ಯುವತಿಯರು ಕುಡಿದ ಮತ್ತಿನಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಆರೋಪವೊಂದು ಕೇಳಿ ಬಂದಿದೆ.
ಈ ಘಟನೆ ಗೋಕುಲ್ ಟೌನ್ಶಿಪ್ನಲ್ಲಿನ ಪಂಖಾ ಫಾಸ್ಟ್ ಎಂಬ ಬಾರ್ ಆ್ಯಂಡ್ ರೆಸ್ಟೋರೆಂಟ್ನಲ್ಲಿ ನಡೆದಿದೆ. ಯುವತಿಯರ ರಂಪಾಟ ಸಿಸಿಟಿಯಲ್ಲಿ ಸೆರೆಯಾಗಿದೆ. ಹೀಗಾಗಿ ಮೂವರು ಯುವತಿಯರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಈ ಪಬ್ ನಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ ಎನ್ನಲಾಗಿತ್ತು. ಸುದ್ದಿ ತಿಳಿಯುತ್ತಿದ್ದಂತೆ ಅರ್ನಾಳ ಸಾಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ಪೊಲೀಸರೊಂದಿಗೆ ಮೂವರು ಮಹಿಳೆಯರು ವಾಗ್ವಾದ ನಡೆಸಿದ್ದಾರೆ. ಈ ವೇಳೆ ಯುವತಿಯರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅರ್ನಾಳ ಸಾಗರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಅಧಿಕಾರಿ ಉತ್ಕರ್ಷ ವಂಜರಿ (25) ದೂರು ನೀಡಿದ್ದಾರೆ. ಸದ್ಯ ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.