• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಮಹಿಳಾ ಪ್ರಧಾನ ಮರ್ಡರ್ ಮಿಸ್ಟ್ರಿ; ಕ್ಯಾನ್ಬೆರಿ ಬೇಬೀಸ್’ಗೆ ಮುಹೂರ್ತ

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in ಸಿನಿಮಾ
0
ಮಹಿಳಾ ಪ್ರಧಾನ ಮರ್ಡರ್ ಮಿಸ್ಟ್ರಿ; ಕ್ಯಾನ್ಬೆರಿ ಬೇಬೀಸ್’ಗೆ ಮುಹೂರ್ತ
Share on WhatsAppShare on FacebookShare on Telegram

ಕನ್ನಡ ಚಿತ್ರರಂಗದಲ್ಲಿ ಮಹಿಳಾ ನಿರ್ದೇಶಕಿಯರ ಸಂಖ್ಯೆ ತೀರ ವಿರಳ ಎನ್ನಬಹುದು. ಇತ್ತೀಚೆಗೆ ಕೆಲ ಮಹಿಳಾ ತಂತ್ರಜ್ಞರುಗಳು ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅಂಥವರಲ್ಲಿ ಶ್ರೀಪಲ್ಲವಿ ಕೂಡ ಒಬ್ಬರು. ಇವರೊಂದು ಮಹಿಳಾ ಪ್ರಧಾನಸಸ್ಪೆನ್ಸ್, ಥ್ರಿಲ್ಲರ್, ಮರ್ಡರ್ ಮಿಸ್ಟ್ರಿ ಕಾನ್ಸೆಪ್ಟ್ ಇಟ್ಟುಕೊಂಡು “ಕ್ಯಾನ್ಬೆರಿ ಬೇಬೀಸ್” ಎಂಬ ಚಿತ್ರವನ್ನು ನಿರ್ದೇಶನ ಮಾಡಹೊರಟಿದ್ದಾರೆ.

ADVERTISEMENT

೫ ಜನ ಯುವತಿಯರ ಸುತ್ತ ನಡೆಯುವ ಕಥೆ ಹೊಂದಿದ ಕ್ಯಾನ್ಬೆರಿ ಬೇಬೀಸ್ ಚಿತ್ರದ ಮುಹೂರ್ತ ಸಮಾರಂಭ ಕಳೆದ ಗುರುವಾರ ಬೆಂಗಳೂರಿನ ಶ್ರೀ ಬಲಮುರಿ ಬಾಲಚಂದ್ರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕಿ ಶ್ರೀಪಲ್ಲವಿ ನಾನು ಚಿತ್ರರಂಗಕ್ಕೆ ಬಂದು ಎಂಟು ವರ್ಷವಾಯ್ತು. ಕೆಲ ಚಿತ್ರಗಳಿಗೆ ಅಸೋಸಿಯೇಟ್ ಆಗಿ ಕೆಲಸ ಮಾಡಿದ ನಂತರ ಮಾಯಾಜಾಲ ಎಂಬ ಸಿನಿಮಾ ಡೈರೆಕ್ಟ್ ಮಾಡಿದ್ದೆ. ಇದು ಎರಡನೇ ಚಿತ್ರ. ದೊಡ್ಡ ಕನಸಿಟ್ಟುಕೊಂಡು ಬೆಂಗಳೂರಿಗೆ ಬರುವ ಐವರು ಯುವತಿಯರು ಇಲ್ಲಿ ಬಂದಮೇಲೆ ಏನೆಲ್ಲ ತೊಂದರೆ ರಿಸ್ಕ್ ಗಳನ್ನು ಎದುರಿಸಿದರು ಎಂದು ಚಿತ್ರದಲ್ಲಿ ಹೇಳಿದ್ದೇವೆ. ಬೆಂಗಳೂರು ಸುತ್ತಮುತ್ತ 25ರಿಂದ 30 ದಿನಗಳ ಕಾಲ ಚಿತ್ರೀಕರಣ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದರು.

ನಂತರ ನಾಯಕಿಯರಾದ ನಂದಿನಿಗೌಡ, ರಕ್ಷಾ, ಸುಶ್ಮಿತಾಗೌಡ ತಮ್ಮ ಪಾತ್ರಗಳ ಕುರಿತಂತೆ ಮಾತನಾಡಿದರು. ಹಾಸ್ಯನಟ ವಿಜಯ್ ಚೆಂಡೂರ್ ಅವರು ಚಿತ್ರದ ಕಥೆಗೆ ಹೊಸ ತಿರುವು ಕೊಡುವ ಕಾನ್ಸ್ ಟೇಬಲ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮತ್ತೊಬ್ಬ ಹಿರಿಯ ನಟ, ಸಂಕಲನಕಾರ ನಾಗೇಂದ್ರ ಅರಸ್ ಈ ಚಿತ್ರದಲ್ಲಿ ಒಬ್ಬ ವಿಜ್ಞಾನಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡುತ್ತ ಪಲ್ಲವಿ ಅವರು ಒಳ್ಳೇ ಕಥೆ ಮಾಡಿಕೊಂಡಿದ್ದಾರೆ, ಅಲ್ಲದೆ ಅವರ ಪ್ರಯತ್ನಕ್ಕೆ ಸಪೋರ್ಟ್ ಮಾಡಬೇಕೆಂದು ಈ ಚಿತ್ರ ಒಪ್ಪಿದೆ. ಕನಸಿಟ್ಟುಕೊಂಡು ಬರುವ ಯುವತಿಯರು ತೊಂದರೆಯಲ್ಲಿದ್ದಾಗ ಅವರಿಗೆ ಸಹಾಯ ಮಾಡುವ ಸೈಂಟಿಸ್ಟ್ ಎಂದು ಹೇಳಿದರು.

ಇನ್ನು ಈ ಚಿತ್ರಕ್ಕೆ ಮಲ್ಲಿಕಾರ್ಜುನ್ ಅವರ ಛಾಯಾಗ್ರಹಣವಿದೆ. ಚಿತ್ರದ ನಾಲ್ಕು ಹಾಡುಗಳಿಗೆ ಎಸ್.ನಾಗು ಅವರ ಸಂಗೀತವಿದ್ದು, ರಾಮ್ ನಾರಾಯಣ್ ಸಾಹಿತ್ಯ ರಚಿಸಿದ್ದಾರೆ. ಎಸ್.ಎಸ್.ಈಶ್ವರ್ ಹಿನ್ನೆಲೆ ಸಂಗೀತ ಒದಗಿಸುತ್ತಿದ್ದಾರೆ. ಆರ್ಯನ್ ರೋಷನ್ ಅವರ ಕೊರಿಯೋಗ್ರಫಿ, ಧನುಷ್ ಅವರ ಸಂಕಲನ, ವೀರೇಶ್ ಅವರ ಕಲಾನಿರ್ದೇಶನ ಈ ಚಿತ್ರಕ್ಕಿದೆ.

Tags: Moviepallavi
Previous Post

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎಸ್ ಐಟಿ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಬೇಕು: ಬಸವರಾಜ ಬೊಮ್ಮಾಯಿ

Next Post

ಅಮೇಜಾನ್ ಪ್ರೈಮ್ ನಲ್ಲಿ ‘ಕಲ್ಕಿ 2898 AD’ ಚಿತ್ರದ B & B ಅನಿಮೇಷನ್‌ ಸಿರೀಸ್

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post
ಅಮೇಜಾನ್ ಪ್ರೈಮ್ ನಲ್ಲಿ ‘ಕಲ್ಕಿ 2898 AD’ ಚಿತ್ರದ B & B ಅನಿಮೇಷನ್‌ ಸಿರೀಸ್

ಅಮೇಜಾನ್ ಪ್ರೈಮ್ ನಲ್ಲಿ ‘ಕಲ್ಕಿ 2898 AD’ ಚಿತ್ರದ B & B ಅನಿಮೇಷನ್‌ ಸಿರೀಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada