ತಮಿಳುನಾಡಿನ ಕೂನೂರ್ ಬಳಿ ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಎಂಐ17ವಿ5 ಬುಧವಾರ ಪತನಗೊಂಡು ರಾವತ್ ಸೇರಿದಂತೆ 13 ಜನ ಮೃತಪಟ್ಟಿದ್ದು, ಬದುಕುಳಿದ ಏಕೈಕ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯಕ್ಕೆ ವರುಣ್ ಅವರ ಸ್ಥಿತಿ ಗಂಭೀರವಾಗಿದ್ದು, ದೇಹದ ಬಹುಭಾಗ ಸುಟ್ಟಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಬುಧವಾರ ಅವರನ್ನು ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸೇನಾ ಆಸ್ಪತ್ರೆಗೆ ಕರೆತರಲಾಗಿದೆ.
ಸಿಡಿಎಸ್ ಬಿಪಿನ್ ರಾವತ್ ಹಾಗೂ ಅವರ ಮಡದಿ ಸೇರಿದಂತೆ 14 ಜನ ಪ್ರಯಾಣಿಸುತ್ತಿದ್ದರು. ದುರಂತದಲ್ಲಿ ಬಿಪಿನ್ ರಾವತ್ ಸೇರಿ 13 ಜನ ಮೃತಪಟ್ಟಿದ್ದಾರೆ.