ಮಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದ್ದು, ಎಲ್ಲೆಡೆ ಶಾಂತರೀತಿಯಲ್ಲಿ ಜರುಗುತ್ತಿದೆ. ಈ ವೇಳೆ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಪುಂಡಾಟ ಮೆರೆದಿರುವ ಘಟನೆ ನಡೆದಿದೆ.
ನಗರದ ಕಂಕನಾಡಿ ಕಪಿತಾನಿಯೋ ಶಾಲಾ ಮತಗಟ್ಟೆ ಹತ್ತಿರ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು ಬಂದ ವೇಳೆ ಈ ಘಟನೆ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಜೊತೆ ಜನ ಸೇರಿರುವುದನ್ನು ಬಿಜೆಪಿ ಕಾರ್ಯಕರ್ತ ಪ್ರಶ್ನಿಸಿದ್ದಾನೆ. ಈ ವೇಳೆ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ.
ಈ ವೇಳೆ ಅಧಿಕಾರಿಯೊಂದಿಗೆ ಕೂಡ ವಾಗ್ವಾದ ನಡೆದಿದೆ. ಅಧಿಕಾರಿಯನ್ನು ಈ ಸಂದರ್ಭದಲ್ಲಿ ತಳ್ಳಾಡಲಾಗಿದೆ.