• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

2023ರ ವಿಧಾನಸಭೆ ಚುನಾವಣೆಯಲ್ಲಿ ಯಾರೊಂದಿಗೂ ಹೊಂದಾಣಿಕೆ ಇಲ್ಲ : ಕುಮಾರಸ್ವಾಮಿ

Any Mind by Any Mind
January 27, 2022
in ಕರ್ನಾಟಕ
0
ಆರ್ಟಿಫಿಶಿಯಲ್‌ ಹೋರಾಟಗಳಿಗೆ ಜನ ಬೆಲೆ ಕೊಡುವುದಿಲ್ಲ: ಹೆಚ್‌.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ಯಾವುದೇ ಕಾರಣಕ್ಕೂ ರಾಷ್ಟ್ರೀಯ ಪಕ್ಷಗಳ ಮನೆ ಬಾಗಿಲಿಗೆ ಅಧಿಕಾರಕ್ಕಾಗಿ ಈವರೆಗೆ ಹೋಗಿಲ್ಲ. ಮುಂದೆಯೂ ಹೋಗುವುದಿಲ್ಲ. 2023ರ ವಿಧಾನಸಭೆ ಚುನಾವಣೆಯಲ್ಲಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ADVERTISEMENT

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾತನಾಡಿದ ಅವರು, 2023ಕ್ಕೆ ನಮ್ಮ ಶ್ರಮ ಸಾಬೀತು ಮಾಡುತ್ತೇವೆ. ಬೇರೆ ಪಕ್ಷಗಳು ಕಡಿಮೆ ಸ್ಥಾನ ಗೆದ್ದರೆ ಅವರ ಜತೆ ಸೇರಿ ಅಧಿಕಾರ ಮಾಡುತ್ತೇವೆ ಎಂದಲ್ಲ ಎಂದರು.

ಮುಖ್ಯಮಂತ್ರಿಗೆ ಟಾಂಗ್

ಬೇರೆ ಪಕ್ಷಗಳು ಅಂತಂತ್ರ ಆದಾಗ ಜೆಡಿಎಸ್ ಸ್ವತಂತ್ರವಾಗುತ್ತದೆ. ಅದು ಕುಮಾರಸ್ವಾಮಿ ಅವರ ಸದಾಶಯ ಆಗಿರಬಹುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಹೇಳಿದ್ದಾರೆ. ನಾವೆಂದೂ ಅತಂತ್ರರಾಗಿಲ್ಲ. ಅವರೇ ಅಂತಂತ್ರವಾದಾಗ ಜೆಡಿಎಸ್ ಬಾಗಿಲು ಬಡಿದಿದ್ದಾರೆ. ಅವರ ಶಾಸಕರು, ಸಚಿವರು ಸಿದ್ದರಾಮಯ್ಯ ಸಂಪರ್ಕದಲ್ಲಿ ಇದ್ದಾರೆ ಎಂದರೆ, ಅಂಥವರಿಗೆ ಬಿಜೆಪಿ ನಾಯಕರಲ್ಲೇ ಕಡಿವಾಣ ಹಾಕುವ ಸ್ಥಿತಿ ಇಲ್ಲ ಎಂದು ಕುಟುಕಿದರು.

ಸಿಎಂ ಇಬ್ರಾಹಿಂ ಪಕ್ಷಕ್ಕೆ ಬಂದರೆ ಸ್ವಾಗತ

ಮಾಜಿ ಸಚಿವ ಸಿಎಂ ಇಬ್ರಾಹಿಂ ಜೆಡಿಎಸ್ ಪಕ್ಷಕ್ಕೆ ಬಂದರೆ ಸ್ವಾಗತ. ಇಬ್ರಾಹಿಂ ಅವರು ಹಿರಿಯರು ಇದ್ದಾರೆ. ನಮ್ಮ ಪಕ್ಷ ಹಾಗೂ ಮಾಜಿ ಪ್ರಧಾನಿಗಳಾದ ದೇವೇಗೌಡರ ಏಳು ಬೀಳುವಿನಲ್ಲಿಯೂ ಜತೆಯಾದವರು. ಮೇಲ್ಮನೆ ವಿರೋಧ ಪಕ್ಷದ ನಾಯಕರ ಸ್ಥಾನಕ್ಕೆ ಅವರ ಹೆಸರು ಕೇಳಿ ಬಂದಿತ್ತು. ಆದರೆ ಅಲ್ಲಿ ಅವರಿಗೆ ಆ ಸ್ಥಾನ ತಪ್ಪಿದೆ. ಇಬ್ರಾಹಿಂ ಅವರಿಗೆ ಇನ್ನೂ ದೇವೇಗೌಡರು ಹಾಗೂ ನಮ್ಮ ಪಕ್ಷದ ಬಗ್ಗೆ ವ್ಯಾಮೋಹ ಇದೆ. ಅವರು ಪಕ್ಷಕ್ಕೆ ಬಂದರೆ ಸ್ವಾಗತ ಎಂದರು.

ನೀರಾವರಿ ವಿಷಯ ಸದನದಲ್ಲಿ ಮಾತನಾಡುವೆ

ನೀರಾವರಿ, ನದಿ ವಿಚಾರವಾಗಿ ರಾಜ್ಯದ ಜನರಿಗೆ ಎರಡು ರಾಷ್ಟ್ರೀಯ ಪಕ್ಷಗಳು ದ್ರೋಹ ಮಾಡಿರುವುದನ್ನು ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇನೆ. ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಬಹಳ ಅನ್ಯಾಯ ಆಗುತ್ತಿದೆ. ರಾಜ್ಯಪಾಲರ ಭಾಷಣದ ಮೇಲೆ ನಾನು ಸದನದಲ್ಲಿ ಈ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತೇನೆ.

ಜೆಡಿಎಸ್ ಪಕ್ಷ ಮುಗಿದೇ ಹೋಯಿತು ಎಂದು ಕೆಲವರು ಹೇಳಿಕೊಂಡು ಓಡಾಡುತ್ತಿದ್ದಾರೆ. ಕಾರ್ಯಕರ್ತರ ಶ್ರಮ ನಮ್ಮ ಪಕ್ಷಕ್ಕೆ ಇದೆ. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳು ಕಾರ್ಯಗತ ಆಗಬೇಕಾದರೆ ಜೆಡಿಎಸ್ ಅಧಿಕಾರಕ್ಕೆ ಬರಬೇಕು. ಆ ನಿಟ್ಟಿನಲ್ಲಿ ಜನತಾ ಜಲಧಾರೆ ಕಾರ್ಯಕ್ರಮ ರೂಪಿಸಿದ್ದೇವೆ ಎಂದರು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿವಿಧಾನಸಭಾ ಚುನಾವಣೆ
Previous Post

ಕಾಂಗ್ರೆಸ್ಸಿಗರಿಗೆ ಮುಸಲ್ಮಾನರೇ ತಂದೆ-ತಾಯಿ! : ಬಿಜೆಪಿ ಮುಖಂಡ ನಾರಾಯಣಸಾ ಭಾಂಡಗೆ ವಿವಾದಾತ್ಮಕ ಹೇಳಿಕೆ

Next Post

UKP ಪುನರ್ವಸತಿ | ಮೂಲ ಸಂತ್ರಸ್ತರಿಗೆ ಪರಿಹಾರ ದೊರಕದೆ ಅಕ್ರಮಗಳ ಮೂಲಕ ಬೇರೆಯವರು ಪಡೆದಿದ್ದಾರಾ?

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
UKP ಪುನರ್ವಸತಿ |  ಮೂಲ ಸಂತ್ರಸ್ತರಿಗೆ ಪರಿಹಾರ ದೊರಕದೆ ಅಕ್ರಮಗಳ ಮೂಲಕ ಬೇರೆಯವರು ಪಡೆದಿದ್ದಾರಾ?

UKP ಪುನರ್ವಸತಿ | ಮೂಲ ಸಂತ್ರಸ್ತರಿಗೆ ಪರಿಹಾರ ದೊರಕದೆ ಅಕ್ರಮಗಳ ಮೂಲಕ ಬೇರೆಯವರು ಪಡೆದಿದ್ದಾರಾ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada