ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪವಿತ್ರಾ ಗೌಡ ಎ1 ಹಾಗೂ ದರ್ಶನ್ ಎ2 ಆರೋಪಿ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ.
ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಕಾರಣಕ್ಕಾಗಿ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು (Renuka Swamy) ಕೊಲೆ ಮಾಡಿದ ಆರೋಪ ಈಗ ದರ್ಶನ್ ಮತ್ತು ತಂಡದ ವಿರುದ್ಧ ಕೇಳಿ ಬಂದಿದೆ.
ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಪವನ್ ಎ3 ಆರೋಪಿಯಾಗಿದ್ದಾನೆ. ಬಂಧಿತ ಆರೋಪಿಗಳ ಮೆಡಿಕಲ್ ಟೆಸ್ಟ್ ಮಾಡಿಸಲಾಗಿದೆ. ಒಟ್ಟು 13 ಜನರನ್ನು ಮಂಗಳವಾರ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದೆ.
ದರ್ಶನ್ ಪ್ರತಿಭಾನ್ವಿತ ಕಲಾವಿದ ಎಂದು ಗುರುತಿಸಿಕೊಂಡಿದ್ದ. ಸದ್ಯ ಈ ಪ್ರಕರಣ ಆತನ ಬದುಕಿಗೆ ಕಪ್ಪು ಚುಕ್ಕೆ ಆದಂತಾಗಿದೆ. ರೇಣುಕಾ ಸ್ವಾಮಿ ಹತ್ಯೆ ವಿಚಾರದಲ್ಲಿ ಶಾಕಿಂಗ್ ಹೇಳಿಕೆಗಳು ಬಯಲಾಗುತ್ತಲೇ ಇವೆ. ದರ್ಶನ್, ಪವಿತ್ರಾ ಗೌಡ ಹಾಗೂ ಅವರ ಸಹಚರರ ವಿರುದ್ಧ ಅನೇಕ ಸಾಕ್ಷಿಗಳು ಸಿಗುತ್ತಿವೆ. ಕೊಲೆ ನಡೆದ ಶೆಡ್ಗೆ ಅಂದೇ ರಾತ್ರಿ ದರ್ಶನ್ ಕಾರು ಬಂದಿತ್ತು ಎಂಬುವುದಕ್ಕೆ ಸಿಸಿಟಿವಿ ದೃಶ್ಯಗಳು ಸಿಕ್ಕಿವೆ.