ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಾಂಪ್ರದಾಯಿಕ ದಸರಾಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ನಾಡಹಬ್ಬ ದಸರಾಗೆ ಚಾಮುಂಡಿ ಬೆಟ್ಟದ ವೇದಿಕೆಯಲ್ಲಿನ ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಗೆ ವಿದ್ಯುಕ್ತ ಚಾಲನೆಯನ್ನು ಗಣ್ಯರು, ಶುಭ ಲಗ್ನ 10:15 ರಿಂದ 10:36 ರ ವೃಶ್ಚಿಕ ಲಗ್ನದಲ್ಲಿ ಚಾಲನೆ ನೀಡಲಾಯಿತು.
ಚಾಮುಂಡಿ ಬೆಟ್ಟದ ವೇದಿಕೆ ಕಾರ್ಯಕ್ರಮದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ದಸರಾ ಉದ್ಘಾಟಕರಾದ ಹಂಸಲೇಖ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ನಾಡ ಹಬ್ಬಕ್ಕೆ ಚಾಲನೆ ನೀಡಿದರು. ಇದಕ್ಕೂ ಮುನ್ನ ನಾಡ ಅಧಿದೇವತೆ ಚಾಮುಂಡೇಶ್ವರಿಯ ಮೂಲ ಮೂರ್ತಿಗೆ ಪೂಜೆ ಸಲ್ಲಿಸಿ, ವೇದಿಕೆಗೆ ಆಗಮಿಸಿದ ಗಣ್ಯರು ದಸರಾ ಉದ್ಘಾಟಕರಾದ ಹಂಸಲೇಖ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡಿದರು.






