ಗೋವಾ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಫೆಬ್ರವರಿ 2 ರಂದು ಗೋವಾಕ್ಕೆ ಭೇಟಿ ನೀಡಿ, ಸಾರ್ವಜನಿಕರನ್ನುಉದ್ದೇಶಿಸಿ ಮಾತನಾಡಲಿದ್ದಾರೆ.
ಚುನಾವಣೆಗೂ ಮುನ್ನ ರಾಹುಲ್ ಗಾಂಧಿ ಫೆಬ್ರವರಿ 2 ರಂದು ಗೋವಾ ಸಿಎಂ ಕ್ಷೇತ್ರದಲ್ಲಿ ವರ್ಚುವಲ್ ರ್ಯಾಲಿ ನಡೆಸಲಿದ್ದಾರೆ. ತಮ್ಮ ಒಂದು ದಿನದ ಭೇಟಿಯಲ್ಲಿ ಕಾಂಗ್ರೆಸ್-ಗೋವಾ ಫಾರ್ವರ್ಡ್ ಪಾರ್ಟಿ ಮೈತ್ರಿಕೂಟದ ಎಲ್ಲಾ ಅಭ್ಯರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎನ್ನಲಾಗಿದೆ.
ಸುಮಾರು 20,000 ಜನರು ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದು, ಆನ್ಲೈನ್ ವೇದಿಕೆ ಮೂಲಕ ಇನ್ನೂ ಸಾವಿರ ಜನರು ಹಾಜರಾಗುವ ಸಾಧ್ಯತೆಯಿದೆ. 40 ಕೇಂದ್ರಗಳ ಪೈಕಿ 15 ಕೇಂದ್ರಗಳ ಜನರು ರಾಹುಲ್ ಗಾಂಧಿ ಅವರೊಂದಿಗೆ ಸಂವಾದ ನಡೆಸಿ, ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ.

ಗೋವಾದಲ್ಲಿ ಫೆಬ್ರವರಿ 14 ರಂದು ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದ ಎಲ್ಲಾ 40 ಕ್ಷೇತ್ರಗಳ ಪೈಕಿ ,ಸಂಖಲಿಮ್ ನಲ್ಲಿ ರಾಹುಲ್ ಗಾಂಧಿಯವರ ಸಾರ್ವಜನಿಕ ಭಾಷಣ ಮಾಡಲಿದ್ದಾರೆ.






