ಶಿವಮೊಗ್ಗದ (Shivamogha) ಸರ್ಕಾರಿ ಪದವಿ ಕಾಲೇಜು ಸೇರಿದಂತೆ ವಿವಿಧ ಕಾಲೇಜುಗಳಲ್ಲಿ ಹಿಜಾಬ್ (Hijab)- ಕೇಸರಿ ಶಾಲು ಸಂಬಂಧಿತ ಸಂಘರ್ಷ ಹೆಚ್ಚಾಗಿದ್ದು ಪ್ರಥಮ ದರ್ಜೆ ಕಾಲೇಜಿನ ಮೇಲೆ ವಿದ್ಯಾರ್ಥಿಗಳು ಕಲ್ಲು ತೂರಿದ್ದಾರೆ. ಪರಿಸ್ಥಿತಿ ಹತೋಟಿಗೆ ತರಲು ಜಿಲ್ಲಾ ಪೊಲೋಸ್ ಸೆಕ್ಷನ್ 144 (144 Section) ಜಾರಿಮಾಡಿದೆ.
ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲ್ಲುತೂರಾಟ ಘಟನೆ ನಡೆದಿದೆ. ಪೊಲೀಸರು ಉದ್ರಿಕ್ತ ಗುಂಪನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.

ಪರಿಸ್ಥಿತಿ ವಿಕೋಪಕ್ಕೆ ಹೋದ ಹಿನ್ನೆಲೆಯಲ್ಲಿ ಶಿವಮೊಗ್ಗ ಎಸ್ ಪಿ ಲಕ್ಷ್ಮೀಪ್ರಸಾದ್ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.