮ್ಮಾಯಿಯವರು ನಿನ್ನೆ ಆನೇಕಲ್ ಮತ್ತು ಬೀದರ್‌ಗಳಲ್ಲಿ ಹಲವಾರು ಸುಳ್ಳುಗಳನ್ನು ಹೇಳಿದ್ದಾರೆ.

ಒಂದು; ಕಾಂಗ್ರೆಸ್‌ನವರು ಮನೆಗಳನ್ನೆ ನೀಡಿರಲಿಲ್ಲ ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ. ೨೦೧೭ ರಲ್ಲಿ ಚುನಾವಣೆಗಳು  ಮೂರು ತಿಂಗಳು ಇರುವಾಗ ೧ ಲಕ್ಷ ಮನೆಗಳನ್ನು ಘೋಷಿಸಿದರು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಯವರಿಗೆ ಮಾಹಿತಿ ಪಡೆದುಕೊಳ್ಳುವುದು ಕಷ್ಟವಲ್ಲ. ಮಾಹಿತಿ ಇದ್ದರೂ ಸುಳ್ಳು ಹೇಳುವುದು ತಪ್ಪು.  ಬೊಮ್ಮಾಯಿಯವರು ಹೇಳುತ್ತಿರುವ ಒಂದು ಲಕ್ಷ ಮನೆಗಳು ಬೆಂಗಳೂರಿನ ವಸತಿ ಯೋಜನೆಗೆ ಮಾತ್ರ ಸಂಬಂಧಿಸಿದ್ದು.

ನಾವು ಅಧಿಕಾರಕ್ಕೆ ಬಂದಿದ್ದರೆ ಆ ಯೋಜನೆಯನ್ನು ಪೂರ್ಣಗೊಳಿಸಿ  ಮತ್ತೆ ಹೊಸ ಯೋಜನೆಗಳನ್ನು ರೂಪಿಸುತ್ತಿದ್ದೆವು. ಮುಂದೆ ಅಧಿಕಾರಕ್ಕೆ ಬಂದು ಅದನ್ನು ಮಾಡಿಯೇ ತೀರುತ್ತೇವೆ. ಬಿಜೆಪಿಯವರು ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳಾದರೂ ಆ ಯೋಜನೆ ನಿರೀಕ್ಷಿತ ಪ್ರಗತಿ ಕಾಣುತ್ತಿಲ್ಲ.

೨೦೧೩ ರಿಂದ ೨೦೧೮ ರ ಮಾರ್ಚ್ ವರೆಗೆ ನಮ್ಮ ಸರ್ಕಾರದ ಅವಧಿಯಲ್ಲಿ ೧೫ ಲಕ್ಷ ಮನೆಗಳನ್ನು ೧೬೭೭೫.೫೨ ಕೋಟಿರೂಗಳ  ವೆಚ್ಚದಲ್ಲಿ ಜನರಿಗಾಗಿ ನಿರ್ಮಾಣ ಮಾಡಿಕೊಟ್ಟಿದ್ದೆವು. ಈ ಮಾಹಿತಿಯನ್ನು ವಸತಿ ಸಚಿವ ಸೋಮಣ್ಣನವರ ಕಛೇರಿಯಿಂದಲೆ ನನಗೆ ಲಿಖಿತವಾಗಿ ಕಳಿಸಿದ್ದಾರೆ. ಮಾಹಿತಿ ಇಲ್ಲದಿದ್ದರೆ ಬೊಮ್ಮಾಯಿಯವರು ಸೋಮಣ್ಣನವರನ್ನು ಕೇಳಿ ಪಡೆದುಕೊಳ್ಳಲಿ.

ನಾವು ಹಾಕಿಕೊಂಡಿದ್ದ ಗುರಿ ಮೀರಿ ಸಾಧನೆ ಮಾಡಿದ್ದೆವು. ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳಾಗುತ್ತಿವೆ. ಇದುವರೆಗೂ ಕೂಡ  ಪಂಚಾಯಿತಿಗಳಿಗೆ ಮನೆ ನಿರ್ಮಿಸಲು ಹೊಸ ಗುರಿಗಳನ್ನು ನೀಡಿ ಅದನ್ನು ಅನುಷ್ಟಾನ ಮಾಡಿಲ್ಲ.

ಎರಡನೆಯದಾಗಿ ಕಲ್ಯಾಣ ಕರ್ನಾಟಕದ ಜಿಲ್ಲೆಯಾದ ಬೀದರ್‌ನಲ್ಲಿ ಬಸವಣ್ಣನವರ ಕರ್ಮಭೂಮಿಯಲ್ಲಿ ನಿಂತು ಸುಳ್ಳು ಹೇಳಿ ಬಸವತತ್ವಕ್ಕೆ ಅಪಚಾರ ಮಾಡಿದ್ದಾರೆ. ಕಾಂಗ್ರೆಸ್‌ನವರು ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಖಾಲಿ ಇದ್ದ  ಸರ್ಕಾರಿ ಹುದ್ದೆಗಳನ್ನು ತುಂಬಿಲ್ಲ ಎಂದು ಹೇಳಿದ್ದಾರೆ. ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ೩೨ ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ. ಬಿಜೆಪಿಯದ್ದೇ ಇನ್ನೂ ಶೂನ್ಯ ಸಾಧನೆ.

ಮೂರು; ಕಾಂಗ್ರೆಸ್ ನವರು ಅಧಿಕಾರದಲ್ಲಿದ್ದಾಗ ಪಂಚಾಯಿತಿಗಳ ಕಡೆಗೆ ತಿರುಗಿ ನೋಡಿರಲಿಲ್ಲ ಎಂದಿದ್ದಾರೆ.  ನಾನು ಮುಖ್ಯ ಮಂತ್ರಿಯಾಗಿದ್ದಾಗ ನಮ್ಮ ಸರ್ಕಾರದ ಅವಧಿಯಲ್ಲಿ ಗ್ರಾಮ ವಿಕಾಸ ಮತ್ತು ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಜಾರಿಗೆ ತಂದೆವು.

ಆ ಯೋಜನೆಯಡಿ ೧೭೫೦ ಕೋಟಿ ರೂಪಾಯಿಗಳನ್ನು ನೀಡಿ ೨೦೦೦ ಗ್ರಾಮಗಳನ್ನು ಅಭಿವೃದ್ಧಿ ಪಡಿಸಿದ್ದೆವು. ಪ್ರತಿ ಗ್ರಾಮಕ್ಕೆ ತಲಾ ಒಂದೊಂದು ಕೋಟಿರೂಗಳನ್ನು  ನೀಡಿದ್ದೆವು. ಈ ಬಿಜೆಪಿಯವರು ಬಂದ ಮೇಲೆ ಅದಕ್ಕೂ ಕಲ್ಲು ಹಾಕಿ ಯೋಜನೆ ನಿಲ್ಲಿಸಿದರು.

ಈಗ ಅಮೃತ ಯೋಜನೆಯಡಿ ಕೆಲವೆ ಗ್ರಾಮಗಳಿಗೆ ಕೇವಲ ೨೫ ಲಕ್ಷ ನೀಡುತ್ತೇವೆಂದು ಬೊಮ್ಮಾಯಿವರು ಹೇಳುತ್ತಾರೆ. ೨೫ ಲಕ್ಷ ರೂಪಾಯಿಗಳಲ್ಲಿ ಏನು ಮಾಡುತ್ತಾರೆ. ಈ ಬಿಜೆಪಿ ಸರ್ಕಾರದಲ್ಲಿ ಲಂಚಕ್ಕಾಗಿ ಶೇ ೪೦-೫೨ ಹೋಗುತ್ತಿದೆಯೆಂದು ಗುತ್ತಿಗೆದಾರರ ಸಂಘದವರು ಪ್ರಧಾನಮಂತ್ರಿಗೆ, ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಜಿಎಸ್ ಟಿ ಗೆ ೧೮-೨೮% ಹೋಗುತ್ತದೆ. ಅಲ್ಲಿಗೆ ಶೇ ೭೦ ರಷ್ಟು ಕೊಚ್ಚಿ ಕೊಂಡು ಹೋಯಿತಲ್ಲ. ಗುತ್ತಿಗೆದಾರನಿಗೆ ೧೦ ಪರ್ಸೆಂಟ್ ಲಾಭ ಬೇಕು. ಉಳಿದದ್ದು ೨೦ ಪರ್ಸೆಂಟ್ ಮಾತ್ರ. ಬೊಮ್ಮಾಯಿಯವರು ೨೫ ಲಕ್ಷ ನೀಡುತ್ತೇನೆ ಎಂದರೆ ಗ್ರಾಮಗಳ ಕಾಮಗಾರಿಗಳಿಗೆ ಸಿಗುವುದು ಕೇವಲ ೫ ಲಕ್ಷ. ಅದಕ್ಕಾಗಿ ಅಮೃತ ಎಂದು ಯೋಜನೆ. ಇದು ಬಿಜೆಪಿಯವರ ಜೇಬಿಗೆ ಮಾತ್ರ ಅಮೃತ. ಜನರ ಪಾಲಿಗೆ ವಿಷ.

೧೫ ನೆ ಹಣಕಾಸು ಯೋಜನೆಯಲ್ಲಿ ಪಂಚಾಯತಿಗಳಿಗೆ ಮೊದಲು ೩೩೦೦ ಕೋಟಿ ಕೊಡುತ್ತೇವೆ ಅಂದರು. ಆದರೆ ಈಗ ಕೇವಲ ೨೪೦೦ ಕೊಟಿಗೆ ಇಳಿಸಿದ್ದಾರೆ.

 ನಮ್ಮ ಸರ್ಕಾರ ಇದ್ದಾಗ ಗ್ರಾಮೀಣ ಸುಮಾರ್ಗ, ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆ ಪ್ರಾರಂಭಿಸಿದ್ದೆವು. ಅದನ್ನೂ ನಿಲ್ಲಿಸಿದ್ದಾರೆ.

ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ಕಳೆದ ವರ್ಷ ಗ್ರಾಮೀಣ ರಸ್ತೆಗಳಿಗೆಂದು ೧೩೫೦ ಕೋಟಿ ನೀಡುವುದಾಗಿ ಆದೇಶ ಹೊರಡಿಸಿ ಕೆಲಸ ಮಾಡಿಸಿದರು. ಆದರೆ ಇದುವರೆಗೆ ಒಂದು ರೂಪಾಯಿಯನ್ನು ಬಿಡುಗಡೆ ಮಾಡಿಲ್ಲ. ಕೆಲಸ ಮಾಡಿದ ಗುತ್ತಿಗೆದಾರ ಏನು ಮಾಡಬೇಕು?

 ನಮ್ಮ ಸರ್ಕಾರದ ಅವಧಿಯಲ್ಲಿ ಗ್ರಾಮಚಾಯತಿಯ ನೌಕರರಿಗೆ ಸಂಬಳ ನೀಡಲೆಂದು ಪ್ರತಿ ವರ್ಷ ೯೧೨ ಕೋಟಿ ರೂಗಳನ್ನು ನೀಡುವ ನಿರ್ಧಾರ ತೆಗೆದುಕೊಂಡೆವು. ಅದರಿಂದ ಸಾವಿರಾರು ನೌಕರರಿಗೆ ಅನುಕೂಲವಾಯ್ತು.

ಗ್ರಾಮ ಪಂಚಾಯತ್ ಸದಸ್ಯರಿಗೆ ಗೌರವಧನ ಹೆಚ್ಚಿಸುವ ಮಾತನ್ನು ಬಿಜೆಪಿಯವರು ಆಡುತ್ತಿದ್ದಾರೆ. ಅದು ಇವರು ಮಾಡುವುದಿಲ್ಲ. ನಮ್ಮ ಪಕ್ಷಕ್ಕೆ ಮಾತ್ರ ಅಂಥ ಬದ್ಧತೆ ಇರುವುದು.

೨೦೧೪ ಕ್ಕಿಂತ ಮೊದಲು ಗ್ರಾಮ ಪಂಚಾಯತ್‌ಗಳಿಗೆ ನೇರವಾಗಿ ಒಂದು ರೂಪಾಯಿಯೂ ಬರುತ್ತಿರಲಿಲ್ಲ. ನರೇಂದ್ರ ಮೋದಿ ಎಂಬ ಪುಣ್ಯಾತ್ಮ ಬಂದ ಮೇಲೆ ಗ್ರಾಮ ಪಂಚಾಯತಿಗಳಿಗೆ ದುಡ್ಡು ಬಂತು ಅಂತ ಬಿಜೆಪಿಯ ಅಧ್ಯಕ್ಷರು  ಇತ್ತೀಚೆಗೆ ಕಲ್ಬುರ್ಗಿಯಲ್ಲಿ ಹೇಳಿದ್ದರು. ಇದೂ ಕೂಡ ದೊಡ್ಡ ಸುಳ್ಳು. ಗ್ರಾಮ ಪಂಚಾಯತಿಗಳಿಗೆ ಹಣ ಬರಲು ಪ್ರಾರಂಭಿಸಿದ್ದು ಮನಮೋಹನ್‌ಸಿಂಗ್‌ರವರು ನರೇಗಾ ಯೋಜನೆ ಪ್ರಾರಂಭಿಸಿದ ಮೇಲೆ.

ನರೇಗಾ ಯೋಜನೆ ಸೆಪ್ಟೆಂಬರ್ ೨೦೦೫ ರಲ್ಲಿ  ಜಾರಿಗೆ ಬಂತು. ಅಧಿಕೃತವಾಗಿ ಫೆಬ್ರವರಿ ೨೦೦೬ ರ ಫೆಬ್ರವರಿಯಿಂದ ಅಸ್ತಿತ್ವಕ್ಕೆ ಬಂತು. ಇದು ಮನಮೋಹನಸಿಂಗ್ ಅವರ ಯುಪಿಎ ಸರ್ಕಾರದ ಕೊಡುಗೆ. ಹಾಗೆ ನೋಡಿದರೆ ಪುಣ್ಯಾತ್ಮ ಅಂತ ಇದ್ದರೆ ಅದು ಮನಮೋಹನ್ ಸಿಂಗ್ ಮಾತ್ರ. ಮೋದಿಯವರಲ್ಲ.

ನರೇಗಾ ಯೋಜನೆಯನ್ನು ಆಗ ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಮೋದಿಯವರು ನಖ ಶಿಖಾಂತ ವಿರೋಧಿಸಿದ್ದರು, ೨೦೧೫ರ ವರೆಗೂ ಗೇಲಿ ಮಾಡುತ್ತಲೆ ಇದ್ದರು. ವಿರೋಧ ಮಾಡಿದವರು, ಜನಪರವಾದ ಒಂದು ಯೋಜನೆಯನ್ನು ಹಂಗಿಸಿದವರು ಹೇಗೆ ಪುಣ್ಯಾತ್ಮರಾಗುತ್ತಾರೆ?

ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು ೩ ಕೋಟಿಗೂ ಹೆಚ್ಚು ಜನ ಬಿಪಿಎಲ್ ಕಾರ್ಡುದಾರರಿದ್ದಾರೆ. ಅದರಲ್ಲಿ ಒಂದು ಕೋಟಿ ಜನರಿಗೆ ೧೦೦ ಮಾನವ ದಿನಗಳಷ್ಟು ಕೆಲಸ ಕೊಟ್ಟರೆ ೧೦೦ ಕೋಟಿ ಮಾನವ ದಿನಗಳ ಗುರಿ ನೀಡಬೇಕಾಗುತ್ತದೆ. ಆದರೆ ರಾಜ್ಯಕ್ಕೆ ೧೩ ಕೋಟಿ ಮಾನವ ದಿನಗಳ ಗುರಿಯನ್ನು ನೀಡಲಾಗುತ್ತಿದೆ.

   ಇದು ಕೇವಲ ೧೩ ಲಕ್ಷ ಜನರಿಗೆ ಮಾತ್ರ ಸಾಕಾಗುತ್ತಿದೆ. ರಾಜ್ಯದಲ್ಲಿ ಈಗಾಗಾಲೆ ಸೆಪ್ಟೆಂಬರ್ ಅಂತ್ಯದ ವೇಳೆಗಾಗಲೆ ಈ ಟಾರ್ಗೆಟ್ ಮುಗಿದು ಹೋಗಿದೆ. ಆರ್ಥಿಕ ವರ್ಷ ಮುಗಿಯಲು ಇನ್ನೂ ಆರು ತಿಂಗಳಿದ್ದಾಗಲೆ ಟಾರ್ಗೆಟ್ ಮುಗಿದು ಹೋಗಿದೆ. ಬೊಮ್ಮಾಯಿಯವರು ಸುಳ್ಳು ಹೇಳಿಕೊಂಡು ಓಡಾಡುವ ಬದಲು ಡೆಲ್ಲಿಗೆ ಹೋಗಿ ನರೇಗಾ ಯೋಜನೆಗೆ  ಬೇಡಿಕೆ ಆಧಾರಿತವಾಗಿ ಹೊಸ ಟಾರ್ಗೆಟ್ ತರಲಿ.

ಇದನ್ನು ಮಾಡದೆ ರಾಜ್ಯದ ಜನರಿಗೆ ಟೋಪಿ ಹಾಕಿಕೊಂಡು ಓಡಾಡಿದರೆ ರಾಜ್ಯದ ಜನರಿಗೇನು ಲಾಭ. ಮೋದಿಯವರು ಸಂಸದರ ಆದರ್ಶ ಗ್ರಾಮ ಎಂದು ಯೋಜನೆ ಘೋಷಿಸಿದರು. ಅದೂ ಸಹ  ಇನ್ನೂ ಪೇಪರ್ ಮೇಲೆ ಇದೆ ಎಂದು ಕಿಡಿಕಾರಿದ್ಧಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿಎಂ ಬೊಮ್ಮಾಯಿಸಿದ್ದರಾಮಯ್ಯ
Previous Post

ಮೇಲ್ಮನೆ ಎಂಬ ಬಿಳಿಯಾನೆ – ಅಧಿಕಾರಶಾಹಿಯ ಭ್ರಷ್ಟಕೂಪ

Next Post

ಕಾಂಗ್ರೆಸ್ ಪಕ್ಷ ಸಿಂಬಲ್ ಮೇಲೆ ಮಾತ್ರ ನಿಂತಿಲ್ಲ, ಸಿದ್ಧಾಂತಗಳ ಮೇಲೆ ನಿಂತಿದೆ, ಬಿಜೆಪಿಯವರ ಸಿದ್ಧಾಂತ ಯಾವುದು? ಮನುವಾದವೇ? – ಸಿದ್ದರಾಮಯ್ಯ ಪ್ರಶ್ನೆ

Related Posts

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
0

ಮಾನವ ಸಮಾಜದ ಅಭ್ಯುದಯಕ್ಕೆ ಬುನಾದಿಯೇ ಭೂಮಿ ಭೂಮಿಯನ್ನಾಧರಿಸಿದ ಕೃಷಿ, ಬೇಸಾಯ ಮತ್ತು ಹೈನುಗಾರಿಕೆಯ ವೃತ್ತಿಗಳು. ಬೇಸಾಯದ ತಂತ್ರಗಳು ಮತ್ತು ವಿಧಾನಗಳು ಎಷ್ಟೇ ಬದಲಾದರೂ, ಆಧುನಿಕ ವಿಜ್ಞಾನವು ಎಷ್ಟೇ...

Read moreDetails
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
Next Post
ಡಿ.13ರಿಂದ ವಿಧಾನಮಂಡಲ ಅಧಿವೇಶನ; ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಿದ್ದರಾಮಯ್ಯ ಸಿದ್ಧತೆ; ಕಾಂಗ್ರೆಸ್ ತಂತ್ರಕ್ಕೆ ಬೊಮ್ಮಾಯಿ ಪ್ರತಿತಂತ್ರ

ಕಾಂಗ್ರೆಸ್ ಪಕ್ಷ ಸಿಂಬಲ್ ಮೇಲೆ ಮಾತ್ರ ನಿಂತಿಲ್ಲ, ಸಿದ್ಧಾಂತಗಳ ಮೇಲೆ ನಿಂತಿದೆ, ಬಿಜೆಪಿಯವರ ಸಿದ್ಧಾಂತ ಯಾವುದು? ಮನುವಾದವೇ? – ಸಿದ್ದರಾಮಯ್ಯ ಪ್ರಶ್ನೆ

Please login to join discussion

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada