ಚಾಮರಾಜನಗರ: ಕಾಮುಕನ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಓರ್ವ ವ್ಯಕ್ತಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿ ಬರೆದಿಟ್ಟಿದ್ದ ಡೆತ್ ನೋಟ್ ಸಿಕ್ಕಿದೆ.
ಕಾಮುಕ ಲೋಕೇಶ್ ಎಂಬಾತನ ಕಿರುಕುಳದಿಂದಾಗಿ ಇಡೀ ಕುಟುಂಬ ಕ್ರಿಮಿನಾಶಕ ಸೇವಿಸಿತ್ತು. ಸದ್ಯ ಕಿರುಕುಳ ಕೊಟ್ಟಿರುವ ಕುರಿತು ಅಪ್ರಾಪ್ತೆ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ. ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಸ್ವೀಕರಿಸದ ಕೆ.ಆರ್ ನಗರದ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಈ ಕುರಿತು ಮಲೆ ಮಹದೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದ್ದು ಐಪಿಸಿ 306, 509 ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಸದ್ಯ ಆರೋಪಿ ಬಲೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ನಿನ್ನೆ ಪೊಲೀಸರ ಕ್ರಮಕ್ಕೆ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ನಡೆ ಏಕ ಪಕ್ಷೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.