ಕೊಡಗು ಪೊಲೀಸರಿಂದ 12 ಆರೋಪಿಗಳ ಬಂಧನ
ಮಡಿಕೇರಿ ;ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು ನಿ (ಕೆಡಿಸಿಸಿ) ಮಡಿಕೇರಿ ಮುಖ್ಯ ಶಾಖೆಯಲ್ಲಿ ದಿನಾಂಕ: 04-12-2024 ರಂದು ಮೊಹಮ್ಮದ್ ರಿಜ್ವಾನ್.ಕೆ.ಎ ಇವರು 08 ಚಿನ್ನದ ಬಳೆಗಳನ್ನು ಅಡಮಾನ ಮಾಡಿ ಸಾಲ ಪಡೆದುಕೊಳ್ಳುವ ಸಂದರ್ಭದಲ್ಲಿ ಆಭರಣವನ್ನು ಪರಿಶೀಲಿಸಲಾಗಿ ನಕಲಿ ಆಭರಣ ಎಂದು ತಿಳಿದುಬಂದಿರುತ್ತದೆ.
ಇದೇ ರೀತಿಯಲ್ಲಿ ಎಮ್ಮೆಮಾಡು ನಿವಾಸಿಗಳಾದ ರಿಯಾಜ್, ಖತೀಜಾ & ಮಹಮ್ಮದ್ ಅನೀಫ್, ಕುಂಜಿಲ ಗ್ರಾಮದ ನಿವಾಸಿಗಳಾದ ಅಬ್ದುಲ್ ನಾಸೀರ್, ಮೂಸಾ & ಹಂಸ ಎಂಬುವವರುಗಳು ಮಡಿಕೇರಿ, ಭಾಗಮಂಡಲ, ವಿರಾಜಪೇಟೆ, ಕಡಂಗ ಗಳಲ್ಲಿನ ಕೆಡಿಸಿಸಿ ಬ್ಯಾಂಕ್, ಮಡಿಕೇರಿಯ ಮುತ್ತೂಟ್ ಫಿನ್ ಭಾಗಮಂಡಲದ ವಿಎಸ್ಎಸ್ಎನ್ ಬ್ಯಾಂಕ್ಗಳಲ್ಲಿ ಒಟ್ಟು 625 ಗ್ರಾಂ ತೂಕದ ನಕಲಿ ಚಿನ್ನಾಭರಣಗಳನ್ನು ಅಡಮಾನ ಮಾಡಿ ಒಟ್ಟು ರೂ.34, 95,016/- ಹಣವನ್ನು ಸಾಲವಾಗಿ ಪಡೆದಿರುತ್ತಾರೆ.
ಪ್ರಕರಣದ ವಿಚಾರಣೆ ಸಂದರ್ಭ ಕೇರಳ ರಾಜ್ಯ ಮಲ್ಲಪುರಂ ಜಿಲ್ಲೆ ನಿವಾಸಿ ನವಾಜ್, 47 ವರ್ಷ ಎಂಬಾತನು ನಕಲಿ ಚಿನ್ನವನ್ನು ನೀಡಿರುವುದು ಕಂಡುಬಂದಿರುತ್ತದೆ. ಮುಂದಿನ ತನಿಖೆಯಲ್ಲಿ ಈ ಕೃತ್ಯದ ಮಾಸ್ಟರ್ ಮೈಂಡ್ ಕೇರಳ ರಾಜ್ಯದ ಎರ್ನಕುಲಂ ಜಿಲ್ಲೆಯ ಮೊಹಮ್ಮದ್ ಕುಂಞ, 48 ವರ್ಷ, ಅಕ್ಕಸಾಲಿಗ ವೃತ್ತಿ ಈತನು ಪ್ರದೀಪ್, 60 ವರ್ಷ ಎಂಬಾತನಿಗೆ ಹಣವನ್ನು ನೀಡಿ ನಕಲಿ ಚಿನ್ನ ಲೇಪಿತ ಆಭರಣಗಳನ್ನು ತಯಾರಿಸಿರುವುದು ಕಂಡಬಂದಿರುತ್ತದೆ.
ಮಾಸ್ಟರ್ ಮೈಂಡ್ ಮೊಹಮ್ಮದ್ ಕುಂಞ ಈತನಿಂದ ಮಧ್ಯವರ್ತಿಯಾದ ನಿಶಾದ್ ಎಂಬಾತನು ನಕಲಿ ಚಿನ್ನವನ್ನು ಪಡೆದು ನವಾಜ್ ಎಂಬಾತನಿಗೆ ನೀಡಿರುವುದು ತನಿಖೆ ಸಂದಭ೯ ತಿಳಿದುಬಂದಿದೆ,ಪ್ರದೀಪ್ ವಿರುದ್ದ ಮೇಲೆ 2024 ನೇ ಸಾಲಿನಲ್ಲಿ 3 ಪ್ರಕರಣಗಳು, ಒಟ್ಟು 15 ಪ್ರಕರಣಗಳು ದಾಖಲಾಗಿರುತ್ತದೆ ನಿರುದ್ ವಿರುದ್ದ 1 ದರೋಡೆ ಪ್ರಕರಣ, ಒಟ್ಟು 4 ಪ್ರಕರಣಗಳು ದಾಖಲಾಗಿರುತ್ತದೆ. ಈ ಪ್ರಕರಣದ ಆರೋಪಿಗಳು ವಿಚಾರಣಾಧಿಕಾರಿಗಳ ಅಧಿಕಾರ ವ್ಯಾಪ್ತಿಯನ್ನು ದುರುಪಯೋಗ ಪಡಿಸಿಕೊಂಡು ವಿಚಾರಣೆ ಮುಗಿಯುವ ವೇಳೆಯಲ್ಲಿ ಜಾಮೀನಿನ ಮೇಲೆ ಹೊರಗೆ ಬಂದು ಪುನಃ ಇದೇ ರೀತಿಯ ಕೃತ್ಯದಲ್ಲಿ ತೊಡಗಿರುವುದು ವಿಚಾರಣೆಯಲ್ಲಿ ತಿಳಿದುಬಂದಿರುತ್ತದೆ.
ಈ ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಕಾಯ್ದೆಯ ಕಲಂ: 111 ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿರುತ್ತದೆ. ಸದರಿ ಆರೋಪಿಗಳಿಗೆ ಕಲಂ 111 ಬಿಎನ್ಎಸ್ ಆಕ್ಟ್ ಅಡಿಯಲ್ಲಿ ಕನಿಷ್ಠ 05 ವರ್ಷಗಳ ಜೈಲು ಶಿಕ್ಷೆ ಹಾಗೂ ಗರಿಷ್ಠ ಜೀವಾವಧಿ ಶಿಕ್ಷೆಯನ್ನು ವಿಧಿಸಬಹುದಾಗಿರುತ್ತದೆ.
ಇಂತಹ ಕೃತ್ಯ ನಡೆಸಿದ ಆರೋಪಿಗಳಿಗೆ ಜಾಮೀನು ನೀಡದಂತೆ ಘನ ನ್ಯಾಯಾಲಯಕ್ಕೆ ಆಕ್ಷೇಪಣೆಯನ್ನು ಸಲ್ಲಿಸಲಾಗುವುದು ಎಂದು ಪೊಲೀಸ್ ವರಿಷ್ಟಾಧಿಕಾರಿ ರಾಮರಾಜನ್ ಹೇಳಿದ್ದಾರೆ,.