
ಜೈಪುರ(Jaipur): ಶನಿವಾರ ಸಂಜೆ ಅಪರಿಚಿತ ವ್ಯಕ್ತಿಯೊಬ್ಬರು ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರಿಗೆ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಭದ್ರತಾ ಏಜೆನ್ಸಿಗಳು ಮುಖ್ಯಮಂತ್ರಿಗೆ ಬೆದರಿಕೆ ಬಂದ ಮೊಬೈಲ್ ಸಂಖ್ಯೆಯನ್ನು ಮತ್ತು ಜಿನ್ನೆಲೆಯನ್ನು ಪತ್ತೆಹಚ್ಚಲು ಪ್ರಾರಂಭಿಸಿವೆ.ಮುಖ್ಯಮಂತ್ರಿಗೆ ಬೆದರಿಕೆ ಒಡ್ಡಿದ ಯುವಕ ಕಳೆದ ಮೂರು ತಿಂಗಳಿನಿಂದ ಶ್ಯಾಲ್ವಾಸ್‌ನ ಕೇಂದ್ರ ಕಾರಾಗೃಹದಲ್ಲಿ ಇದ್ದಾನೆ. ಘಟನೆಯ ಬೆನ್ನಲ್ಲೇ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಸೋನ್ವಾಲ್ ಸೇರಿದಂತೆ ಜಿಲ್ಲೆಯ ಅನೇಕ ಅಧಿಕಾರಿಗಳು ಶ್ಯಾಲ್ವಾಸ್ ಸೆಂಟ್ರಲ್ ಜೈಲಿಗೆ ತಲುಪಿದರು, ಅಲ್ಲಿ ನಡೆಸಿದ ದಿಢೀರ್ ಶೋಧ ಕಾರ್ಯಾಚರಣೆಯಲ್ಲಿ 10 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಶನಿವಾರ ತಡರಾತ್ರಿ ಆರೋಪಿ ನೆಮೊ, ಡಾರ್ಜಿಲಿಂಗ್ ನಿವಾಸಿ, ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಹೆಚ್ಚುವರಿ ಎಸ್ಪಿ ಲೋಕೇಶ್ ಸೋನ್ವಾಲ್ ಹೇಳಿದ್ದಾರೆ. “ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಶ್ಯಾಲ್ವಾಸ್ ಸೆಂಟ್ರಲ್ ಜೈಲಿನಲ್ಲಿ ಕಳೆದ ಮೂರು ತಿಂಗಳಿನಿಂದ ಸೆರೆವಾಸ ಅನುಭವಿಸಿದ್ದಾನೆ.
ಈ ನಿಟ್ಟಿನಲ್ಲಿ ಜೈಲಿನಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಜೈಪುರ ಪೊಲೀಸರ ಕೈಗೆ ಅತ್ಯಾಚಾರ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾನೆ. ಅವರನ್ನು ಮೂರು ತಿಂಗಳ ಹಿಂದೆ ದೌಸಾ ಜಿಲ್ಲೆಯ ಶೈಲವಾಸ್‌ನಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಇದೀಗ ರಾಜಸ್ಥಾನ ಪೊಲೀಸರು ಜೈಲು ನೌಕರರ ಪಾತ್ರದ ಬಗ್ಗೆಯೂ ತನಿಖೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ರಾಜಸ್ಥಾನದ ಶೂಟರ್ ನಿತಿನ್ ಫೌಜಿ ಸೇರಿದಂತೆ ಹಲವು ಮೋಸ್ಟ್ ವಾಂಟೆಡ್ ಕ್ರಿಮಿನಲ್‌ಗಳನ್ನು ಶ್ಯಾಲ್ವಾಸ್ ಜೈಲಿನಲ್ಲಿ ಇರಿಸಲಾಗಿದೆ.