ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದರೆ ಸರ್ಕಾರ ರಚನೆಯಾದ ಮರುಕ್ಷಣವೇ ಏಕರೂಪ ನಾಗರಿಕ ಸಂಹಿತೆ ಕರಡನ್ನು ಸಿದ್ದಪಡಿಸಲು ಸಮಿತಿಯನ್ನು ನೇಮಿಸಲಾಗುವುದು ಎಂದು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.
ಸಮಿತಿಯಲ್ಲಿ ಕಾನೂನು ತಜ್ಞರು, ನಿವೃತ್ತ ಸರ್ಕಾರಿ ನೌಕರರು ಹಾಗೂ ಉದ್ಯಮಿಗಳು ಸದಸ್ಯರಾಗಿರುತ್ತಾರೆ. ಸಮಿತಿಯ ವ್ಯಾಪ್ತಿಯೂ ಮದುವೆ, ವಿಚ್ಚೇದನ, ಭೂ ಆಸ್ತಿ ಮತ್ತು ಉತ್ತರಾಧಿಕಾರತ್ವಕ್ಕೆ ಸಂಬಂಧಿಸಿರುವ ಸಮಸ್ಯೆಗಳನ್ನು ಒಳಗೊಂಡಿರುತ್ತದೆ ಎಂದು ಹೇಳಿದ್ದಾರೆ.
ಮುಂದುವರೆದು, ಇದು ಭಾರತ ಸಂವಿಧಾನ ರಚಿಸಿದವರ ಕನಸುಗಳನ್ನು ನನಸಾಗಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗುತ್ತದೆ ಮತ್ತು ಸಂವಿಧಾನದ ಕನಸನ್ನು ನನಸು ಮಾಡುತ್ತದೆ. ಇದು ಸಮಾಜದ ಎಲ್ಲಾ ನಾಗರೀಕರಿಗೂ ಸಮಾನ ಕಾನೂನಿನ ಪರಿಕಲ್ಪನೆಯನ್ನು ಪ್ರಸ್ತುತ ಪಡಿಸುವ ಭಾರತೀಯ ಸಂವಿಧಾನದ 44ನೇ ವಿಧಿಯತ ಪರಿಣಾಮಕಾರಿ ಹೆಜ್ಜೆಯಾಗಲಿದೆ ಎಂದು ಹೇಳಿದ್ದಾರೆ.

ಕಾಲಕಾಲಕ್ಕೂ ಸುಪ್ರೀಂ ಕೋರ್ಟ್ ಏಕರೂಪ ನಾಗರಿಕ ಸಂಹಿತೆಯ ಅಗತ್ಯತೆಯನ್ನು ಒತ್ತಿ ಹೇಳುತ್ತದೆ. ಈ ನಿಟ್ಟಿನಲ್ಲಿ ಸರ್ಕಾರಗಳು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಿರುವ ಬಗ್ಗೆ ಉಚ್ಚ ನ್ಯಾಯಾಲಯ ಕಳವಳ ವ್ಯಕ್ತಪಡಿಸಿದೆ ಎಂದು ಮಾತನಾಡುವ ವೇಳೆ ಹೇಳಿದ್ದಾರೆ.
ಉತ್ತರಾಖಂಡ ಬಿಜೆಪಿ ಸರ್ಕಾರವು ಸಾಮಾನ್ಯ ನಾಗರಿಕ ಸಂಹಿತೆಯನ್ನು ಜಾರಿಗೆ ತರುವ ಮೂಲಕ ದೇಶಕ್ಕೆ ಮಾದರಿಯಾಗಲಿದೆ. ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳಲು ಗೋವಾ ರಾಜ್ಯ ನಮ್ಮಗೆ ಸ್ಪೂರ್ತಿ ಎಂದು ಹೇಳಿದ್ದರು. ಸಾಮಾನ್ಯ ನಾಗರಿಕ ಸಂಹಿತೆಯು ಮಹಿಳಾ ಸಬಲೀಕರಣ, ಸಾಮಾಜಿಕ ಸೌಹಾರ್ದತೆ ಮತ್ತು ಲಿಂಗ ಸಮಾನತೆಯನ್ನು ಉತ್ತೇಜಿಸುತ್ತದೆ ಎಂದು ತಿಳಿಸಿದ್ದಾರೆ
70 ಸದ್ಸಯ ಬಲದ ಉತ್ತರಾಖಂಡ ವಿಧಾನಸಭೆಗೆ ಫೆಬ್ರವರಿ 14ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಪಲಿತಾಂಶ ಹೊರಬೇಳಲಿದೆ.













