• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಆಂಧ್ರಪ್ರದೇಶ | ತಮ್ಮ ಚಪ್ಪಲಿಯಿಂದ ತಾವೇ ಹೊಡೆದುಕೊಂಡ ಕೌನ್ಸಿಲರ್‌ ; ಕಾರಣ ಇಲ್ಲಿದೆ

ಪ್ರತಿಧ್ವನಿ by ಪ್ರತಿಧ್ವನಿ
August 1, 2023
in ಇದೀಗ, ದೇಶ, ರಾಜಕೀಯ
0
ಆಂಧ್ರಪ್ರದೇಶ
Share on WhatsAppShare on FacebookShare on Telegram

ಚುನಾವಣೆಗಳಲ್ಲಿ ಗೆದ್ದ ನಂತರ ಮತದಾರರತ್ತ ತಿರುಗಿಯೂ ನೋಡದ ರಾಜಕಾರಣಿಗಳ ನಡುವೆ ಆಂಧ್ರಪ್ರದೇಶ ರಾಜ್ಯದ ಸ್ಥಳೀಯ ರಾಜಕಾರಣಿಯೊಬ್ಬರು ನಡೆದುಕೊಂಡಿರುವ ರೀತಿ ಇತರ ಜನನಾಯಕರಿಗೆ ಪಾಠದಂತಿದೆ.

ADVERTISEMENT

ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗದ ಕಾರಣಕ್ಕೆ ಅನಕಪಲ್ಲಿ ಜಿಲ್ಲೆಯ ಕೌನ್ಸಿಲರ್‌ರೊಬ್ಬರು ತಮ್ಮ ಚಪ್ಪಲಿಯಿಂದ ತಾವೇ ಹೊಡೆದುಕೊಂಡು ಪಶ್ಚಾತಾಪ ಪಟ್ಟಿರುವ ಘಟನೆ ನಡೆದಿದೆ.

ಆಂಧ್ರಪ್ರದೇಶ ನರಸಿಪಟ್ಟಣ ಪುರಸಭೆಯ (ವಾರ್ಡ್-20) ಟಿಡಿಪಿ ಬೆಂಬಲಿತ ಕೌನ್ಸಿಲರ್ ಮುಲಪರ್ತಿ ರಾಮರಾಜು ಅವರು ಸಭೆಯಲ್ಲಿ ತಮ್ಮ ಚಪ್ಪಲಿಯಿಂದ ಕಪಾಳಮೋಕ್ಷ ಮಾಡಿಕೊಳ್ಳುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ಈಗ ವೈರಲ್‌ ಆಗಿದೆ.

“ಪಾಲಿಕೆ ಸದಸ್ಯನಾಗಿ ಆಯ್ಕೆಯಾಗಿ 31 ತಿಂಗಳು ಕಳೆದರೂ ನನ್ನ ವಾರ್ಡ್‌ನಲ್ಲಿನ ಒಳಚರಂಡಿ, ವಿದ್ಯುತ್, ನೈರ್ಮಲ್ಯ, ರಸ್ತೆ ಮತ್ತಿತರ ನಾಗರಿಕ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತಿಲ್ಲ, ಸಾಯುವುದು ಒಳ್ಳೆಯದು” ಎಂದು ಹೇಳುತ್ತಾ ರಾಮರಾಜು ಎಂಬ ವ್ಯಕ್ತಿ ಚಪ್ಪಲಿಯಿಂದ ಕಪಾಳಮೋಕ್ಷ ಮಾಡಿಕೊಂಡಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

40 ವರ್ಷದ ರಾಮರಾಜು ಅವರು ಆಟೋರಿಕ್ಷಾ ಓಡಿಸುವ ಮೂಲಕ ಜೀವನ ಸಾಗಿಸುತ್ತಿದ್ದಾರೆ. ಆಂಧ್ರಪ್ರದೇಶ ಸ್ಥಳೀಯ ಪುರಸಭೆ ಅಧಿಕಾರಿಗಳು 20ನೇ ವಾರ್ಡ್ ಅನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? Vira Video | ಹಾವಿನ ಮರಿ ಕಚ್ಚಲು ಬಂದರೂ ಅಲುಗಾಡದ ಬೆಕ್ಕು..!

ಸಮಸ್ಯೆಗಳನ್ನು ಬಗೆಹರಿಸುವಂತೆ ಮತದಾರರು ಒತ್ತಾಯಿಸುತ್ತಿದ್ದಾರೆ. ಆದರೆ, ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ ಎಂದು ರಾಮರಾಜು ವಿಡಿಯೊದಲ್ಲಿ ಹೇಳಿದ್ದಾರೆ.

ರಾಮರಾಜು ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಆಂಧ್ರಪ್ರದೇಶ ಟಿಡಿಪಿ, ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದೆ.

తెలుగుదేశం పార్టీ తరపున గెలిచిన లింగాపురం గ్రామ గిరిజన ప్రజాప్రతినిధి ఆయన. పదవిలో ఉండి కూడా 30 నెలలుగా గ్రామంలో ఒక్క కుళాయి కూడా వేయించలేకపోయానని… దీనికంటే చచ్చిపోవడం నయమని కౌన్సిలర్ల సమావేశంలో కన్నీరు పెట్టుకుని, చెప్పుతో కొట్టుకున్నారాయన.#AndhraPradesh #NalugellaNarakam… pic.twitter.com/u6k4E5KXZy

— Telugu Desam Party (@JaiTDP) July 31, 2023
Tags: Andra PradeshCouncilorTDPYSR Congressಆಂಧ್ರಪ್ರದೇಶಕೌನ್ಸಿಲರ್‌ಟಿಡಿಪಿವೈಎಸ್‌ಆರ್‌ ಕಾಂಗ್ರೆಸ್‌
Previous Post

ಗೋಹತ್ಯೆ ಸಂಪೂರ್ಣ ನಿಷೇಧ | ಕೇಂದ್ರಕ್ಕೆ ನಿರ್ದೇಶನ ನೀಡಲು ಕೋರಿದ್ದ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್

Next Post

ಸೌಜನ್ಯ ಹತ್ಯೆ ಪ್ರಕರಣ | ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಇಲ್ಲ ಎಂದ ನಟ ದುನಿಯಾ ವಿಜಯ್

Related Posts

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು
ರಾಜಕೀಯ

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

by ಪ್ರತಿಧ್ವನಿ
May 15, 2026
0

ತಿರುವನಂತಪುರಂ: ಕಾಂಗ್ರೆಸ್ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರನ್ನು ಕೇರಳದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದೆ. ಕೇರಳ ಕಾಂಗ್ರೆಸ್ ಉಸ್ತುವಾರಿ ದೀಪದಾಸ್...

Read moreDetails
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
Next Post
ಸೌಜನ್ಯ ಹತ್ಯೆ ಪ್ರಕರಣ

ಸೌಜನ್ಯ ಹತ್ಯೆ ಪ್ರಕರಣ | ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಇಲ್ಲ ಎಂದ ನಟ ದುನಿಯಾ ವಿಜಯ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada