ಬರುವ ಪಂಜಾಬ್ ಚುನಾವಣೆ ನಿಮಿತ್ತ ಫೆಬ್ರವರಿ 6ರಂದು ಪಂಜಾಬ್ಗೆ ತೆರಳಲಿರುವ ರಾಹುಲ್ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವ ಸಾಧ್ಯತೆ ಹೆಚ್ಚಿದೆ. ಹಾಲಿ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಹಾಗೂ ಪಿಸಿಸಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ನಡುವೆ ಈಗಾಗಲೇ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿದೆ.
ಈಗಾಗಲೇ ಈ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮುಖಂಡರ ಜೊತೆ ಗುಪ್ತ ಸಭೆ ನಡೆಸಿದ್ದು ಫೆಬ್ರವರಿ 6ರಂದು ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂದು ತಿಳಿಯಲಿದೆ.
ಕಾಂಗ್ರೆಸ್ ಹೈಕಮಾಂಡ್ಗೆ ಚನ್ನಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಬೇಕು ಎಂಬ ಒಲವು ಹೆಚ್ಚಿದೆ ಆದರೆ, ಸಿಧು ಮತ್ತವರ ಬೆಂಬಲಿಗರು ಬಂಡಾಯವೇಳುವ ಸಾಧ್ಯತೆ ಹೆಚ್ಚಿದೆ. ಕಾಂಗ್ರೆಸ್ ಹೈಕಮಾಂಡ್ ಈ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುತ್ತದೆ ಎಂದು ಕಾದು ನೋಡಬೇಕಿದೆ.