ಬರುವ ತಿಂಗಳು ಏಳು ಹಂತಗಳಲ್ಲಿ ಚುನಾವಣೆ ನಡೆಯುವ ಉತ್ತರಪ್ರದೇಶ ಕದನ ದೇಶದ ರಾಜಕೀಯ ಕುತೂಹಲ ಹೆಚ್ಚಿಸಿದೆ. ಈಗಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಸಿಎಂ ಯೋಗಿ ಆದಿತ್ಯನಾಥ್ ಗೋರಖ್ಪುರದಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಸ್ಪರ್ಧಿಸುತ್ತಿದ್ದಾರೆ. ಈ ಮಧ್ಯೆ ಸಮಾಜವಾದಿ ಪಕ್ಷದ ನಾಯಕ ಮತ್ತು ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಾವು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
ಮಹತ್ತರ ಬೆಳವಣಿಗೆಯಲ್ಲಿ ತಾವು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದು, ಅದು ಅಜಂಗಢದ ಮಹಾಜನತೆ ಅನುಮತಿ ನೀಡಿದರೆ ಎಂದು ಹೇಳಿದ್ದಾರೆ. ಹಾಲಿ ಅಜಂಗಢ ಲೋಕಸಭಾ ಸದಸ್ಯರಾಗಿರುವ ಅಖಿಲೇಶ್ ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ. ಒಂದು ವೇಳೆ ಸ್ಪರ್ಧಿಸಿದರೆ ವಿಧಾನಸಭೆಯಲ್ಲಿ ಪ್ರಪಥಮ ಭಾರಿಗೆ ಅವರು ಸ್ಪರ್ಧಿಸಲಿದ್ದಾರೆ.