ಕೇಂದ್ರದ ಮಾಜಿ ಸಚಿವ ಹಾಗೂ ಉತ್ತರ ಪ್ರದೇಶ ಕಾಂಗ್ರೆಸ್ಮ ಸ್ಟಾರ್ ಕ್ಯಾಂಪೇನರ್ ಎಂದೇಖ್ಯಾತಿ ಪಡೆದಿದ್ದ ಆರ್ಪಿಎನ್ ಸಿಂಗ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಈ ಕುರಿತು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಪತ್ರ ಬರೆದಿರುವ ಸಿಂಗ್ ಪಕ್ಷದ ಹಾಗೂ ರಾಷ್ಟ್ರದ ಜನತೆಯ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದಗಳು ಎಂದು ತಾವು ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಬಿಜೆಪಿ ಸೇರಿದ ಒಟ್ಟಾರೆ ಎರಡನೇ ನಾಯಕ ಇವರು ಈ ಹಿಂದೆ ಮಾಜಿ ಸಚಿವ ಜಿತಿನ್ ಪ್ರಸಾದ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು.
