ವಿಧಾನಪರಿಷತ್ ಚುನಾವಣಾ ಪ್ರಚಾರಕ್ಕೆ ಕೆಲ ದಿನಗಳಲ್ಲೇ ತೆರೆ ಬೀಳಲಿದೆ. ಜೆಡಿಎಸ್ ಪಕ್ಷದ ನಿಲುವಿನ ಬಗ್ಗೆ ಸಾರ್ವಜನಿಕರಲ್ಲಿ ಕುತೂಹಲ ಮೂಡಿದೆ. ಕಳೆದ ಹಲವು ದಿನಗಳಿಂದ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ, ಬಿಜೆಪಿ ಜೊತೆ ಮೈತ್ರಿ ಆಗಲಿದೆ ಎಂಬ ಕಪೋಲಕಲ್ಪಿತ ಸುದ್ದಿಗಳು ಬರುತ್ತಿವೆ. ಕಾಂಗ್ರೆಸ್ ನಾಯಕರು ಬಿಜೆಪಿಯ ಬಿಟೀಂ ಅಂತಾ ರಾಜಕೀಯದ ಮಂತ್ರ ಪಠಿಸುತ್ತಿದ್ದಾರೆ. ಕಳೆದ ಚುನಾವಣೆಯಿಂದ ನಿರಂತರವಾಗಿ ಮಾತನ್ನಾಡುತ್ತಿದ್ದಾರೆ. ಜೆಡಿಎಸ್ ಜಾತ್ಯಾತೀತ ಅಲ್ಲಾ ಕುಟುಂಬ ಪಕ್ಷ ಅಂತಾ ಹೊಸದಾಗಿ ಸೇರಿಸಿ ಮಾತನ್ನಾಡುತ್ತಿದ್ದಾರೆ. ಜೆಡಿಎಸ್ ಕೇವಲ ಆರು ಸ್ಥಾನಗಳಿಗೆ ಸ್ಪರ್ಧಿಸಿರುವುದು ಬಿಜೆಪಿಗೆ ಅನುಕೂಲ ಮಾಡಿಕೊಡಲು ಎಂಬ ಚರ್ಚೆ ಆಗುತ್ತಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.
ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರೈತರು..!
https://youtu.be/_EJbc7kZ5uU
Read moreDetails




