
ಚಿತ್ರದುರ್ಗದಲ್ಲಿ ಬೀದಿ ನಾಯಿ ದಾಳಿಗೆ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಂಪುರದಲ್ಲಿ 10 ವರ್ಷದ ಮಿಥುನ್ ಮೃತಪಟ್ಟ ಬಾಲಕ. ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಗ್ರಾಮದ ಚನ್ನ ಮಲ್ಲಿಕಾರ್ಜುನ್ ಎಂಬುವವರ ಪುತ್ರ ಮಿಥುನ್ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದವು. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ನಾಯಿ ಕಡಿತದಿಂದ ಗಾಯಗೊಂಡ ಬಾಲಕನ್ನು ಬಳ್ಳಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮಿಥುನ್ ಸಾವನ್ನಪ್ಪಿದ್ದಾನೆ. ಕೋಚಿಂಗ್ ಸೆಂಟರ್‌ನಿಂದ ವಾಪಸ್ ಮನೆಗೆ ಮರಳುವಾಗ ಘಟನೆ ಸಂಭವಿಸಿದೆ. ಸೈಕಲ್‌ನಲ್ಲಿ ತೆರಳುತ್ತಿದ್ದ ಬಾಲಕನ ಮೇಲೆ ಮುಗಿ ಬಿದ್ದ ನಾಯಿಗಳು ಕಚ್ಚಿ ಗಾಯಗೊಳಿಸಿದ್ದವು. ಸ್ಥಳಕ್ಕೆ ರಾಂಪುರ PSI ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
