ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯಗೆ (Bangalore South MP Tejaswi Surya) ಕಂಕಣ ಭಾಗ್ಯ ಕೂಡಿ ಬಂದಿದೆ. ಚೆನ್ನೈ ಮೂಲದ ಗಾಯಕಿ ಸಿವಶ್ರೀ ಜತೆ ಮುಂದಿನ ವರ್ಷ ಮಾರ್ಚ್ 4ರಂದು ತೇಜಸ್ವಿ ಸೂರ್ಯ ಹಸೆಮಣೆ ಏರಲಿದ್ದಾರೆಂಬ ಸುದ್ದಿಯನ್ನು ಅಧಿಕೃತವಾಗಿ ಘೋಷಿಸಬೇಕಷ್ಟೆ.
ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಚೆನ್ನೈ ಮೂಲದ ಗಾಯಕಿ ಸಿವಶ್ರೀ ಜತೆ ಮುಂದಿನ ವರ್ಷ ಮಾರ್ಚ್ 4ರಂದು ತೇಜಸ್ವಿ ಸೂರ್ಯ ಹಸೆಮಣೆ ಏರಲಿದ್ದಾರೆ. ಬಿಜೆಪಿಯ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಸಂಸದ ತೇಜಸ್ವಿ ಸೂರ್ಯ ಅವರಿಗೆ ಮದುವೆ ಯಾವಾಗ ಎಂಬ ಪ್ರಶ್ನೆ ಸದಾ ಕಾಡುತ್ತಿತ್ತು ಕೊನೆಗೂ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಹಲವು ಸಂದರ್ಭಗಳಲ್ಲಿ ತೇಜಸ್ವಿ ಸೂರ್ಯ (Tejaswi Surya) ಅವರಲ್ಲಿ ಮದುವೆ ಬಗ್ಗೆ ಕೇಳಿದರೂ ಅವರು ಈ ವಿಚಾರದ ಬಗ್ಗೆ, ಬಾಯ್ಬಿಟ್ಟಿರಲಿಲ್ಲ, ಈಗ ಸದ್ದಿಲ್ಲದೇ, ಹಸೆಮಣೆ ಏರಲು ಸಿದ್ಧರಿದ್ದಾರೆ.
ಯೂಟ್ಯೂಬ್‌ನಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಫಾಲೋವರ್ಸ್‌ಗಳನ್ನು ಹೊಂದಿರುವ ಸಿವಶ್ರೀ ಸ್ಕಂದಕುಮಾರ್ (Sivashree Skandakumar) ಕಳೆದ ಜನವರಿಯಲ್ಲಿ ರಾಮನವಮಿ ಸಂದರ್ಭದಲ್ಲಿ ಕನ್ನಡದ ಭಕ್ತಿಗೀತೆಯಾದ ಪೂಜಿಸಲೆಂದೇ ಹೂಗಳ ತಂದೆ ಹಾಡನ್ನು ತಮ್ಮ ಯೂಟ್ಯೂಬ್ ಚಾನಲ್‌ನಲ್ಲಿ ಹಾಡಿದ್ದರು. ಈ ಹಾಡಿಗೆ ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಕೂಡ ಮೆಚ್ಚುಗೆ ವ್ಯಕ್ತಪಡಿಸಿ ತಮ್ಮ ಟ್ವಿಟ್ಟರ್‌ನಲ್ಲಿ ವೀಡಿಯೋ ಲಿಂಕ್ ಶೇರ್ ಮಾಡಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಕನ್ನಡದಲ್ಲಿ ಶಿವಶ್ರೀ ಸ್ಕಂದಪ್ರಸಾದ್ (Sivashree Skandakumar) ಅವರ ಈ ನಿರೂಪಣೆಯು ಪ್ರಭು ಶ್ರೀರಾಮನ ಭಕ್ತಿಯ ಮನೋಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ. ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಬಹಳ ದೂರ ಸಾಗುತ್ತವೆ ಎಂದು ಪ್ರಧಾನಿ ಬರೆದುಕೊಂಡಿದ್ದರು.
ಭರತನಾಟ್ಯ ಕಲಾವಿದೆಯಾಗಿರುವ ಸಿವಶ್ರೀ ಸ್ಲಂದ ಪ್ರಸಾದ್ ಅವರನ್ನು ವರಿಸಲು ಸಜ್ಜಾಗಿದ್ದಾರೆ. ಈಗಾಗಲೇ ಎರಡೂ ಕುಟುಂಬಗಳು ಈ ವಿವಾಹಕ್ಕೆ ಒಪ್ಪಿಗೆಯ ಮುದ್ರೆ ಹಾಕಿದ್ದು, ಮಾರ್ಚ್ 4ಕ್ಕೆ ವಿವಾಹ ನಡೆಯಲಿದೆ. ಸಿವಶ್ರೀ ಸ್ಲಂದ ಪ್ರಸಾದ್ ಅವರು ಶಾಸ್ತ್ರೀಯ ಸಂಗೀತ ಗಾಯಕಿಯಾಗಿದ್ದಾರೆ. ಶಾಸ್ತ್ರ ವಿಶ್ವವಿದ್ಯಾಲಯದಲ್ಲಿ ಬಯೋ ಎಂಜಿನಿಯರಿಂಗ್ ವಿಷಯದಲ್ಲಿ ಬಿಟಿಕ್ ಪದವಿ ಮಾಡಿದ್ದಾರೆ. ಇದರೊಂದಿಗೆ ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಎಂಎ ಪದವಿ, ಮದ್ರಾಸ್ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತ ಎಂಎ ಪದವಿ ಪಡೆದಿದ್ದಾರೆ. ಸೈಕ್ಲಿಂಗ್(Cycling), ಟ್ರೆಕ್ಕಿಂಗ್(Trucking) ವಾಕಥಾನ್‌ಗಳಲ್ಲಿಯೂ ಆಸಕ್ತಿ ಹೊಂದಿದ್ದಾರೆ. ಸಿವಶ್ರೀ ಅವರ ಯೂಟ್ಯೂಬ್ ಚಾನೆಲ್‌ಗೆ ಸುಮಾರು ಎರಡು ಲಕ್ಷಕ್ಕೂ ಅಧಿಕ ಫಾಲೋವರ್ಸ್ ಇದ್ದಾರೆ.