ರಾಜ್ಯದಲ್ಲಿ ಭುಗಿಲ್ಲೆದ್ದಿರುವ ಹಿಜಾಬ್ ವಿವಾದ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿ ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪಾಕಿಸ್ತಾನದಲ್ಲಿ ಹೆಣ್ಣು ಮಕ್ಕಳ ಶಿಕ್ಷಣ ಹಕ್ಕಿನ ವಿರುದ್ಧ ಹೋರಾಡಿದ ಯೂಸುಫ್ ಮಲಾಲ ಝೈ ಕರ್ನಾಟಕ ಹಿಜಾಬ್ ಬಗ್ಗೆ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.
ಕಾಲೇಜುಗಳಲ್ಲಿ ನಮಗೆ ವಿದ್ಯಾಭ್ಯಾಸ ಮತ್ತು ಹಿಜಾಬ್ ನಡುವೆ ಆಯ್ಕೆ ಮಾಡಿಕೊಳ್ಳಲು ಒತ್ತಾಯಿಸುತ್ತಿದೆ ಎಂದು ವಿದ್ಯಾರ್ಥಿನಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಅವರು, ಹಿಜಾಬ್ ಧರಿಸಿದ ಹೆಣ್ಣು ಮಕ್ಕಳನ್ನು ಶಾಲಾ ಕಾಲೇಜುಗಳಿಗೆ ಪ್ರವೇಶ ನಿರ್ಬಂಧಿಸುವುದು ದ್ವೇಷದ ನಡೆ. ಮಹಿಳೆಯರ ಮೇಲಿನ ನಿರ್ಬಂಧಗಳು ಮುಂದುವರೆಯುತ್ತಿವೆ. ಭಾರತದಲ್ಲಿ ಹೆಚ್ಚು ಅಥವಾ ಕಡಿಮೆ ಬಟ್ಟೆ ಧರಿಸುವ ಮುಸ್ಲಿಂ ಮಹಿಳೆಯರನ್ನು ಕಡೆಗಣಿಸುವುದನ್ನು ನಿಲ್ಲಿಸಬೇಕು ಎಂದು ಮಲಾಲ ಟ್ವೀಟ್ ನಲ್ಲಿ ತಿಳಿಸಿದ್ದಾರೆ.












