ಚಿಕ್ಕಬಳ್ಳಾಪುರ: ಬಿಜೆಪಿ ಲೆಕ್ಕಾಚಾರವನ್ನೇ ಬುಡಮೇಲು ಮಾಡಿದ ರಾಜ್ಯದ ಮತದಾರ ಬಿಜೆಪಿಯ ಘಟಾನುಘಟಿ ನಾಯಕರನ್ನೇ ವಿಧಾನಸಭೆ ಪ್ರವೇಶಿಸದಂತೆ ಮಾಡಿದ್ದಾನೆ . ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಚಿವ ಸ್ಥಾನ ಅಲಂಕರಿಸಿದ್ದ ಡಾ.ಕೆ ಸುಧಾಕರ್ ತಮ್ಮ ಕ್ಷೇತ್ರದಲ್ಲಿ ಸೋಲನ್ನು ಅನುಭವಿಸಿದ್ದಾರೆ. ಇದರಿಂದ ನೊಂದ ಸುಧಾಕರ್ ಕಟ್ಟಾ ಅಭಿಮಾನಿ ಆತ್ಮಹತ್ಯೆಗೆ ಶರಣಾದ ಘಟನೆಯು ವರದಿಯಾಗಿದೆ.

ಚಿಕ್ಕಬಳ್ಳಾಪುರ ತಾಲೂಕಿನ ವಡ್ರೆಪಾಳ್ಯದ ಕೆರೆಗೆ ಜಿಗಿದು ಸುಧಾಕರ್ ಅಭಿಮಾನಿ ಚಿತ್ತಾರ ವೆಂಕಟೇಶ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವೆಂಕಟೇಶ್ ಚಿಕ್ಕಬಳ್ಳಾಪುರ ನಗರದ ಕೋಟೆ ನಿವಾಸಿ ಎಂದು ತಿಳಿದು ಬಂದಿದೆ.