ದಕ್ಷಿಣ ಕನ್ನಡ ಜಿಲ್ಲೆಯ ಉಡುಪಿ ಹಾಗೂ ಕುಂದಾಪುರದ ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಕಾಲೇಜಿಗೆ ಪ್ರವೇಶ ನಿರಾಕರಿಸಿರುವ ಘಟನೆ ವಿವಾದವಾದ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಐಎಸ್ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿರುವುದು ವಿವಾದ ಮತ್ತಷ್ಟು ವಿಸ್ತರಿಸುತ್ತಲೇ ಇದೆ.
ಸದ್ಯ ವಿದ್ಯಾರ್ಥಿಗಳು ಕೇಸರಿ ಶಾಲುಗಳನ್ನು ಧರಿಸಿ ಕಾಲೇಜಿನಲ್ಲಿ ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕುರಿತು ಪೊಲೀಸರಿಗೆ ದೂರು ನೀಡಿರುವ ಪ್ರಾಂಶುಪಾಲ ಎ.ಎಸ್.ಲಾಲ್ಸಂಗಿ ಘಟನೆಯ ಕುರಿತು ತನಿಖೆ ನಡೆಸುವಂತೆ ಪೊಲೀಸರಿಗೆ ವಿನಂತಿಸಿದ್ದಾರೆ.
ಘಟನೆಯ ಕುರಿತು ವಿದ್ಯಾರ್ಥಿಗಳ ವಿಚಾರಣೆ ನಡೆಸಿದ ಎಸ್ಐ ಎಸ್.ಎಂ.ಕಾರಜೋಳ ಹನುಮ ವೃತ್ತದ ಪ್ರಯುಕ್ತ ಕೇಸರಿ ಶಾಲನ್ನು ಧರಿಸಿರುವುದಾಗಿ ವಿದ್ಯಾರ್ಥಿಗಳು ಸಮರ್ಥಿಸಿಕೊಂಡಿದ್ದಾರೆ. ಕೆಲವು ವಿದ್ಯಾರ್ಥಿಗಳು ಕಾಲೇಜಿನ ಹೊರಗೆ ಕೆಲವು ಸಂಘಟನೆಯ ಸದಸ್ಯರು ಬಲವಂತವಾಗಿ ಶಾಲನ್ನು ಧರಿಸುವಂತೆ ಒತ್ತಾಯಿಸಿದ್ದರು ಎಂದು ಪೊಲೀಸ್ ಅಧಿಕಾರಿಗಳ ಬಳಿ ಹೇಳಿದ್ದಾರೆ.