ಉಡುಪಿ : ಕರಾವಳಿ ಜಿಲ್ಲೆಯಲ್ಲಿ ಟೆಂಪಲ್ ರನ್ ನಡೆಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಸಿಎಂ ಹೆಲಿಕಾಪ್ಟರ್ ಲ್ಯಾಂಡ್ ಆಗುವಾಗ ಹೆಲಿಪ್ಯಾಡ್ ಬಳಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಯು ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಅರೆಶಿರೂರಿನಲ್ಲಿ ಸಂಭವಿಸಿದೆ.

ಸಿಎಂ ಎಸ್ಕಾರ್ಟ್ ವಾಹನ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಹೆಲಿಕಾಪ್ಟರ್ ಫ್ಯಾನ್ ಗಾಳಿಗೆ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಟೆಂಪಲ್ ರನ್ ನಡೆಸುತ್ತಿರುವ ಸಿಎಂ ಬೊಮ್ಮಾಯಿ ಕೊಲ್ಲೂರು ಶ್ರೀ ಮೂಕಾಂಬಿಕಾ ಸನ್ನಿಧಿ, ಕಟೀಲು ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿ ಹಾಗೂ ಉಳ್ಳಾಲ ಸೋಮನಾಥ ಸೋಮೇಶ್ವರ ದೇಗುಲಕ್ಕೆ ಭೇಟಿ ನೀಡಿ ಬಳಿಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.