• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತಾಂತರ ನಿಷೇಧ ಕಾಯ್ದೆ ರದ್ದು : ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ

Any Mind by Any Mind
December 27, 2021
in ಕರ್ನಾಟಕ, ರಾಜಕೀಯ
0
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತಾಂತರ ನಿಷೇಧ ಕಾಯ್ದೆ ರದ್ದು : ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ
Share on WhatsAppShare on FacebookShare on Telegram

ನಿರುದ್ಯೋಗ, ಭ್ರಷ್ಟಾಚಾರ, ಹಸಿವು, ಬಡತನ ಹೀಗೆ ರಾಜ್ಯದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ. ಇವುಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಸರ್ಕಾರ ಹುನ್ನಾರ ಮಾಡುತ್ತಿದೆ. ಒಂದು ಸೀಮಿತ ಧರ್ಮವನ್ನು ಗುರಿಯಾಗಿಟ್ಟುಕೊಂಡು ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಹೊರಟಿರುವುದು ದುರುದ್ದೇಶ ಸಂಗತಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ತಮ್ಮ ನಿವಾಸಿದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಲವಂತದಿಂದ ಆಸೆ ಆಮಿಷ ಒಡ್ಡಿ ಮೋಸದ ಮೂಲಕ ಮತಾಂತರ ಮಾಡುವುದಕ್ಕೆ ನಮ್ಮ ಪಕ್ಷದ ವಿರೋಧವೂ ಇದೆ. ಸೆಕ್ಷನ್ 295 ರಡಿ ಕಾನೂನು ಕ್ರಮ ಜರುಗಿಸಲು ಸಂವಿಧಾನದಲ್ಲಿ ಅವಕಾಶವಿದೆ ಎಂದರು.

ADVERTISEMENT

ಮದುವೆಯ ಕಾರಣಕ್ಕೆ ಮತಾಂತರವಾದರೆ ಹತ್ತು ವರ್ಷಗಳ ವರೆಗೆ ಶಿಕ್ಷೆ ಕೊಡಬಹುದು ಎಂಬ ನಿಯಮ ಮತಾಂತರ ನಿಷೇಧ ಕಾಯ್ದೆಯಲ್ಲಿದೆ. ಒಬ್ಬ ಪುರುಷ ಅಥವಾ ಮಹಿಳೆ ಅನ್ಯ ಧರ್ಮದವರನ್ನು ಪ್ರೀತಿಸಿ, ಮದುವೆಯಾಗೋದು ಮತಾಂತರವಾಗುತ್ತಾ? ಇದನ್ನು ನಿರ್ಬಂಧಿಸೋದು ಸಂವಿಧಾನ ಬಾಹಿರವಾಗುತ್ತದೆ. ಮತ ಕ್ರೋಢೀಕರಣವೇ ಮತಾಂತರ ನಿಷೇಧ ಕಾನೂನಿನ ಉದ್ದೇಶ. ಜನರನ್ನು ಭಾವನಾತ್ಮಕವಾಗಿ ದಾರಿ ತಪ್ಪಿಸಲು ಹೊರಟಿದ್ದಾರೆ ಎಂದು ಕುಟುಕಿದರು.

ಈ ಸರ್ಕಾರ ತೊಲಗಿದರೆ ಸಾಕು


ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನನಗೆ ಮಾಹಿತಿಯಿಲ್ಲ. ಸರ್ಕಾರದಲ್ಲಿ ಆಡಳಿತ ಯಂತ್ರವೇ ಇಲ್ಲದ ಕಾರಣ ಈ ವಿಚಾರ ಯಾವುದೇ ಪರಿಣಾಮ ಬೀರುವುದಿಲ್ಲ. ಅಧಿಕಾರಿಗಳಿಗೆ ವರ್ಗಾವಣೆಗೆ ಲಂಚ ಕೊಟ್ಟು ಸಾಕಾಗಿ ಹೋಗಿದೆ, ಈ ಸರ್ಕಾರ ತೊಲಗಿದರೆ ಸಾಕು ಎಂದು ಅವರಿಗೂ ಅನ್ನಿಸತೊಡಗಿದೆ. ಜನರ ಆಶಯವೂ ಇದೇ ಆಗಿದೆ ಎಂದರು.

ಕೊರೊನಾ ಹಿನ್ನೆಲೆಯ ರಾತ್ರಿ ಕರ್ಫ್ಯೂಗೂ ಹಾಗೂ ನಮ್ಮ ಪಕ್ಷದ ಪಾದಯಾತ್ರೆಗೂ ಯಾವುದೇ ಸಂಬಂಧವಿಲ್ಲ. ಪಾದಯಾತ್ರೆಯನ್ನು ನಾವು ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳೊಂದಿಗೆ ಮಾಡುತ್ತೇವೆ. ಪಾದಯಾತ್ರೆಯ ತಯಾರಿ ಕೆಲಸ ನಡೆಯುತ್ತಿದೆ. ಕೊರೊನಾ ಇದ್ದಾಗಲೇ ಬಿಜೆಪಿಯವರು ಜನಾಶೀರ್ವಾದ ಯಾತ್ರೆ ಮಾಡಿದ್ದಾರೆ. ಈಗ ಉತ್ತರ ಪ್ರದೇಶದಲ್ಲಿ ನರೇಂದ್ರ ಮೋದಿ, ಅಮಿತ್ ಶಾ ಅವರು ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ನಮಗೆ ಬೇರೆ ಅವರಿಗೆ ಬೇರೆ ಎಂದು ಎರಡೆರಡು ಕಾನೂನು ಇದೆಯಾ? ಹೀಗಾಗಿ ನಮ್ಮ ಪಾದಯಾತ್ರೆಗೆ ಸರ್ಕಾರ ಯಾವುದೇ ರೀತಿಯ ಕಡಿವಾಣ ಹಾಕಲು ಬರಲ್ಲ ಎಂದು ಸ್ಪಷ್ಟಪಡಿಸಿದರು.

ಮಧ್ಯಪ್ರದೇಶ ತೆಗೆದು ಕರ್ನಾಟಕ ಹೆಸರು ಸೇರ್ಪಡೆ

2009 ರ ನವೆಂರ್ 5 ರಂದು ಚಿದಾನಂದ ಮೂರ್ತಿ ಅವರ ನಾಯಕತ್ವದಲ್ಲಿ ಜೈದೇವ್, ನರಹರಿ, ಬಿ.ಎನ್ ಮೂರ್ತಿ, ಆರ್.ಲೀಲಾ, ಮತ್ತೂರ್ ಕೃಷ್ಣಮೂರ್ತಿ ಮುಂತಾದ ಆರ್.ಎಸ್.ಎಸ್ ಮೂಲದ ನಾಯಕರು ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ರೂಪಿಸುವಂತೆ ಕಾನೂನು ಸಮಿತಿಗೆ ಮನವಿ ನೀಡಿದ್ದರು. ಇದರ ಜೊತೆಗೆ ಮಧ್ಯಪ್ರದೇಶದಲ್ಲಿ ಬಲವಂತದ ಮತಾಂತರ ನಿಷೇಧ ಕಾನೂನು ಜಾರಿಗೆ ತಂದಿದ್ದಾರೆ. ಆ ಕಾನೂನು ಸರಿಯಾಗಿದೆ. ತಾವು ದಿ ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಅಧಿನಿಯಮವನ್ನು ಮಾದರಿಯಾಗಿಟ್ಟುಕೊಂಡು, ಆ ಕಾನೂನಿನಲ್ಲಿ ಮಧ್ಯಪ್ರದೇಶ ತೆಗೆದು ಕರ್ನಾಟಕ ಎಂಬ ಪದ ಹಾಕಿದರೆ ಸಾಕು ಎಂದು ಸಲಹೆ ನೀಡಿದ್ದರು ಎಂದು ತಿಳಿಸಿದರು.

ಮಣಿ ಭಟ್ ಅವರು ಕಾನೂನು ಸಮಿತಿ ಅಧ್ಯಕ್ಷರಾಗಿದ್ದರು, ಅವರು ಒಂದು ಕರಡು ಪ್ರತಿ ರೂಪಿಸಿ ಸರ್ಕಾರಕ್ಕೆ ಕಳುಹಿಸಿದ್ದರು. 2015 ರಲ್ಲಿ ನಾನು ಅದನ್ನು ಸಚಿವ ಸಂಪುಟದ ಮುಂದೆ ಇಡುವಂತೆ ಸಹಿ ಮಾಡಿದ್ದೆ. ನಂತರ ಆ ಕಡತ ಸಮಾಜ ಕಲ್ಯಾಣ ಸಚಿವರಾಗಿದ್ದ ಆಂಜನೇಯ ಅವರ ಬಳಿ ಹೋಗಿತ್ತು, ನಾನೇ ಆಂಜನೇಯ ಅವರಿಗೆ ಅದನ್ನು ಚರ್ಚೆಗೆ ನಡೆಸುವ ಅಗತ್ಯವಿಲ್ಲ ಎಂದು ಷರಾ ಬರೆಯುವಂತೆ ಹೇಳಿ ಕಡತವನ್ನು ಕ್ಲೋಸ್ ಮಾಡಿಸಿದ್ದೆ. ಬಿಜೆಪಿಯವರು ಬರೀ ಸುಳ್ಳು ಹೇಳುವವರಿಂದಲೇ ತುಂಬಿದೆ. ನರೇಂದ್ರ ಮೋದಿ ಅವರಿಂದ ಹಿಡಿದು ಎಲ್ಲರೂ ಬರೀ ಸುಳ್ಳು ಹೇಳೋರೆ ಎಂದು ಹರಿಹಾಯ್ದರು.

ಈ ಹಿಂದಿನ ಮತಾಂತರ ನಿಷೇಧ ಕರಡು ರೂಪಿಸಲು ತಮ್ಮದೇ ಸರ್ಕಾರ ಕಾರಣ ಎಂದು ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ. ಇದನ್ನು ಆರ್.ಎಸ್.ಎಸ್ ನವರೇ ಮಾಡಿಸಿದ್ದು ಎಂದು ಈಶ್ವರಪ್ಪನವರೂ ಒಪ್ಪಿಕೊಂಡಿದ್ದಾರೆ. ಹೀಗಿದ್ದಾಗ ನಮ್ಮ ಪಾತ್ರ ಏನಿರಲು ಸಾಧ್ಯ? ಎಂದು ಪ್ರಶ್ನಿಸಿದರು.

ಬಿಟ್ ಕಾಯಿನ್ ಹಗರಣ, 40% ಕಮಿಷನ್ ಪ್ರಕರಣ, ರೈತ ವಿರೋಧಿ ಕಾನೂನುಗಳ ವಾಪಾಸಾತಿ ಮುಂತಾದ ವಿಚಾರಗಳ ಚರ್ಚೆ ಮಾಡಬೇಕು, ಸದನವನ್ನು ಒಂದು ವಾರ ವಿಸ್ತರಿಸಿ ಎಂದು ಹಲವು ಬಾರಿ ಮನವಿ ಮಾಡಿದೆ. ಸರ್ಕಾರ ಇದಕ್ಕೆ ಅವಕಾಶ ನೀಡದೆ ತರಾತುರಿಯಲ್ಲಿ ಸದನ ಮುಗಿಸಿತು. ಮುಂದೆ ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಅಥವಾ ಪ್ರಥಮ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಗೊಳಿಸುತ್ತೇವೆ. ಇದರಲ್ಲಿ ಅನುಮಾನವೇ ಇಲ್ಲ.

Tags: anti-conversionBasavaraj BommaiBJPCongress PartylawRepealಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹೋಟೆಲ್‌ ಉದ್ಯಮಕ್ಕೊಂದು ನ್ಯಾಯ, ಚಿತ್ರಮಂದಿರಕ್ಕೊಂದು ನ್ಯಾಯ: ಗೊಂದಲದಲ್ಲೇ ಬೊಮ್ಮಾಯಿ ಸರ್ಕಾರ

Next Post

ರಂಗಭೂಮಿ-ಸಮಾಜದ ಸೂಕ್ಷ್ಮ ಸಂಬಂಧಗಳನ್ನು ಅರಿತವರೇ ರಂಗಕರ್ಮಿಯಾಗಲು ಸಾಧ್ಯ! ಭಾಗ-೨

Related Posts

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
0

ಜೂನಿಯರ್‌ ಚಿತ್ರದ ಡ್ಯಾನ್ಸಿಂಗ್‌ ನಂಬರ್..ಡಿಎಸ್‌ಪಿ ಮ್ಯೂಸಿಕ್‌ಗೆ ಕುಣಿದು ಕುಪ್ಪಳಿಸಿದ ಕಿರೀಟಿ-ಶ್ರೀಲೀಲಾ ಕಿರೀಟಿ ಚಿತ್ರರಂಗದಲ್ಲಿ ಛಾಪೂ ಮೂಡಿಸಲು ಸಜ್ಜಾಗಿದ್ದು, ಚೊಚ್ಚಲ ಚಿತ್ರ ಜೂನಿಯರ್‌ ಟೀಸರ್‌ ಈಗಾಗಲೇ ಭಾರೀ ಸದ್ದು...

Read moreDetails

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
Next Post
ರಂಗಭೂಮಿ-ಸಮಾಜದ ಸೂಕ್ಷ್ಮ ಸಂಬಂಧಗಳನ್ನು ಅರಿತವರೇ ರಂಗಕರ್ಮಿಯಾಗಲು ಸಾಧ್ಯ! ಭಾಗ-೨

ರಂಗಭೂಮಿ-ಸಮಾಜದ ಸೂಕ್ಷ್ಮ ಸಂಬಂಧಗಳನ್ನು ಅರಿತವರೇ ರಂಗಕರ್ಮಿಯಾಗಲು ಸಾಧ್ಯ! ಭಾಗ-೨

Please login to join discussion

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada