ಬೆಂಗಳೂರು:ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಬೆಂಗಳೂರಿನ ಜೆ.ಪಿ.ನಗರದ 4ನೇ ಹಂತದಲ್ಲಿರುವ ‘ಬ್ರಾಡ್ ಕಾಂ’ ಕಂಪನಿಗೆ ಬೆಳಗ್ಗೆ 11:50ರ ಸುಮಾರಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.
ರಾಜಕಾರಣಿಗಳ ಫ್ಯಾನ್ಸ್ ವಾರ್ ಜೋರು: ಸಿದ್ದು ಗೆ ಜೈ ಅಂದಿದ್ದಕ್ಕೆ ಮೋದಿ ಫ್ಯಾನ್ಸ್ ಅಟ್ಯಾಕ್!ಕೂಡಲೆ ಮಾಹಿತಿ ಆಧರಿಸಿ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬೆದರಿಕೆ ಮೇಲ್ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಕಳೆದ 2024 ಮೇ 23 ರಂದು ಕೂಡ ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿರುವ ಮೂರು ಫೈವ್ ಸ್ಟಾರ್ ಹೋಟೆಲ್ಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿತ್ತು.
ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರಮುಖ ಒಟೆರಾ ಹೋಟೆಲ್ ಸೇರಿದಂತೆ ಬೆಂಗಳೂರಿನ ಮೂರು ಹೋಟೆಲ್ಗಳಿಗೆ ಮುಂಜಾನೆ ಬಾಂಬ್ ಬೆದರಿಕೆ ಇಮೇಲ್ಗಳು ಬಂದಿದ್ದು, ಈ ಮೂಲಕ ಬೆಳ್ಳಂಬೆಳಗ್ಗೆ ಹೋಟೆಲ್ ಮಾಲೀಕರಿಗೆ, ಸಿಬ್ಬಂದಿ ಶಾಕ್ ಆಗಿತ್ತು