• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಿಮ್ಮಿಂದ ಸಂಸ್ಕೃತಿ, ಭಾಷೆ ಬಗ್ಗೆ ಕಲಿಯಬೇಕಿಲ್ಲ: ಹೆಚ್‌.ಡಿ.ಕುಮಾರಸ್ವಾಮಿ ಟಾಂಗ್

ಪ್ರತಿಧ್ವನಿ by ಪ್ರತಿಧ್ವನಿ
January 23, 2022
in ಕರ್ನಾಟಕ, ರಾಜಕೀಯ
0
ನಿಮ್ಮಿಂದ ಸಂಸ್ಕೃತಿ, ಭಾಷೆ ಬಗ್ಗೆ ಕಲಿಯಬೇಕಿಲ್ಲ: ಹೆಚ್‌.ಡಿ.ಕುಮಾರಸ್ವಾಮಿ ಟಾಂಗ್
Share on WhatsAppShare on FacebookShare on Telegram

ಜೆಡಿಎಸ್ ಬಗ್ಗೆ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ADVERTISEMENT

ಕುಮಾರಸ್ವಾಮಿ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎನ್ನುತ್ತಲೇ ತಮ್ಮ ಹಾಗೂ ಜೆಡಿಎಸ್ ಪಕ್ಷದ ಬಗ್ಗೆ ವಿನಾಕಾರಣ ನಾಲಿಗೆ ಜಾರುತ್ತಿರುವ ಪ್ರತಿಪಕ್ಷ ನಾಯಕರಿಗೆ ಟ್ವೀಟ್ ಮಾಡಿ ಕುಮಾರಸ್ವಾಮಿ ಅವರು ಟಾಂಗ್ ನೀಡಿದ್ದಾರೆ.

” ಸ್ವಯಂ ಘೋಷಿತ ಸಂವಿಧಾನ ಪಂಡಿತ ” ಸಿದ್ದರಾಮಯ್ಯ ನಮ್ಮ ಪಕ್ಷ & ನಮ್ಮ ಬಗ್ಗೆ ಲಘುವಾಗಿ ಮಾತನಾಡಿದ್ದಕ್ಕೆ ನಾನು ಉತ್ತರ ಕೊಟ್ಟಿದ್ದೇನೆ. ಮಾತು ಆಡಿದ ಮೇಲೆ ಅದನ್ನು ದಕ್ಕಿಸಿಕೊಳ್ಳುವ ಯೋಗ್ಯತೆಯೂ ಇರಬೇಕಲ್ಲವೇ? ಆ ಯೋಗ್ಯತೆ ಅವರಿಗಿಲ್ಲ ಸುಖಾಸುಮ್ಮನೆ ಅವರ ಬಗ್ಗೆ ಮಾತನಾಡುವ ತೆವಲು ನಂಗಂತೂ ಇಲ್ಲ. ನಮ್ಮ ಪಕ್ಷದಿಂದ ಎಗರಿಸಿಕೊಂಡು ಹೋದ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕಾದರೆ ನಮ್ಮ ಪಕ್ಷದ ಬಗ್ಗೆ ಏಕೆ ಮಾತನಾಡಬೇಕು? ಜೆಡಿಎಸ್ ಪಕ್ಷವನ್ನು ತುಮಕೂರಿನಿಂದ ಓಡಿಸಿ ಎಂದಿದ್ದು ಯಾವ ಸಂಸ್ಕೃತಿ? ಎಂದು ಪ್ರಶ್ನಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಒಂದು ಜಿಲ್ಲೆಯಿಂದಲೇ ಒಂದು ಪಕ್ಷವನ್ನು ಓಡಿಸಿ ಎನ್ನುವುದು ಎಂಥಾ ರಾಜಕಾರಣ? ಲಂಗು ಲಗಾಮು ಇಲ್ಲದೆ ನಾಲಿಗೆ ಜಾರುವ ಇಂಥ ಜನರಿಂದ ನಾನು ಭಾಷೆ, ಸಂಸ್ಕೃತಿ ಬಗ್ಗೆ ಕಲಿಯಬೇಕಿಲ್ಲ. ‘ಸುಳ್ಳಿನ ಸಿದ್ದಪುರುಷ’ನಿಂದ ಭಾಷೆ-ಸಂಸ್ಕೃತಿ ಕುರಿತು ಪಾಠವೇ? ಕುಮಾರಸ್ವಾಮಿ ಬಗ್ಗೆ ಮಾತನಾಡಲ್ಲ ಅನ್ನುತ್ತಾರೆ. ಮಾತೆತ್ತಿದರೆ ಕುಮಾರಸ್ವಾಮಿಯದ್ದೇ ಜಪ! ಜತೆಗೆ ಜೆಡಿಎಸ್ ಬಗ್ಗೆ ವಿಷ ಕಾರುವುದು ಸುಳ್ಳಾ? ಅವರ ಹೇಳಿಕೆಗಳನ್ನು ಇಡೀ ರಾಜ್ಯವೇ ಕೇಳಿಸಿಕೊಂಡಿದೆ ಎಂದು ಹೇಳಿದ್ದಾರೆ.

" ಸ್ವಯಂ ಘೋಷಿತ ಸಂವಿಧಾನ ಪಂಡಿತ " ಸಿದ್ದರಾಮಯ್ಯ ನಮ್ಮ ಪಕ್ಷ & ನಮ್ಮ ಬಗ್ಗೆ ಲಘುವಾಗಿ ಮಾತನಾಡಿದ್ದಕ್ಕೆ ನಾನು ಉತ್ತರ ಕೊಟ್ಟಿದ್ದೇನೆ. ಮಾತು ಆಡಿದ ಮೇಲೆ ಅದನ್ನು ದಕ್ಕಿಸಿಕೊಳ್ಳುವ ಯೋಗ್ಯತೆಯೂ ಇರಬೇಕಲ್ಲವೇ? ಆ ಯೋಗ್ಯತೆ ಅವರಿಗಿಲ್ಲ. 1/9

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 23, 2022

ನನ್ನನ್ನು ಕಂಡರೆ ಕುಮಾರಸ್ವಾಮಿಗೆ ಭಯ! ಅಂತಾರೆ. ಇದು ಭ್ರಮೆಯ ಪರಮಾವಧಿ. ಮತ್ತೆ ಸಿಎಂ ಆಗಲ್ಲ ಎಂದು ಖಚಿತವಾದ ಮೇಲೆ ಹತಾಶೆ, ಅಸಹನೆಯ ಬೆಂಕಿಯಲ್ಲಿ ಬೇಯುತ್ತಿದ್ದಾರೆ, ಪಾಪ. ಇದು ವಿಪರೀತಕ್ಕೆ ಹೋಗಿದೆ ಎನ್ನುವುದಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ಅವರು ಕೊಟ್ಟ ಹೇಳಿಕೆಗಳೇ ಸಾಕ್ಷಿ. ತುಮಕೂರು ಜಿಲ್ಲೆಯಿಂದ ಓಡಿಸಿ, ಬಿಜೆಪಿಯ ಬಾಲಂಗೋಚಿ; ಇಂತಹ ನುಡಿಮುತ್ತುಗಳು ‘ಸ್ವಯಂ ಘೋಷಿತ ಸಂವಿಧಾನ ಪಂಡಿತ’ನ ರಾಜಕೀಯ ಫಜೀತಿಯ ಪರಾಕಾಷ್ಠೆ. ಯಾರ ಭಯ ಯಾರಿಗಿದೆ ಎನ್ನುವುದಕ್ಕೆ ಇದೇ ಸಾಕ್ಷಿ.

ನಿಜ. ಚುನಾವಣೆಯಲ್ಲಿ ನಮ್ಮ ತಂದೆ ಸೋತಿದ್ದಾರೆ. ನನ್ನ ಅಣ್ಣ ಸೋತಿದ್ದಾರೆ, ನಾನೂ ಸೋತಿದ್ದೇನೆ. ಸೋತ ಮೇಲೆ ನಾವ್ಯಾರೂ ಅಧೀರರಾಗಿಲ್ಲ. ಸೋತಿದ್ದಕ್ಕೆ ನಾವು ಕಣ್ಣೀರು ಹಾಕಿಲ್ಲ. ಸಿದ್ದಹಸ್ತರ ಕಣ್ಣೀರ ಕೋಡಿಯನ್ನು ಕಂಡ ದೇವೇಗೌಡರು ಇನ್ನೂ ನಮ್ಮ ಜತೆ ಇದ್ದಾರೆ. ಇನ್ನು ಕಮೀಷನ್ ವ್ಯವಹಾರದಲ್ಲಿ ನಾನು ನೀಟ್, ಕ್ಲೀನ್ ಎನ್ನುತ್ತಿದ್ದಾರೆ ಪ್ರತಿಪಕ್ಷ ನಾಯಕರು. ಐದು ವರ್ಷ ಸಿಎಂ ಆಗಿದ್ದರೂ ನಾನು ಕ್ಲೀನ್ ಎಂದು ಕೊಚ್ಚಿಕೊಳ್ಳುತ್ತಿದ್ದಾರೆ. ಹಾಗಾದರೆ, ಇವತ್ತಿಗೂ ಕೇಳಿಸುತ್ತಿರುವ ‘ ಅರ್ಕಾವತಿ ‘ ಆರ್ತನಾದಕ್ಕೆ ಕಾರಣರು ಯಾರು?

ಈ ಸತ್ಯ ಆಚೆ ಬಿದ್ದರೆ ಆ ಸಿದ್ದಹಸ್ತರು ಮುಖವನ್ನು ಎಲ್ಲಿ ಇಟ್ಟುಕೊಳ್ಳುತ್ತಾರೆ? ದೇವರಾಜ ಅರಸು ಅವರ ನಂತರ ‘ ಐದು ವರ್ಷದ ಮುಖ್ಯಮಂತ್ರಿ ‘ ಎಂದು ಹೇಳಿಕೊಳ್ಳುವ ಅಪರ ಸಿದ್ದಪುರುಷರ ಪಾಡೇನು? ‘ ಐದು ವರ್ಷದ ಮುಖ್ಯಮಂತ್ರಿ ‘ ಎಂಬ ಪ್ರಭಾವಳಿಯ ಕಥೆ ಏನು? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಪ್ರಶ್ನೆ ಮಾಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರಿನಲ್ಲಿ ಬೆಕ್ಕು ಕಳ್ಳತನ : ಹುಡುಕಿ ಕೊಟ್ಟವರಿಗೆ 35 ಸಾವಿರ ಬಹುಮಾನ

Next Post

ಸಯದ್ ಮೋದಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಗೆದ್ದ ಪಿ.ವಿ ಸಿಂಧು

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಸಯದ್ ಮೋದಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಗೆದ್ದ ಪಿ.ವಿ ಸಿಂಧು

ಸಯದ್ ಮೋದಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಗೆದ್ದ ಪಿ.ವಿ ಸಿಂಧು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada