ಇಂದು (ಜ .27) ಸಿಎಂ ಸಿದ್ದರಾಮಯ್ಯ (Cm siddaramaiah) ಪಾಲಿಗೆ ಬಹಳ ಮಹತ್ವದ ದಿನವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಗೆ ತಲೆನೋವಾಗಿರುವ ಮುಡಾ (MUDA)ಅಕ್ರಮ ಸೈಟ್ ಹಂಚಿಕೆ ಪ್ರಕರಣದ ಲೋಕಾಯುಕ್ತ ತನಿಖಾ ವರದಿ ಇಂದು ಕೋರ್ಟ್ಗೆ ಸಲ್ಲಿಕೆ ಆಗಲಿದೆ.
ಹೀಗಾಗಿ ಇಂದು ಸಿಎಂ ಸಿದ್ದರಾಮಯ್ಯಗೆ ಬಿಗ್ ಡೇ ಆಗಿದೆ. ಇನ್ನು ಮತ್ತೊಂದೆಡೆ ಈ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆಯಲ್ಲಿ ವಿಶ್ವಾಸವಿಲ್ಲ, ಈ ಪ್ರಕರಣವನ್ನು ಸಿಬಿಐಗೆ (CBI) ವಹಿಸಬೇಕು ಅಂತ ಸ್ನೇಹಮಯಿ ಕೃಷ್ಣ ಮುಡಾ ಹಗರಣವನ್ನ ಸಿಬಿಐ ತನಿಖೆಗೆ ಕೋರಿ ಅರ್ಜಿ ಸಲ್ಲಿಸಿದ್ರು.
ಈಗಾಗಲೇ ಲೋಕಾಯುಕ್ತ ತನಿಖೆ ಬಹುತೇಕ ಪೂರ್ಣಗೊಂಡಿದ್ದು , ಈ ಮಧ್ಯೆ ದೂರುದಾರ ಸಿಬಿಐ ತನಿಖೆಗೆ ಮನವಿ ಮಾಡಿದ್ದಾರೆ. ಈ ಹಿನ್ನಲ್ಲೇ ಲೋಕಾಯುಕ್ತ ಪೊಲೀಸರು (Lokayukta police) ಕೋರ್ಟ್ಗೆ ಕೇಸ್ ತನಿಖಾ ವರದಿ ಸಲ್ಲಿಸಲಿದ್ದು, ಜಸ್ಟೀಸ್ ಎಂ.ನಾಗಪ್ರಸನ್ನ ಅವರ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.
ಹೀಗಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಬಗ್ಗೆ ಕೋರ್ಟ್ ಇಂದು ಅಂತಿಮ ತೀರ್ಪು ಪ್ರಕಟಿಸಲಿದ್ದು, ನ್ಯಾಯಾಲಯದ ಒಂದು ವೇಳೆ ಸಿಬಿಐ ಗೆ ನೀಡಲು ಗ್ರೀನ್ ಸಿಗ್ನಲ್ ನೀಡಿದ್ರೆ ಸಿಎಂ ಗೆ ಸಂಕಷ್ಟ ಎದ್ರಾಗೋದು ಫಿಕ್ಸ್.