• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟೀಸರ್ ನಲ್ಲೇ ಮೋಡಿಮಾಡಿದ “ಕಪಟಿ” ಟೀಸರ್ ಬಿಡುಗಡೆ ಮಾಡಿ ಶುಭಕೋರಿದ ಡಾರ್ಲಿಂಗ್ ಕೃಷ್ಣ.

ಪ್ರತಿಧ್ವನಿ by ಪ್ರತಿಧ್ವನಿ
August 2, 2024
in Top Story, ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
ಟೀಸರ್ ನಲ್ಲೇ ಮೋಡಿಮಾಡಿದ “ಕಪಟಿ” ಟೀಸರ್ ಬಿಡುಗಡೆ ಮಾಡಿ ಶುಭಕೋರಿದ ಡಾರ್ಲಿಂಗ್ ಕೃಷ್ಣ.
Share on WhatsAppShare on FacebookShare on Telegram

ಡಿ.ಪಿಕ್ಚರ್ಸ್ ಲಾಂಛನದಲ್ಲಿ ದಯಾಳ್ ಪದ್ಮನಾಭನ್ ನಿರ್ಮಿಸಿರುವ, ರವಿಕಿರಣ್ ಹಾಗೂ ಚೇತನ್ S.P ಅವರ ಜಂಟಿ ನಿರ್ದೇಶನದ ಹಾಗೂ ಸುಕೃತ ವಾಗ್ಲೆ, ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ಕಪಟಿ” ಚಿತ್ರದ ಟೀಸರ್ ಜಂಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ನಟ ಡಾರ್ಲಿಂಗ್ ಕೃಷ್ಣ ಟೀಸರ್ ಅನಾವರಣ ಮಾಡಿ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ADVERTISEMENT

ಇದು ನಮ್ಮ ಡಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹನ್ನೆರಡನೇ ಚಿತ್ರ. ಹನ್ನೆರಡು ಚಿತ್ರಗಳಲ್ಲಿ ಹತ್ತು ಕನ್ನಡ ಹಾಗೂ ಎರಡು ತಮಿಳು ಚಿತ್ರಗಳು. ಹನ್ನೊಂದು ಚಿತ್ರಗಳನ್ನು ನಾನೇ ನಿರ್ಮಿಸಿ , ನಿರ್ದೇಶನವನ್ನೂ ಮಾಡಿದ್ದೇನೆ. ಆದರೆ ಈ ಚಿತ್ರವನ್ನು ನಾನು ನಿರ್ಮಾಣ ಮಾತ್ರ ಮಾಡಿದ್ದೇನೆ. ರವಿಕಿರಣ್ ಹಾಗೂ ಚೇತನ್ S P ನಿರ್ದೇಶನ ಮಾಡಿದ್ದಾರೆ. ಇವರು ಹಿಂದೆ “ಕೋಮ” ಎಂಬ ಚಿತ್ರವನ್ನು ನಿರ್ದೇಶಿಸಿದ್ದರು. ಇವರು ಬಂದು ಚಿತ್ರದ ಕಥೆ ಹೇಳಿದಾಗ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. “ಡಾರ್ಕ್ ನೆಟ್” ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಕನ್ನಡದಲ್ಲಿ “ಗುಲ್ಟು” ಚಿತ್ರದ ನಂತರ ಈ ಜಾನರ್ ನ ಚಿತ್ರ ಬಂದಿರಲಿಲ್ಲ. ಇನ್ನು, ಕಂಟೆಂಟ್ ಓರಿಯಂಟೆಡ್ ಚಿತ್ರಗಳಿಂದ ಯಾವತ್ತು ಯಾರಿಗೂ ನಷ್ಟವಾಗಲ್ಲ ಎಂದು ನಂಬಿರುವವನು ನಾನು. ಆದರೆ ಸ್ವಲ್ಪ ತಾಳ್ಮೆ ಇರಬೇಕು ಅಷ್ಟೇ. ಅದಕ್ಕೆ ಉದಾಹರಣೆ ನನ್ನ ಚಿತ್ರಗಳು. “ಕಪಟಿ” ಚಿತ್ರವನ್ನು ಇತ್ತೀಚೆಗೆ ಸ್ನೇಹಿತರ ಜೊತೆ ನೋಡಿದೆ. ಚೆನ್ನಾಗಿ ಬಂದಿದೆ‌. ಚಿತ್ರ ಆಗಸ್ಟ್ 23 ರಂದು ಬಿಡುಗಡೆಯಾಗಲಿದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಡಾರ್ಲಿಂಗ್ ಕೃಷ್ಣ ಅವರಿಗೆ ಧನ್ಯವಾದ ಎಂದರು ನಿರ್ಮಾಪಕ ದಯಾಳ್ ಪದ್ಮನಾಭನ್ .

ಸುಮಾರು ಏಳು ವರ್ಷಗಳ (ಕೋಮ ಚಿತ್ರದ) ನಂತರ ನಾವಿಬ್ಬರು ಮತ್ತೆ ನಿರ್ದೇಶಿಸಿರುವ ಚಿತ್ರವಿದು. ಕನ್ನಡದಲ್ಲಿ ತೀರ ವಿರಳ ಎನ್ನಬಹುದಾದ ಕಥಾಹಂದರ ಹೊಂದಿರುವ ಚಿತ್ರವಿದು. ಈ ಕಥೆಯನ್ನು ದಯಾಳ್ ಅವರ ಬಳಿ ಹೇಳಿದ ತಕ್ಷಣ ಒಪ್ಪಿ ನಿರ್ಮಾಣಕ್ಕೆ ಮುಂದಾದರು. ಇಡೀ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ನಮ್ಮ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದು ನಿರ್ದೇಶಕದ್ವಯರಾದ ರವಿಕಿರಣ್ ಹಾಗೂ ಚೇತನ್ S P ತಿಳಿಸಿದರು.

ನಾನು ಚಿತ್ರರಂಗವನ್ನು ಬಿಟ್ಟು ಉಡುಪಿಯಲ್ಲಿ ನೆಲೆಸಿದ್ದೆ. ನಿರ್ದೇಶಕರು ಹೇಳಿದ ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡು ಬಹು ದಿನಗಳ ನಂತರ ಮತ್ತೆ ನಟಿಸಿದ್ದೇನೆ. ಈ ಚಿತ್ರದಲ್ಲಿ ನನ್ನ ಪಾತ್ರ ವಿಭಿನ್ನವಾಗಿದೆ ಎಂದರು “ಜಟ್ಟ” ಚಿತ್ರದ ಖ್ಯಾತಿಯ ಸುಕೃತ ವಾಗ್ಲೆ.

ಪ್ರಮುಖಪಾತ್ರದಲ್ಲಿ ನಟಿಸಿರುವ ದೇವ್ ದೇವಯ್ಯ ಹಾಗೂ ಸಾತ್ವಿಕ್ ಕೃಷ್ಣನ್ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿ, ಅವಕಾಶ ನೀಡಿದ ನಿರ್ಮಾಪಕ ದಯಾಳ್ ಅವರಿಗೆ ಧನ್ಯವಾದ ಹೇಳಿದರು. ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಜೋಹನ್ ಮಾತನಾಡಿದರು.

Tags: DARLING KRISHNADayalKannada movieಕಟಪಿ ಟೀಸರ್‌ಕನ್ನಡ ಸಿನಿಮಾಕಪಟಿ
Previous Post

ಚಾಮುಂಡಿಬೆಟ್ಟದಲ್ಲಿ ಕೊನೆಯ ಆಷಾಢ ಸಂಭ್ರಮ.. ದೇವಿಗೆ ‘ಸಿಂಹವಾಹಿನಿ’ ಅಲಂಕಾರ..! 

Next Post

ಅವರಿಗೆ ನಾನ್ಯಾಕೆ ಹೆದರ್ಕೋಬೇಕು CM ಸಿದ್ದರಾಮಯ್ಯ..!

Related Posts

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ
Top Story

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

by ಪ್ರತಿಧ್ವನಿ
February 11, 2026
0

ಬೆಂಗಳೂರು: ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ(Sudharani )ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಬಮೂಲ್ ಅಧ್ಯಕ್ಷ ಡಿ.ಕೆ....

Read moreDetails
ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

February 11, 2026
2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು

February 11, 2026
ಬೆಂಗಳೂರಿಗಾಗಿ ಕೆಂಪೇಗೌಡರ ಸೊಸೆ‌ ಲಕ್ಷ್ಮಿದೇವಿ ಮಾಡಿದ ಆತ್ಮತ್ಯಾಗ ಇದು!

ಬೆಂಗಳೂರಿಗಾಗಿ ಕೆಂಪೇಗೌಡರ ಸೊಸೆ‌ ಲಕ್ಷ್ಮಿದೇವಿ ಮಾಡಿದ ಆತ್ಮತ್ಯಾಗ ಇದು!

February 11, 2026
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
Next Post

ಅವರಿಗೆ ನಾನ್ಯಾಕೆ ಹೆದರ್ಕೋಬೇಕು CM ಸಿದ್ದರಾಮಯ್ಯ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada