ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಕರ್ನಾಟಕದ ಹಿಜಾಬ್ ವಿವಾದದ ಬಗ್ಗೆ ಬಹುಭಾಷಾ ನಟ ಕಮಲ್ ಹಾಸನ್ ಟ್ವೀಟ್ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದು, ಹಿಜಾಬ್ ವಿವಾದ ಕರ್ನಾಟಕದಲ್ಲಿ ಅಶಾಂತಿಯನ್ನು ಹುಟ್ಟುಹಾಕಿದೆ. ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷ ಗೋಡೆ ನಿರ್ಮಾಣ ಮಾಡಲಾಗಿದೆ ಯಾವುದೇ ಕಾರಣಕ್ಕೂ ಈ ವಿವಾದ ತಮಿಳುಮಾಡಿಗೆ ಬರಬಾರದು ಎಂದಿದ್ದಾರೆ.
ವಿವಾದ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ ತಲೆದೋರಿರುವ ಈ ವಿವಾದ ತಮಿಳುನಾಡಿಗೆ ಬರಬಾರದು. ಪ್ರಗತಿಪರಶಕ್ತಿಗಳು ಈಗ ಎಚ್ಚರಿಕೆ ವಹಿಸಬೇಕು ಎಂದು ರಾಜ್ಯದ ಹಿಜಾಬ್ ವಿವಾದದ ಬಗ್ಗೆ ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ. ಇನ್ನೊಂದೆಡೆ ಹೈಕೋರ್ಟ್ ನಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಯನ್ನು ವಿಸ್ತ್ರತ ಪೀಠಕ್ಕೆ ಕಳುಹಿಸುವ ತೀರ್ಮಾನ ಮಾಡಲಾಗಿದೆ. ಮಧ್ಯಂತರ ಆದೇಶದ ಬಗ್ಗೆ ವಿಸ್ತ್ರತ ಪೀಠವೇ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದೆ.